ಬೆಂಗಳೂರು: ಆಳಂದ ಮತಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಮತ್ತು ಅವರ ಪುತ್ರ ಹರ್ಷ ಗುತ್ತೇದಾರ್ ಅವರಿಗೆ ನಗರದ ವಿಶೇಷ ನ್ಯಾಯಾಲಯವು ಶುಕ್ರವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಸಿಐಡಿ ನೋಟಿಸ್ ಹಿನ್ನೆಲೆ ಬಂಧನ ಭೀತಿಯಿಂದ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಈ ಕುರಿತ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು, ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.
ಅರ್ಜಿದಾರರು ರೂ.1 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್‌ಇಷ್ಟೇ ಮೊತ್ತಕ್ಕೆ ಒಬ್ಬರ ಖಾತ್ರಿ ನೀಡಬೇಕು. ಇದಲ್ಲದೆ, ಅರ್ಜಿದಾರರು ಅಕ್ಟೋಬರ್ 31 ರಿಂದ 10 ದಿನಗಳ ಒಳಗೆ ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು, ತನಿಖೆಗೆ ಸಹಕರಿಸಬೇಕು ಮತ್ತು ನ್ಯಾಯಾಲಯದಿಂದ ಲಿಖಿತ ಅನುಮತಿ ಪಡೆಯದೆ ದೇಶ ಬಿಟ್ಟು ಹೋಗಬಾರದು ಎಂಬುದೂ ಸೇರಿದಂತೆ ನಿಯಮಿತ ಷರತ್ತುಗಳನ್ನು ವಿಧಿಸಿದೆ