ರೇಣುಕಾಸ್ವಾಮಿ ಕೊಲೆ ಆರೋಪಿಗಳು 
ರಾಜ್ಯ

ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದ ದರ್ಶನ್; ನಟನ ವಿರುದ್ಧ ಕೊಲೆ ಆರೋಪ ದಾಖಲಿಸಿದ ಕೋರ್ಟ್

ಆದರೆ ಎಲ್ಲಾ 17 ಆರೋಪಿಗಳು ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದಾರೆ. ಹೀಗಾಗಿ ಕೋರ್ಟ್ ವಿಚಾರಣೆಯನ್ನು ನವೆಂಬರ್ 10ಕ್ಕೆ ಮುಂದೂಡಿದೆ.

ಬೆಂಗಳೂರು: ತನ್ನ ಅಭಿಮಾನಿ ಚಿತ್ರದುರ್ಗದ ರೇಣುಕಸ್ವಾಮಿಯನ್ನು ಅಪಹರಿಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 64ನೇ ಸೆಷನ್ಸ್ ನ್ಯಾಯಾಲಯ ಸೋಮವಾರ ನಟ ದರ್ಶನ್, ಪವಿತ್ರಾ ಗೌಡ ಮತ್ತು ಇತರ 15 ಜನರ ವಿರುದ್ಧ ಹತ್ಯೆ, ಕ್ರಿಮಿನಲ್ ಪಿತೂರಿ, ಅಪಹರಣ ಮತ್ತು ಕಾನೂನುಬಾಹಿರ ಸಭೆ ಆರೋಪಗಳನ್ನು ಹೊರಿಸಿದೆ. ಆದರೆ ಎಲ್ಲಾ 17 ಆರೋಪಿಗಳು ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದಾರೆ. ಹೀಗಾಗಿ ಕೋರ್ಟ್ ವಿಚಾರಣೆಯನ್ನು ನವೆಂಬರ್ 10ಕ್ಕೆ ಮುಂದೂಡಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಎಲ್ಲಾ ಆರೋಪಿಗಳನ್ನು ಇಂದು ಕೋರ್ಟ್ ಗೆ ಹಾಜರುಪಡಿಸಲಾಯಿತು. ಕೋರ್ಟ್ ಹಾಲ್​​ನಲ್ಲಿ ಅನೇಕ ವಕೀಲರು ಹಾಗೂ ಜನ ಕಿಕ್ಕಿರಿದಿದ್ದರು. ಜನದಟ್ಟಣೆಯನ್ನು ನೋಡಿ ನಕ್ಕ ನ್ಯಾಯಾಧೀಶ ಐಪಿ ನಾಯಕ್ ಅವರು, ಕೇಸ್​​ಗೆ ಸಂಬಂಧ ಇರದ ಎಲ್ಲರೂ ಹೊರಗೆ ಹೋಗುವಂತೆ ಸೂಚಿಸಿದರು.

"ಇಲ್ಲಿ ಇಷ್ಟೊಂದು ಜನರ ನಡುವೆ ಆರೋಪಗಳನ್ನು ಹೊರಿಸಲು ಹೇಗೆ ಸಾಧ್ಯ?" ಪ್ರಕರಣಕ್ಕೆ ಸಂಬಂಧಿಸದ ವಕೀಲರು ಹೊರಗೆ ಹೋಗಬೇಕು ಸೂಚಿಸಿದರು. ಇಲ್ಲದಿದ್ದರೆ ವಿಚಾರಣೆಯನ್ನು ಮುಂದೂಡಲಾಗುವುದು ಎಂದು ಎಚ್ಚರಿಸಿದರು. ಆದರೂ ಕೂಡ ಗದ್ದಲ ನಿಲ್ಲಲಿಲ್ಲ. ಬಳಿಕ ಮುಚ್ಚಿದ ಕೊಠಡಿಯಲ್ಲಿ ವಿಚಾರಣೆ ನಡೆಸಲಾಯಿತು.

ಪ್ರಮುಖ ಆರೋಪಿ ಪವಿತ್ರಾ ಗೌಡಗೆ ನ್ಯಾಯಾಧೀಶರು ಒಂದಷ್ಟು ಪ್ರಶ್ನೆಗಳನ್ನು ಕೇಳಿದರು. ಕೊಲೆ, ಅಪಹರಣ, ಸಾಕ್ಷಿನಾಶ, ಅಕ್ರಮ ಕೂಟ, ಕ್ರಿಮಿನಲ್ ಒಳಸಂಚು ಸೇರಿದಂತೆ ಹಲವು ಆರೋಪಗಳನ್ನು ದರ್ಶನ್ ಮೇಲೆ ಹೊರಿಸಲಾಗಿದೆ. ನ್ಯಾಯಾಧೀಶರು ಎಲ್ಲ ಆರೋಪಿಗಳ ಎದುರು ದೋಷಾರೋಪಗಳನ್ನು ಓದಿ ಹೇಳಿದರು.

