ಜಮೀರ್ ಅಹಮದ್ ಖಾನ್ 
ರಾಜ್ಯ

ರಾಜ್ಯದ ಉರ್ದು ಶಾಲೆಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ: ಜಮೀರ್ ಅಹಮದ್ ಖಾನ್

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮನವಿಯಂತೆ ಮದರಸಗಳಲ್ಲಿ 90 ದಿನದಲ್ಲಿ ಕನ್ನಡ ಕಲಿಸುವ ಯೋಜನೆ ಆರಂಭವಾಗಿದೆ. ಉರ್ದು ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ, ಇಂಗ್ಲಿಷ್ ಭಾಷೆ ಕಲಿಸಲು ಆದೇಶಿಸಿದೆ’ ಎಂದರು.

ಹೊಸಪೇಟೆ: ರಾಜ್ಯದಲ್ಲಿ ಎಲ್ಲರೂ ಕನ್ನಡ ಕಲಿಯಬೇಕು ಎಂಬ ಉದ್ದೇಶದಿಂದ ಎಲ್ಲ ಮದರಸ ಮತ್ತು ಉರ್ದು ಶಾಲೆಗಳಲ್ಲಿ ಕನ್ನಡ ಕಲಿಕೆ ಆರಂಭಿಸಲಾಗಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.

ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,‘ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮನವಿಯಂತೆ ಮದರಸಗಳಲ್ಲಿ 90 ದಿನದಲ್ಲಿ ಕನ್ನಡ ಕಲಿಸುವ ಯೋಜನೆ ಆರಂಭವಾಗಿದೆ. ಉರ್ದು ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ, ಇಂಗ್ಲಿಷ್ ಭಾಷೆ ಕಲಿಸಲು ಆದೇಶಿಸಿದೆ’ ಎಂದರು.

ಕರ್ನಾಟಕದಲ್ಲಿದ್ದು, ಕನ್ನಡ ಕಲಿಯದಿದ್ದರೆ ಇಷ್ಟು ವರ್ಷಗಳಿಂದ ಇಲ್ಲಿಯೇ ಇದ್ದರೂ ಉಪಯೋಗವಿಲ್ಲ. ಹಾಗಾಗಿ ಎಲ್ಲ ಮದರಸಾಗಳಲ್ಲಿಯೂ ಕನ್ನಡ ಕಲಿಸುವ ವ್ಯವಸ್ಥೆ ಮಾಡಲಾಗಿದೆ. ಸ್ವಾತಂತ್ರ‍್ಯ ಪೂರ್ವದಲ್ಲಿದ್ದ ಉರ್ದು ಶಾಲೆಗಳಲ್ಲಿ ಮೂರು ಭಾಷೆಗಳು ಕಡ್ಡಾಯ ಇದ್ದವು. ಅದೇ ರೀತಿ ಈಗ ಮೊದಲ ಭಾಷೆಯಾಗಿ ಕನ್ನಡ ತೆಗೆದುಕೊಳ್ಳಬೇಕು. ಎರಡನೇ ಭಾಷೆಯಾಗಿ ಉರ್ದು ಹಾಗೂ ಮೂರನೇ ಭಾಷೆಯಾಗಿ ಇಂಗ್ಲೀಷ್ ಭಾಷೆ ಆಯ್ಕೆ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್