ಡಿಕೆ ಶಿವಕುಮಾರ್- ತೇಜಸ್ವಿ ಸೂರ್ಯ online desk
ರಾಜ್ಯ

'ತೇಜಸ್ವಿ ಸೂರ್ಯ ಫ್ಲೈಟ್ ಡೋರ್ ಓಪನ್ ಮಾಡಿದ ದೊಡ್ಡ ಲೀಡರ್: ಅಮೆರಿಕಾಗೆ ಹೋಗಿ ಟ್ರಂಪ್ ಬಳಿ ಉಗಿಸಿಕೊಂಡು ಬಂದ- ಈಗ ರೈಲು ಮಾಡಿ ಅಂತಾನೆ'

ಎಸ್.ಎಂ.ಕೃಷ್ಣ ಕಾಲದಲ್ಲಿ 10 ದೇಶ ತಿರುಗಿ ನಾನು ವರದಿ ಕೊಟ್ಟೆ. ಕೇಂದ್ರದಲ್ಲಿ ವಾಜಪೇಯಿ, ಅನಂತ್‌ಕುಮಾರ್‌ಗೆ ವರದಿ ಕೊಟ್ಟು ಬಂದಿದ್ದೆವು. ಜಾರ್ಜ್ ಕಾಲದಲ್ಲಿ ಸ್ಟೀಲ್ ಫ್ಲೈಓವರ್‌ಗೆ ವಿರೋಧ ಮಾಡಿದ್ರು ಎಂದು ಕಿಡಿಕಾರಿದರು.

ಬೆಂಗಳೂರು: ಲಾಲ್‌ಬಾಗ್ ಹಾಳು ಮಾಡೋದಕ್ಕೆ ನಾನು ಮೂರ್ಖ ಅಲ್ಲ. ನನಗೂ ಲಾಲ್‌ಬಾಗ್ ಇತಿಹಾಸ ಗೊತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ಕೊಟ್ಟಿದ್ದಾರೆ.

ಟನಲ್ ವಿರೋಧಿಸಿ ಬಿಜೆಪಿಯಿಂದ ಸಹಿ ಸಂಗ್ರಹ ಕುರಿತು ಪ್ರತಿಕ್ರಿಯಿಸಿದ ಅವರು, ಒಳ್ಳೆಯದು ಮಾಡಲಿ, ಜಾಗೃತಿ ಮೂಡಿಸಲಿ. ಅಶೋಕ್ ಅಧ್ಯಕ್ಷತೆಯಲ್ಲೇ ಸಮಿತಿ ಮಾಡುತ್ತೇವೆ. ನಾನು ಸಿದ್ಧನಿದ್ದೇನೆ, ಯಾರ‍್ಯಾರು ಸದಸ್ಯರು ಬೇಕು ಎಂದು ಅವರೇ ಹೇಳಲಿ. ಇದು ನನ್ನ ಆಸ್ತಿಯಲ್ಲ ಅಥವಾ ಯಾರ ಆಸ್ತಿಯೂ ಅಲ್ಲ. ಇದು ಸಾರ್ವಜನಿಕರಿಗಾಗಿ ಮಾಡುತ್ತಿರುವ ಯೋಜನೆ. ನಾನು ಎಲ್ಲಾ ಅಧ್ಯಯನ ಮಾಡಿದ್ದೇನೆ ಎಂದರು.

ಲಾಲ್‌ಬಾಗ್‌ನಲ್ಲಿ ಎಷ್ಟು ಜಾಗ ಉಪಯೋಗ ಆಗ್ತಿದೆ, ಎಷ್ಟು ಉಪಯೋಗ ಆಗ್ತಿಲ್ಲ ಎಲ್ಲಾ ಗೊತ್ತಿದೆ. ಅವರು ರಾಜಕಾರಣ ಮಾಡಬೇಕು. ಅವರದ್ದು ರಾಜಕಾರಣ, ಯಾವುದೇ ಅಭಿವೃದ್ಧಿ ಬೇಕಿಲ್ಲ. ಟನಲ್ ಮಾಡಿದ್ದಕ್ಕೆ ಅಲ್ವಾ ಮೆಟ್ರೋ ಮಾಡಲು ಆಗಿದ್ದು.ಬಿಜೆಪಿಯವರು ತಂದಿದ್ದಾ ಮೆಟ್ರೋ? ದಾಖಲೆ ತೆಗೆಸಿ ನೋಡಲಿ. ಎಸ್.ಎಂ.ಕೃಷ್ಣ ಕಾಲದಲ್ಲಿ 10 ದೇಶ ತಿರುಗಿ ನಾನು ವರದಿ ಕೊಟ್ಟೆ. ಕೇಂದ್ರದಲ್ಲಿ ವಾಜಪೇಯಿ, ಅನಂತ್‌ಕುಮಾರ್‌ಗೆ ವರದಿ ಕೊಟ್ಟು ಬಂದಿದ್ದೆವು. ಜಾರ್ಜ್ ಕಾಲದಲ್ಲಿ ಸ್ಟೀಲ್ ಫ್ಲೈಓವರ್‌ಗೆ ವಿರೋಧ ಮಾಡಿದ್ರು ಎಂದು ಕಿಡಿಕಾರಿದರು.

