ಸಿಎಂ ಸಿದ್ದರಾಮಯ್ಯ 
ರಾಜ್ಯ

ಹೊರರಾಜ್ಯದಿಂದ ಬಂದು ಇಲ್ಲಿ ಬದುಕು ಕಟ್ಟಿಕೊಂಡವರು ಕನ್ನಡ ಭಾಷೆಯಲ್ಲೇ ವ್ಯವಹರಿಸಬೇಕು: ಸಿಎಂ ಸಿದ್ದರಾಮಯ್ಯ

ಕನ್ನಡ ಮಣ್ಣಿನಲ್ಲೇ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಬಂದು ಇಲ್ಲಿ ಬದುಕು ಕಟ್ಟಿಕೊಂಡವರು ಕನ್ನಡ ಭಾಷೆಯಲ್ಲೇ ವ್ಯವಹರಿಸಬೇಕು ಎಂಬುದು ನಮ್ಮ ಆಶಯ.

ಬೆಂಗಳೂರು: ಕನ್ನಡ ಮಣ್ಣಿನಲ್ಲೇ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಬಂದು ಇಲ್ಲಿ ಬದುಕು ಕಟ್ಟಿಕೊಂಡವರು ಕನ್ನಡ ಭಾಷೆಯಲ್ಲೇ ವ್ಯವಹರಿಸಬೇಕು ಎಂಬುದು ನಮ್ಮ ಆಶಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.

70ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕನ್ನಡ ಮಣ್ಣಿನಲ್ಲೇ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಬಂದು ಇಲ್ಲಿ ಬದುಕು ಕಟ್ಟಿಕೊಂಡವರು ಕನ್ನಡ ಭಾಷೆಯಲ್ಲೇ ವ್ಯವಹರಿಸಬೇಕು ಎಂಬುದು ನಮ್ಮ ಆಶಯ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಇರುವ ಎಲ್ಲಾ ಕಚೇರಿಗಳು, ಅಂಗಡಿ - ಮುಂಗಟ್ಟುಗಳು, ವಿವಿಧ ವಾಣಿಜ್ಯೋದ್ಯಮ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು ಎಂಬ ಆದೇಶವನ್ನು ಹೊರಡಿಸಿದ್ದೇವೆ. ಬೇರೆ ಭಾಷೆಗಳನ್ನು ಗೌರವಿಸೋಣ. ನೆಲದ ಭಾಷೆ ಕನ್ನಡವನ್ನು ಪ್ರೀತಿಸೋಣ ಎಂದು ಹೇಳಿದ್ದಾರೆ.

ಮತ್ತೊಂದು ಪೋಸ್ಟ್ ನಲ್ಲಿ ಕನ್ನಡ ರಾಜ್ಯೋತ್ಸವ ಎನ್ನುವುದು ಕೇವಲ ಉತ್ಸವ ಅಲ್ಲ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿರುವ ಕನ್ನಡಿಗರು ಕನ್ನಡದ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನ. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ಈ ದಿನ ಹೆಮ್ಮೆಯಿಂದ ಸ್ಮರಿಸೋಣ.

ಹೊರ ರಾಜ್ಯಗಳಿಂದ, ಹೊರ ದೇಶಗಳಿಂದ ಶಿಕ್ಷಣ, ಉದ್ಯೋಗ ಇನ್ನಿತರೆ ಕಾರಣಗಳಿಗಾಗಿ ಇಲ್ಲಿ ನೆಲೆಸಿರುವ, ಬದುಕು ಕಟ್ಟಿಕೊಂಡಿರುವ ಎಲ್ಲರೂ ಕನ್ನಡಿಗರೇ, ನಮ್ಮವರೇ. ನಾವು - ನೀವು ಎಲ್ಲರೂ ಸೇರಿ ಕನ್ನಡವನ್ನು ಬಳಸುವ, ಬೆಳೆಸುವ ಸಂಕಲ್ಪವನ್ನು ಈ ದಿನ ಸ್ವೀಕರಿಸೋಣ. ನೆಲದ ಭಾಷೆ ಮನದ ಭಾಷೆಯಾಗಲಿ, ಕನ್ನಡದ ಚಿಗುರು ಎಲ್ಲರೆದೆಯೊಳಗೆ ಮೊಳಕೆಯೊಡೆಯಲಿ ಎಂದು ತಿಳಿಸಿದ್ದಾರೆ.

ಮೈಸೂರಿನಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಾಣ

ಇದೇ ವೇಳೆ ಕರ್ನಾಟಕವೇ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ ಸಿಟಿಯನ್ನು(ಚಿತ್ರ ನಗರಿ) ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆಂದು ಹೇಳಿದ್ದಾರೆ.

ತಂತ್ರಜ್ಞಾನದ ಅವಕಾಶಗಳನ್ನು ಬಳಸಿಕೊಂಡು ಉತ್ತಮ‌ ಸಿನಿಮಾಗಳನ್ನು ಮಾಡಿದರೆ ಸಮಾಜಕ್ಕೆ ಒಳ್ಳೆಯದಾಗುತ್ತದೆ. ಸಿನಿಮಾ ಕ್ಷೇತ್ರವೂ ಪ್ರಗತಿ ಕಾಣುತ್ತದೆ. ಮಾನವೀಯ ಮೌಲ್ಯಗಳನ್ನು ಬೆಸೆಯುವ ಕನ್ನಡ ಸಿನಿಮಾಗಳು ವಿಶ್ವದರ್ಜೆಯ ಗುಣಮಟ್ಟದಲ್ಲಿ ಇಲ್ಲಿ ನಿರ್ಮಾಣ ಆಗಬೇಕು ಎಂಬುದು ನಮ್ಮ ಆಶಯ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೊಂದು ಕಾಲ್ತುಳಿತ ಪ್ರಕರಣ: 10 ಭಕ್ತರ ಸಾವು, ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇಗುಲದಲ್ಲಿ ದುರಂತ!

ತೆಲಂಗಾಣ ಕಲ್ಯಾಣ ಹಾಸ್ಟೆಲ್‌ನಲ್ಲಿ ವಿಷಾಹಾರ ಸೇವನೆ; 52 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ತುಳಸಿ ಪೂಜೆ 2025: ಹಬ್ಬ ಯಾವಾಗ? ಪೂಜೆಗೆ ಶುಭ ಮುಹೂರ್ತ ಮತ್ತು ಮಹತ್ವ, ವಿಧಿವಿಧಾನ

ದೇಶದ ಮೊದಲ ಕಡುಬಡತನ ಮುಕ್ತ ರಾಜ್ಯ ಕೇರಳ: ವಿಧಾನಸಭೆಯಲ್ಲಿ ಸಿಎಂ ಪಿಣರಾಯಿ ಘೋಷಣೆ

ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ, ಇಂದಿನಿಂದಲೇ ನೂತನ ದರ ಜಾರಿ!

SCROLL FOR NEXT