ಹಸುವಿನ ಬಾಲ ಕತ್ತರಿಸಿದ ಕಿಡಿಗೇಡಿಗಳು 
ರಾಜ್ಯ

ಹೃದಯವಿದ್ರಾವಕ ಘಟನೆ, ಹಸುಗಳ ಬಾಲ ಕತ್ತರಿಸಿ ವಿಕೃತಿ, ಕಿಡಿಗೇಡಿಗಳ ವಿರುದ್ಧ ವ್ಯಾಪಕ ಆಕ್ರೋಶ

ತುಮಕೂರಿನ ಅಶೋಕ ನಗರದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಹಸುವಿನ ಬಾಲ ಕತ್ತರಿಸಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ.

ತುಮಕೂರು: ಮೂಕ ಜೀವಿಗಳ ಮೇಲಿನ ದುಷ್ಟ ಮಾನವನ ವಿಕೃತಿಗಳು ಮುಂದುವರೆದಿದ್ದು, ಈ ಹಿಂದೆ ಹಸುಗಳ ಕೆಚ್ಚಲು ಕೊಯ್ದಿದ್ದ ಘಟನೆ ಹಸಿರಾಗಿರುವಂತೆಯೇ ಇದೀಗ ಕಿಡಿಗೇಡಿಗಳು ಹಸುಗಳ ಬಾಲವನ್ನು ಕತ್ತರಿಸಿ ಹಾಕಿದ್ದಾರೆ.

ತುಮಕೂರಿನ ಅಶೋಕ ನಗರದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಹಸುವಿನ ಬಾಲ ಕತ್ತರಿಸಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ಮಾರಕಾಸ್ತ್ರಗಳಿಂದ ಹಸುವಿನ ಬಾಲ ಕೊಯ್ದು ಬಾಲ ಕೊಂಡೊಯ್ದಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಬೀಡಾಡಿ ಹಸುವೊಂದು ತುಮಕೂರು ನಗರ ಅಶೋಕ ನಗರ, ವಿದ್ಯಾನಗರ, ಎಸ್​​ಐಟಿ ಬಡಾವಣೆಗಳಲ್ಲಿ ಓಡಾಡಿಕೊಂಡಿತ್ತು. ಈ ಬಡಾವಣೆಯ ಅಂಗಡಿ ಮಾಲೀಕರು, ಮನೆಯವರು ಹಸುವಿಗೆ ಧಾನ್ಯವನ್ನು, ಹಣ್ಣುಗಳನ್ನು ಕೊಡುತಿದ್ದರು.

ಆದರೆ ಕೆಲ ದಿನಗಳ ಹಿಂದೆ ರಾತ್ರಿವೇಳೆ ಯಾರೋ ಕಿಡಿಗೇಡಿಗಳು ಹಸುವಿನ ಬಾಲವನ್ನು ಮಾರಕಾಸ್ತ್ರಗಳಿಂದ ಕತ್ತರಿಸಿದ್ದು, ಕೇವಲ ಹಸುವಿನ ಬಾಲ ಅಷ್ಟೇ ಅಲ್ಲ, ಪೃಷ್ಠ ಭಾಗಕ್ಕೂ‌ ಗಾಯಗೊಳಿಸಿ ವಿಕೃತಿ ಮೆರೆದಿದ್ದಾರೆ.

ಹಸುವಿಗೆ ತೀವ್ರ ರಕ್ತಸ್ರಾವ, ಬಜರಂಗದಳ ಕಾರ್ಯಕರ್ತರಿಂದ ರಕ್ಷಣೆ

ಇದನ್ನು ಕಂಡ ಸಾರ್ವಜನಿಕರು ಬಜರಂಗದಳ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಎಚ್ಚೆತ್ತ ಬಜರಂಗದಳ ಕಾರ್ಯಕರ್ತರು ಪಶು ವೈದ್ಯರನ್ನು ಕರೆ ತಂದು ಚಿಕಿತ್ಸೆ ಕೊಡಿಸಿದ್ದಾರೆ.

ಪಶು ವೈದ್ಯ ಸಿಬ್ಬಂದಿ ಭರತ್ ರಾಜ್​​ ಅವರು ಹಸುವಿನ ಬಾಲವನ್ನು ಕತ್ತರಿಸಲಾಗಿದೆ ಎಂದು ಖಾತ್ರಿ ಪಡಿಸಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಬಾಲ ಕತ್ತರಿಸಿದ ಬಳಿಕ ಗಾಯಗಳಾಗಿದ್ದು, ಬಾಲದ ಸುತ್ತ ಇನ್ಫೆಕ್ಷನ್ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಚುಚ್ಚು ಮದ್ದು ನೀಡಿದ್ದಾರೆ.

ಈ ಸಂಬಂಧ ತುಮಕೂರು ನ್ಯೂಟೌನ್ ಪೊಲೀಸರಿಗೆ ದೂರು ನೀಡಲಾಗಿದ್ದು, ಪೊಲೀಸರ ತನಿಖೆಯಿಂದಷ್ಟೇ ಘಟನೆಯ ಅಸಲಿ ಸಂಗತಿ ಬಯಲಾಗಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೊಂದು ಭೀಕರ ದುರಂತ: ಪ್ರಯಾಣಿಕ ಬಸ್ ಗೆ ಟ್ರಕ್ ಢಿಕ್ಕಿ, 18 ಮಂದಿ ಸಾವು

ಮಹಿಳಾ ವಿಶ್ವಕಪ್ ಫೈನಲ್: ದ.ಆಫ್ರಿಕಾದಿಂದ ಗೆಲುವು ಕಸಿದ ಅದ್ಭುತ ಕ್ಯಾಚ್...! Video

Cricket: ವಿಶ್ವ ಚಾಂಪಿಯನ್ ಭಾರತ ವನಿತೆಯರ ತಂಡಕ್ಕೆ ಬಹುಮಾನ ಘೋಷಿಸಿದ BCCI, ಮೊತ್ತ ಎಷ್ಟು ಗೊತ್ತಾ?

Video: ಟ್ರೋಫಿ ಸ್ವೀಕಾರ ವೇಳೆ ಕಾಲಿಗೆರಗಿದ ಟೀಂ ಇಂಡಿಯಾ ನಾಯಕಿ Harmanpreet Kaur, ಜಯ್ ಶಾ ಪ್ರತಿಕ್ರಿಯೆಗೆ ವ್ಯಾಪಕ ಮೆಚ್ಚುಗೆ!

ಆಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪನ: ಕನಿಷ್ಟ 7 ಸಾವು, ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲು

SCROLL FOR NEXT