ಎಂಪಿ ರೈಲು ಮಾಡಿ ಅಂತಾನೆ, ಎಲ್ಲಿದೆ ಜಾಗ? ಕೇಂದ್ರ ಸರ್ಕಾರ ಮಾಡಲಿ. ಟ್ರಾಯ್ ವ್ಯವಸ್ಥೆ ಮಾಡಿ ಅಂತಾರೆ, ದಿನಕ್ಕೆ 100 ಜನ ಸಾಯ್ತಾರೆ ಅಷ್ಟೇ. ಪ್ರಾಯೋಗಿಕವಾಗಿ ಅದು ಸಾಧ್ಯವಿಲ್ಲ. ತೇಜಸ್ವಿ ಸೂರ್ಯ ದೊಡ್ಡ ಲೀಡರ್, ಬಹಳ ಬುದ್ಧಿವಂತ, ಫ್ಲೈಟ್ ಡೋರ್ ಓಪನ್ ಮಾಡ್ಬಿಟ್ಟ. ಕಾರು ಬೇಡ ಅಂತಿದ್ದ, ಆಮೇಲೆ ಮದ್ವೆ ಆಗ್ತಾ ಇದೀನಿ ಹೊಸ ಕಾರು ಬೇಕು ಅಂತಾ ಅರ್ಜಿ ಹಾಕಿದ್ದ. ಅಮೆರಿಕಕ್ಕೆ ಹೋಗಿ ಟ್ರಂಪ್ ಬಳಿ ಉಗಿಸಿಕೊಂಡ. ಅನುಮತಿ ಇಲ್ಲದೆ ಹೋಗಿ ಉಗಿಸಿಕೊಂಡು ಬಂದ. ನಿನಗ್ಯಾಕೆ ಹೊಸ ಕಾರು ಬೇಕಿತ್ತು? ನೀನು ಮೆಟ್ರೋದಲ್ಲಿ ಓಡಾಡು. ಎಲ್ಲಾ ಬಿಜೆಪಿಯವರು ಕಾರು ಬಿಟ್ಟು ಓಡಾಡಲಿ ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೊಂದು ಭೀಕರ ದುರಂತ: ಪ್ರಯಾಣಿಕ ಬಸ್ ಗೆ ಟ್ರಕ್ ಢಿಕ್ಕಿ, 18 ಮಂದಿ ಸಾವು

ಮಹಿಳಾ ವಿಶ್ವಕಪ್ ಫೈನಲ್: ದ.ಆಫ್ರಿಕಾದಿಂದ ಗೆಲುವು ಕಸಿದ ಅದ್ಭುತ ಕ್ಯಾಚ್...! Video

Cricket: ವಿಶ್ವ ಚಾಂಪಿಯನ್ ಭಾರತ ವನಿತೆಯರ ತಂಡಕ್ಕೆ ಬಹುಮಾನ ಘೋಷಿಸಿದ BCCI, ಮೊತ್ತ ಎಷ್ಟು ಗೊತ್ತಾ?

ಆಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪನ: ಕನಿಷ್ಟ 7 ಸಾವು, ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲು

Cricket: ವಿಶ್ವ ಚಾಂಪಿಯನ್ ಭಾರತ ವನಿತೆಯರಿಗೆ ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಶ್ಲಾಘನೆ.. ಯಾರು ಏನು ಹೇಳಿದರು?

SCROLL FOR NEXT