ಈಶ್ವರ ಖಂಡ್ರೆ 
ರಾಜ್ಯ

ಬೆಳಗಾವಿ: ವಿದ್ಯುತ್ ಸ್ಪರ್ಶಿಸಿ ಎರಡು ಆನೆಗಳ ಸಾವು; ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಆದೇಶ

ಖಾನಾಪುರ ಬಳಿಯ ಸುಲೈಗಲಿ ಗ್ರಾಮದಲ್ಲಿ ಭಾನುವಾರ ಈ ಘಟನೆ ಸಂಭವಿಸಿದೆ.

ಬೆಂಗಳೂರು: ಬೆಳಗಾವಿ ಜಿಲ್ಲೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಎರಡು ಆನೆಗಳು ಸಾವಿಗೀಡಾಗಿರುವ ಘಟನೆಯ ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೋಮವಾರ ಆದೇಶಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಖಾನಾಪುರ ಬಳಿಯ ಸುಲೈಗಲಿ ಗ್ರಾಮದಲ್ಲಿ ಭಾನುವಾರ ಈ ಘಟನೆ ಸಂಭವಿಸಿದೆ.

ಈ ಘಟನೆಯನ್ನು 'ದುರದೃಷ್ಟಕರ' ಎಂದು ಬಣ್ಣಿಸಿದ ಸಚಿವರು, ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ಆನೆಗಳು ಇದ್ದರೂ, ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳದೆ ಅರಣ್ಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪಗಳನ್ನು ಉಲ್ಲೇಖಿಸಿದ್ದಾರೆ.

ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಐದು ದಿನಗಳಲ್ಲಿ ವಿವರವಾದ ವರದಿಯನ್ನು ಸಲ್ಲಿಸುವಂತೆ ಮತ್ತು ಯಾವುದೇ ಲೋಪಗಳು ಕಂಡುಬಂದರೆ ಶಿಸ್ತು ಕ್ರಮಕ್ಕೆ ಶಿಫಾರಸುಗಳನ್ನು ಸಲ್ಲಿಸುವಂತೆ ಸಚಿವರು ಮುಖ್ಯ ವನ್ಯಜೀವಿ ವಾರ್ಡನ್‌ಗೆ ನಿರ್ದೇಶಿಸಿದ್ದಾರೆ.

ಬೇಲಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ್ದವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳುವುದಾಗಿ ಖಂಡ್ರೆ ಎಚ್ಚರಿಸಿದ್ದು, ವಿದ್ಯುತ್ ಸಂಪರ್ಕ ನೀಡಿದ್ದರಿಂದಾಗಿಯೇ ಆನೆಗಳ ಸಾವು ಸಂಭವಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Flydubai ಕಾಕ್‌ಪಿಟ್ ದಾಳಿ: ಸಹ ಪೈಲಟ್ ಗುರುತು ಬಹಿರಂಗ

FlyDubai ವಿಮಾನ ಹಾರಾಟಕ್ಕೆ ಒಮಾನ್ ನಲ್ಲಿ ನಿಷೇಧ: ಪತನಕ್ಕೆ ಯತ್ನಿಸಿದ್ದ ಸಹ ಪೈಲಟ್‌ ಉಗ್ರವಾದ ಹಿನ್ನಲೆಯವನೇ?

ಪ್ರೇಮಾನಂದ ಮಹಾರಾಜರ ಶಿಷ್ಯ ಆತ್ಮಹತ್ಯೆಗೂ ಮುನ್ನ ಏನಾಯಿತು? ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ!

KPS ಯೋಜನೆ ಅನುಷ್ಠಾನಕ್ಕೆ ಕರ್ನಾಟಕಕ್ಕೆ ಎಡಿಬಿ ಯಿಂದ 1,750 ಕೋಟಿ ರೂ ಸಾಲ: ಶಾಲೆಗಳಿಗೆ ಕಾರ್ಯಕ್ಷಮತೆಯ ಗುರಿ ನಿಗದಿ!

ಏಷ್ಯನ್ ಗೇಮ್ಸ್ 2026: 'ರಿಕರ್ವ್ ಆರ್ಚರಿಯಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟ ಮೊಹೋದ್ ಕುಂಕುಮ್!