ಸಂಗ್ರಹ ಚಿತ್ರ 
ರಾಜ್ಯ

70ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: ಎಲ್ಲೆಡೆ ಕನ್ನಡದ ಕಂಪು; ಕಂಠೀರವ ಸ್ಟೇಡಿಯಂನಲ್ಲಿ ಸಕಲ ಸಿದ್ಧತೆ

ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡ ಧ್ವಜಾರೋಹಣ ಮಾಡಲಿದ್ದು, ನಂತರ ರಾಜ್ಯವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಬೆಂಗಳೂರು: ರಾಜ್ಯಾದ್ಯಂತ 70ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ರಾಜ್ಯೋತ್ಸವ ಆಚರಣೆಗೆ ನಗರದ ಕಂಠೀರವ ಸ್ಟೇಡಿಯಂನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಹಲವು ಜನರು ಆಗಮಿಸುವ ಹಿನ್ನೆಲೆಯಲ್ಲಿ ಸ್ಟೇಡಿಯಂ ಸುತ್ತಮುತ್ತಲೂ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ.

ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡ ಧ್ವಜಾರೋಹಣ ಮಾಡಲಿದ್ದು, ನಂತರ ರಾಜ್ಯವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಕಂಠೀರವ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮ ಇರುವ ಹಿನ್ನೆಲೆ ನಗರ ಸಂಚಾರ ಪೊಲೀಸರು ಸುತ್ತಮುತ್ತಲಿನ ಕೆಲವು ರಸ್ತೆಗಳಲ್ಲಿ ವಾಹನ ನಿಲುಗಡೆಗೆ ನಿರ್ಬಂಧ ಹೇರಿದ್ದಾರೆ.

ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಅತಿಥಿಗಳು, ಶಾಲಾ ಮಕ್ಕಳು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

JPSC-PT ರದ್ದುಗೊಳಿಸಲು ಜಾರ್ಖಂಡ್ ಸರ್ಕಾರ ಒಪ್ಪಿದರೂ 6ನೇ ಸುತ್ತಿನ ಮಾತುಕತೆ ವಿಫಲ; ಪ್ರತಿಭಟನೆ ಮುಂದುವರಿಕೆ!

"ಹಮಾಸ್ ನಿಶ್ಯಸ್ತ್ರಗೊಳಿಸುವುದೇ ಅಂತಿಮ ಗುರಿ": ಟ್ರಂಪ್ ಗಾಜಾ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್!

ಪಾಕಿಸ್ತಾನಿಗಳು ಭಾರತೀಯರ ಸಂಪೂರ್ಣ ಬದ್ಧ ವೈರಿಗಳಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ಆಗಸ್ಟ್ 13ರಿಂದ ವಿಧಾನಮಂಡಲ ಅಧಿವೇಶನ: ಟಿ.ಬಿ ಜಯಚಂದ್ರ ಹಂಗಾಮಿ ಸಭಾಧ್ಯಕ್ಷ

ರಷ್ಯಾ-ಭಾರತ ನಡುವೆ ನೇರ ರೈಲು ಸಂಪರ್ಕ? ರಷ್ಯಾದಿಂದ ಮಹತ್ವದ ಪ್ರಸ್ತಾವನೆ!