ಬಂಧನ online desk
ರಾಜ್ಯ

IPL ಟಿಕೆಟ್‌ ಮಾರಾಟ ದಂಧೆ: ಇಬ್ಬರು ಪೊಲೀಸರು ಸೇರಿದಂತೆ ನಾಲ್ವರ ಬಂಧನ

ಬಂಧನಕ್ಕೊಳಗಾಗಿರುವ ಇಬ್ಬರು ಪೊಲೀಸರನ್ನು ಸಂಚಾರ ನಿರ್ವಹಣಾ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವ ಪೊಲೀಸ್ ಕಾನ್‌ಸ್ಟೇಬಲ್‌ ವೆಂಕಟಗಿರಿ ಗೌಡ ಮತ್ತು ಹಲಸೂರು ಸಂಚಾರ ಪೊಲೀಸ್ ಠಾಣೆಗೆ ಸೇರಿದ ರವಿಚಂದ್ರ ಎಂದು ಗುರುತಿಸಲಾಗಿದೆ.

ಬೆಂಗಳೂರು: ಮೇ 17 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಮತ್ತು ಕೆಕೆಆರ್ ನಡುವಿನ ಪಂದ್ಯದ ಐಪಿಎಲ್ ಟಿಕೆಟ್‌ಗಳನ್ನುಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಪೊಲೀಸರು ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬಂಧನಕ್ಕೊಳಗಾಗಿರುವ ಇಬ್ಬರು ಪೊಲೀಸರನ್ನು ಸಂಚಾರ ನಿರ್ವಹಣಾ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವ ಪೊಲೀಸ್ ಕಾನ್‌ಸ್ಟೇಬಲ್‌ ವೆಂಕಟಗಿರಿ ಗೌಡ ಮತ್ತು ಹಲಸೂರು ಸಂಚಾರ ಪೊಲೀಸ್ ಠಾಣೆಗೆ ಸೇರಿದ ರವಿಚಂದ್ರ ಎಂದು ಗುರುತಿಸಲಾಗಿದೆ. ಇತರ ಇಬ್ಬರು ಆರೋಪಿಗಳನ್ನು ಶಂಕರ್ ಮತ್ತು ಸುರೇಶ್ ಎಂದು ಗುರುತಿಸಲಾಗಿದೆ.

ಪಂದ್ಯದ ದಿನದಂದು ಸಂಜೆ 4 ಗಂಟೆ ಸುಮಾರಿಗೆ ವಿಜಯನಗರದ ನಚಿಕೇತ ಪಾರ್ಕ್ ಆಟದ ಮೈದಾನದ ಬಳಿ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದಾಗ ಗೋವಿಂದರಾಜ ನಗರ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದರು.

ಈ ವೇಳೆ ಪರಾರಿಯಾಗಿದ್ದ ಇಬ್ಬರು ಪೊಲೀಸರು ನಿರೀಕ್ಷಣಾ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದರು. ನಂತರ ಪೊಲೀಸರು ಬಂಧನದ ವಿಧಿವಿಧಾನಗಳನ್ನು ಪೂರ್ಣಗೊಳಿಸಿದ್ದು, ಆರೋಪಿಗಳಿಂದ ಸುಮಾರು 52 ಐಪಿಎಲ್ ಟಿಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಕಳೆದ ಒಂದು ವರ್ಷದಿಂದ ಕಮಿಷನ್ ಆಧಾರದ ಮೇಲೆ ಕಾಳಸಂದತೆಯಲ್ಲಿ ಟಿಕೆಟ್ ಮಾರಾಟ ಮಾಡಲು ಇಬ್ಬರು ಸಂಚಾರ ಪೊಲೀಸರು ಐಪಿಎಲ್ ಟಿಕೆಟ್‌ಗಳನ್ನು ನೀಡುತ್ತಿದ್ದರು ಎಂದು ಶಂಕರ್ ಮತ್ತು ಸುರೇಶ್ ಇಬ್ಬರೂ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ.

ಇಬ್ಬರು ಪೊಲೀಸರು ಐಪಿಎಲ್ ಟಿಕೆಟ್‌ಗಳನ್ನು ರೂ. 6500, ರೂ. 5500 ಮತ್ತು ರೂ. 5000 ಗೆ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದ್ದು, ಇಬ್ಬರನ್ನೂ ಅಮಾನತುಗೊಳಿಸಲಾಗಿದೆ. ಇತರೆ ಪೊಲೀಸರು ಭಾಗಿಯಾಗಿರುವ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Kurnool Bus Fire: ಆಂಧ್ರ ಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಹೈದರಾಬಾದ್-ಬೆಂಗಳೂರು ಖಾಸಗಿ ಬಸ್ ನಲ್ಲಿ ಭೀಕರ ಬೆಂಕಿ ಅವಘಡ: 21 ಮಂದಿ ಸಜೀವ ದಹನ-Video

ಕರ್ನೂಲ್ ಬಸ್ ದುರಂತ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ-ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ, 2 ಲಕ್ಷ ರೂ. ಪರಿಹಾರ ಘೋಷಣೆ

ಭಾರತದ ನಂತರ ಇದೀಗ ಅಪ್ಘಾನಿಸ್ತಾನದಿಂದಲೂ 'ಜಲಬಾಂಬ್': ಪಾಕಿಸ್ತಾನ ವಿಲವಿಲ!

Kurnool Bus Fire: ಬೆಂಗಳೂರಿನಲ್ಲಿ ನೆಲೆಸಿದ್ದ ನೆಲ್ಲೂರು ಮೂಲದ ಒಂದೇ ಕುಟುಂಬದ ನಾಲ್ವರು ಸಜೀವ ದಹನ!

'ಅಹಿಂದ ಕಿರೀಟ'ಕ್ಕಾಗಿ ಕಚ್ಚಾಟ; ಸಿದ್ದರಾಮಯ್ಯ ಸೈದ್ಧಾಂತಿಕ ಉತ್ತರಾಧಿಕಾರಿ ಪಟ್ಟಕ್ಕಾಗಿ ಕಿತ್ತಾಟ! ಒಳಗೊಳಗೆ ಖರ್ಗೆ ಕೊತ-ಕೊತ?

SCROLL FOR NEXT