ಪ್ರಾತಿನಿಧಿಕ ಚಿತ್ರ 
ರಾಜ್ಯ

Covid-19: ರಾಜ್ಯದಲ್ಲಿ ಇಂದು ಕೊರೋನಾಗೆ ಮತ್ತೊಬ್ಬರು ಬಲಿ, 114 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 114 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 234ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಇಂದು ಒಟ್ಟು 460 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆ ಪೈಕಿ 114 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಒಟ್ಟು 234 ಸಕ್ರಿಯೆ ಪ್ರಕರಣಗಳಿದ್ದು, 223 ಮಂದಿ ಮನೆ ಆರೈಕೆಯಲ್ಲಿದ್ದು, 10 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಒಬ್ಬರು ಕೃತಕ ಆಮ್ಲಜನಕದ ಬೆಂಬಲದಲ್ಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಆರೋಗ್ಯ ಇಲಾಖೆ ಕೋವಿಡ್ ಪರಿಸ್ಥಿತಿಯ ನಿಗಾ ವಹಿಸಿದ್ದು, ಹತೋಟಿಗೆ ತರಲು ಕ್ರಮಗಳನ್ನ ಕೈಗೊಳ್ಳುತ್ತಿದೆ. ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಎಂದು ಆರೋಗ್ಯ ಸಚಿವರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ಸೀತಾಪುರದಲ್ಲಿ ವಿಚಿತ್ರ ಪ್ರಕರಣ: ಹಗಲು ಪ್ರೇಮಿ, ರಾತ್ರಿ ಗಂಡ ಬೇಕಂತೆ! ಇಬ್ಬರ ಜತೆ ಸಂಸಾರ ನಡೆಸಲು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ! Video

‘ಏನೇನ್ ಮಾಡ್ತಾರೋ ಗೊತ್ತಿಲ್ಲ’: Donald Trump ‘ಅನಿರೀಕ್ಷಿತ ವರ್ತನೆ’ ಬಗ್ಗೆ ಎಚ್ಚರಿಕೆ: ಮೋದಿ ಭೇಟಿ ಬಳಿಕ ಜಂಟಿ ಸುದ್ದಿಗೋಷ್ಠಿಗೆ ಭಾರತ ಹಿಂದೇಟು!

ಪ್ರತಿಪಕ್ಷಗಳ ಪ್ರತಿಭಟನೆ, ಗದ್ದಲದ ನಡುವೆ ಯಾವುದೇ ಚರ್ಚೆಯಿಲ್ಲದೇ ವಿಧಾನ ಪರಿಷತ್ತಿನಲ್ಲಿ ಎರಡು ವಿಧೇಯಕಗಳು ಪಾಸ್

Biggboss Kannada ಅಗ್ನಿಪರೀಕ್ಷೆ: ಗೆಟ್ ಔಟ್, ಇದೆಲ್ಲಾ ಬೇಡ ಬ್ರೋ; ವಿನಯ್ ಗೌಡಗೆ ಸ್ಪರ್ಧಿ ತಿರುಗೇಟು, Video ವೈರಲ್!