ಸಂಗ್ರಹ ಚಿತ್ರ 
ರಾಜ್ಯ

Bakrid 2025: ಅಕ್ರಮ ಗೋ ಹತ್ಯೆ-ಗೋವುಗಳ ಸಾಗಾಟಕ್ಕೆ ಸರ್ಕಾರ ಬ್ರೇಕ್, ಸಮಿತಿ ರಚನೆ

ಆರ್‌ಟಿಒ, ಸಾರಿಗೆ ಇಲಾಖೆ, ಪೊಲೀಸ್ ಮತ್ತು ಪುರಸಭೆಯ ಅಧಿಕಾರಿಗಳು ಪ್ರಾಣಿಗಳ ಸಾಗಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು.

ಬೆಂಗಳೂರು: ಮುಸ್ಲಿಂ ಬಾಂಧವರು ತ್ಯಾಗದ ಸಂಕೇತವಾಗಿ ಆಚರಿಸುವ ಬಕ್ರೀದ್ ಹಬ್ಬಕ್ಕೆ ಇನ್ನು ಕೆಲವೇ ದಿನಗಲು ಬಾಕಿಯಿದ್ದು, ಈ ನಡುವಲ್ಲೇ ಗೋ ಹತ್ಯೆ-ಗೋವುಗಳ ಅಕ್ರಮ ಸಾಗಾಟ ತಡೆಯಲು ರಾಜ್ಯ ಸರ್ಕಾರ ಮುಂದಾಗಿದ್ದು, ಬೆಂಗಳೂರು ನಗರ ಉಪ ಆಯುಕ್ತರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿದೆ.

ಗೋವು ಮತ್ತು ಒಂಟೆಗಳನ್ನು ವಧೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, 13 ವರ್ಷಕ್ಕಿಂತ ಮೇಲ್ಪಟ್ಟ ಕುರಿ, ಮೇಕೆ ಮತ್ತು ಎಮ್ಮೆಗಳನ್ನು ಮಾತ್ರ ವಧೆ ಮಾಡಲು ಅವಕಾಶವಿದೆ ಎಂದು ಬಿಬಿಎಂಪಿ ಈಗಾಗಲೇ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.

ಆರ್‌ಟಿಒ, ಸಾರಿಗೆ ಇಲಾಖೆ, ಪೊಲೀಸ್ ಮತ್ತು ಪುರಸಭೆಯ ಅಧಿಕಾರಿಗಳು ಪ್ರಾಣಿಗಳ ಸಾಗಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಯಾರಾದರೂ ಜಾನುವಾರುಗಳನ್ನು ವಧೆ ಮಾಡುತ್ತಿರುವುದು ಕಂಡುಬಂದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಗೋವು ಅಥವಾ ಒಂಟೆಗಳನ್ನು ಅಕ್ರಮವಾದಿ ಸಾಗಾಟ ಮಾಡುತ್ತಿರುವುದು ಕಂಡು ಬಂದರೆ ಪ್ರಾಣಿಗಳನ್ನು ವಶಪಡಿಸಿಕೊಳ್ಳಲಾಗುತ್ತದೆ ಮತ್ತು ಪ್ರಕರಣಗಳನ್ನು ದಾಖಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT