ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ ಮಹೇಶ್ ಜೋಶಿ 
ರಾಜ್ಯ

ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ಸಚಿವ ಸ್ಥಾನಮಾನ ಹಿಂಪಡೆದ ರಾಜ್ಯ ಸರ್ಕಾರ

ಕೆಲವು ಸಾಹಿತಿಗಳು ಮಹೇಶ್ ಜೋಶಿ ಅವರ ಕಾರ್ಯವೈಖರಿ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು.

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಾಗೂ ಸವಲತ್ತುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಹಿಂಪಡೆದಿದೆ.

ಕೆಲವು ಸಾಹಿತಿಗಳು ಮಹೇಶ್ ಜೋಶಿ ಅವರ ಕಾರ್ಯವೈಖರಿ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನದಿಂದ ಅವರನ್ನು ಕೆಳಗಿಳಿಸಬೇಕು ಎಂದು ಕೋರಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಅವರಿಗೆ ನೀಡಿದ್ದ ಸಚಿವ ಸ್ಥಾನಮಾನವನ್ನು ಹಿಂಪಡೆದಿದೆ.

ನಾಡೋಜ ಡಾ. ಮಹೇಶ್ ಜೋಶಿ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಾಗೂ ಸವಲತ್ತುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ-2 ಬಾಣದರಂಗಯ್ಯ ಎನ್.ಆರ್. ಅವರು ಆದೇಶ ಹೊರಡಿಸಿದ್ದಾರೆ.

ಸರ್ಕಾರಿ ಆದೇಶ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕೊಪ್ಪಳದ ಗಂಗಾವತಿಯಲ್ಲಿ ಹರಿಯಿತು ನೆತ್ತರು: BJP ಯುವ ಮೋರ್ಚಾ ಅಧ್ಯಕ್ಷನ ಬರ್ಬರ ಹತ್ಯೆ

ಮಧ್ಯಪ್ರದೇಶ: ಕಾಫ್ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯ; ಚಿಕಿತ್ಸೆ ಪಡೆಯುತ್ತಿದ್ದ 6 ಮಕ್ಕಳ ಮರಣ; ಸಾವಿನ ಸಂಖ್ಯೆ 20ಕ್ಕೆ ಏರಿಕೆ

BiggBoss Kannada: ಬಿಗ್ ಬಾಸ್ 12 ಮನೆಗೆ ಬೀಗಮುದ್ರೆ, ಜಾಲಿವುಡ್ ಸ್ಟುಡಿಯೋಸ್ ಇಂದು ಹೈಕೋರ್ಟ್ ಮೊರೆ?

ರಾಜಕೀಯ ಒತ್ತಡಕ್ಕೆ ಮಣಿದು ಆತುರಾತುರವಾಗಿ ಸಮೀಕ್ಷೆ ನಡೆಸುತ್ತಿದ್ದಾರೆ: BJP ಟೀಕೆ

ನಮ್ಮ ಮೆಟ್ರೋಗೆ ವಾಲ್ಮೀಕಿ ಹೆಸರಿಡಲು ಕೇಂದ್ರಕ್ಕೆ ಒತ್ತಾಯ: ಸಿಎಂ ಸಿದ್ದರಾಮಯ್ಯ

SCROLL FOR NEXT