ಆರೋಪಿಗಳು ತಮ್ಮ ವಿರುದ್ಧದ ಆರೋಪಗಳನ್ನು ಒಪ್ಪಿಕೊಳ್ಳದ ಕಾರಣ ಸಾಕ್ಷ್ಯಗಳ ವಿಚಾರಣೆಗೆ ಕೋರ್ಟ್ ದಿನಾಂಕ ನಿಗದಿ ಮಾಡಿದೆ.

ನ್ಯಾಯಾಧೀಶರು ಮೊದಲ ಆರೋಪಿ ಪವಿತ್ರಾ ಗೌಡ ವಿರುದ್ಧದ ಆರೋಪಗಳನ್ನು ಓದಲು ಪ್ರಾರಂಭಿಸಿದರು. ರೇಣುಕಸ್ವಾಮಿ, ಆರೋಪಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾರೆಂದು ಹೇಳಲಾಗಿದ್ದು, ನಂತರ ಅವರನ್ನು ಅಪಹರಿಸಿ, ಬೆಂಗಳೂರಿನ ಶೆಡ್‌ಗೆ ಕರೆದೊಯ್ದು ಹಲ್ಲೆ ಮಾಡಲಾಗಿದೆ ಎಂದು ಹೇಳಿದರು.

"ಆರೋಪಿ ಚಪ್ಪಲಿ ಮತ್ತು ಮರದ ಹಲಗೆಯಿಂದ ಹೊಡೆದು ಮಾರಣಾಂತಿಕ ಗಾಯಗಳನ್ನು ಮಾಡಿದರು" ಎಂದು ನ್ಯಾಯಾಧೀಶರು ಗಟ್ಟಿಯಾಗಿ ಓದಿದರು.

"ದೋಷಾರೋಪಗಳ ಪ್ರಕಾರ, ಪವಿತ್ರ ರೇಣುಕಸ್ವಾಮಿಗೆ ಚಪ್ಪಲಿಯಿಂದ ಹೊಡೆದರೆ, ದರ್ಶನ್, ರೇಣುಕಾಸ್ವಾಮಿಯ ಪ್ಯಾಂಟ್ ತೆಗೆದು ಖಾಸಗಿ ಭಾಗಕ್ಕೆ ಒದ್ದರು. ಗಂಭೀರ ಹಲ್ಲೆಯಿಂದ ರೇಣುಕಾಸ್ವಾಮಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ.

ಎಲ್ಲಾ 17 ಆರೋಪಿಗಳು ತಪ್ಪೊಪ್ಪಿಕೊಳ್ಳಲು ನಿರಾಕರಿಸಿದರು. ಹೀಗಾಗಿ ನ್ಯಾಯಾಲಯವು ನವೆಂಬರ್ 10 ರಂದು ಆರೋಪಗಳನ್ನು ದೃಢೀಕರಿಸುವ ಪ್ರಕ್ರಿಯೆ ಆರಂಭಿಸುವುದಾಗಿ ಹೇಳಿದೆ. ಇದರ ನಂತರ, ದರ್ಶನ್, ಪವಿತ್ರಾ ಮತ್ತು ಇತರ ಏಳು ಜನರನ್ನು ಮತ್ತೆ ಜೈಲಿಗೆ ಸ್ಥಳಾಂತರಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಹಾರ ಚುನಾವಣೆಯಲ್ಲಿ ಮಹಾಘಟಬಂಧನ್‌ಗೆ ಆಡಳಿತ ವಿರೋಧಿ ಅಲೆ ಸಹಾಯ ಮಾಡುತ್ತದೆ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ: ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟನೆ

ದಕ್ಷಿಣ ಭಾರತದ ರಾಜ್ಯಗಳಲ್ಲಿ ಹೆಚ್ಚುತ್ತಿರುವ ಸಾಲದ ಹೊರೆ! ಆದರೆ, ಇನ್ನೂ ಅಪಾಯದ ಗಂಟೆ ಮೊಳಗಿಲ್ಲ ಏಕೆ? ಇಲ್ಲಿದೆ ಮಾಹಿತಿ...

ಮಹಿಳಾ ಏಕದಿನ ವಿಶ್ವಕಪ್ 2025: ಚೊಚ್ಚಲ ಪ್ರಶಸ್ತಿ ಗೆದ್ದ ಬೆನ್ನಲ್ಲೇ 'ನಾಯಕತ್ವ' ತ್ಯಜಿಸಲು ಹರ್ಮನ್‌ಪ್ರೀತ್ ಕೌರ್ ಗೆ ಹೆಚ್ಚಿದ ಒತ್ತಡ! ಕಾರಣವೇನು?

ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ: ಈಗಿನ ಸಿನಿಮಾಗಳಲ್ಲಿ ಸಾಮಾಜಿಕ ಕಾಳಜಿ, ಗುಣಮಟ್ಟ ಕ್ಷೀಣ- ಸಿಎಂ ಸಿದ್ದರಾಮಯ್ಯ

SCROLL FOR NEXT