ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತಿತರರು 
ರಾಜ್ಯ

ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ: ಈಗಿನ ಸಿನಿಮಾಗಳಲ್ಲಿ ಸಾಮಾಜಿಕ ಕಾಳಜಿ, ಗುಣಮಟ್ಟ ಕ್ಷೀಣ- ಸಿಎಂ ಸಿದ್ದರಾಮಯ್ಯ

ಸಿನಿಮಾ ತಾರೆಯರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅಷ್ಟೇ ಮೌಲ್ಯಯುತವಾಗಿ ಬದುಕಬೇಕು. ಸಮಾಜವನ್ನು ತಿದ್ದುವ ಸಿನಿಮಾಗಳನ್ನು ಹೆಚ್ಚೆಚ್ಚು ತಯಾರಿಸಿದರೆ ಅದರಿಂದ ಬದಲಾವಣೆ ಸಾಧ್ಯ

ಮೈಸೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮೈಸೂರಿನ ಘಟಿಕೋತ್ಸವ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2018 ಮತ್ತು 19ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿ, ಪ್ರಶಸ್ತಿ ವಿಜೇತರಿಗೆ ಅಭಿನಂದಿಸಿದರು.

ಬಳಿಕ ಮಾತನಾಡಿದ ಮುಖ್ಯಮಂತ್ರಿ, ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ ಜೀವನದಲ್ಲೂ ನಡೆದುಕೊಳ್ಳಬೇಕು. ಡಾ.ರಾಜ್ ಕುಮಾರ್ ಅವರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು. ಈ ಕಾರಣಕ್ಕೇ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ.ಸಿನಿಮಾ ಅತ್ಯಂತ ಪ್ರಭಾವೀ ಮಾಧ್ಯಮ. ಸಮಾಜದ ಮೇಲೆ ಆಳವಾದ ಪರಿಣಾಮ ಬೀರುತ್ತದೆ. ಆದ್ದರಿಂದ ಸಿನಿಮಾ ತಾರೆಯರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅಷ್ಟೇ ಮೌಲ್ಯಯುತವಾಗಿ ಬದುಕಬೇಕು. ಸಮಾಜವನ್ನು ತಿದ್ದುವ ಸಿನಿಮಾಗಳನ್ನು ಹೆಚ್ಚೆಚ್ಚು ತಯಾರಿಸಿದರೆ ಅದರಿಂದ ಬದಲಾವಣೆ ಸಾಧ್ಯ ಎಂದರು.

ಶೀಘ್ರದಲ್ಲೇ ಚಿತ್ರನಗರಿ ನಿರ್ಮಾಣ ಕಾರ್ಯ ಆರಂಭ:

ನಮ್ಮ ಸರ್ಕಾರ ಕನ್ನಡ ಸಿನಿಮೋದ್ಯಮದ ಆರೋಗ್ಯಕಾರಿ ಪ್ರಗತಿ ಮತ್ತು ಬೆಳವಣಿಗೆಗೆ ಸದಾ ಬೆಂಬಲ ನೀಡುತ್ತದೆ. ಕೇವಲ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ. ಒಳ್ಳೆ ಸಿನಿಮಾ ಮಾಡಿ, ಜನ ಮೆಚ್ಚುವ, ಸಮಾಜದ ಮೇಲೆ ಉತ್ತಮ‌ ಪರಿಣಾಮ ಬೀರುವ ಸಿನಿಮಾ ಮಾಡಿದರೆ ಸಬ್ಸಿಡಿ ನೀಡಿದ್ದಕ್ಕೂ ಸಾರ್ಥಕವಾಗುತ್ತದೆ. ಸದ್ಯ ಬಾಕಿ ಇರುವ ಎಲ್ಲಾ ವರ್ಷದ ಸಬ್ಸಿಡಿಯನ್ನೂ ಒಟ್ಟಿಗೇ ನೀಡಲಾಗುವುದು. ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಚಿತ್ರನಗರಿ ಮಾಡಲು 160 ಎಕರೆ ಜಾಗವನ್ನು ವಾರ್ತಾ ಇಲಾಖೆಗೆ ಹಸ್ತಾಂತರಿಸಲಾಗಿದೆ. ಎರಡು ತಿಂಗಳಲ್ಲಿ ಕಾನೂನು ಪ್ರಕ್ರಿಯೆ ಮುಗಿಸಿ ಚಿತ್ರನಗರಿ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ತಿಳಿಸಿದರು.

ಹಿಂದಿನ ಸರ್ಕಾರ ಆಯಾ ವರ್ಷವೇ ಚಲನಚಿತ್ರ ಪ್ರಶಸ್ತಿಗಳನ್ನು ವಿತರಿಸದ ಕಾರಣಕ್ಕೇ 2018ನೇ ಸಾಲಿನಿಂದ ಪ್ರಶಸ್ತಿಗಳು ಬಾಕಿ ಉಳಿದಿವೆ. ಇದು ತಪ್ಪು ಹೀಗಾಗಬಾರದು. ಆದ್ದರಿಂದ ನಮ್ಮ ಸರ್ಕಾರ ಇನ್ನು ಮುಂದೆ ಪ್ರತೀ ವರ್ಷ ಸಿನಿಮಾ ಪ್ರಶಸ್ತಿಗಳನ್ನು ನೀಡಲಿದೆ. ಆಯಾ ವರ್ಷದ ಸಿನಿಮಾಗಳಿಗೆ ಮರು ವರ್ಷವೇ ಪ್ರಶಸ್ತಿ ಕೊಟ್ಟರೆ ಮಾತ್ರ ಅರ್ಥಪೂರ್ಣ ಆಗಿರುತ್ತದೆ. ಇಂದು ಎರಡು ವರ್ಷದ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಕೆಲವೇ ದಿನಗಳಲ್ಲಿ ಹಳೆ ಸರ್ಕಾರದ ಅವಧಿಯ ಇನ್ನೆರಡು ವರ್ಷದ ಸಿನಿಮಾ ಪ್ರಶಸ್ತಿಗಳನ್ನು ನೀಡಲು ಸೂಚನೆ ನೀಡಿದ್ದೇನೆ. ಬಳಿಕ ಆಯಾ ವರ್ಷದ ಪ್ರಶಸ್ತಿಗಳನ್ನು ಮರು ವರ್ಷದ ಆರಂಭದಲ್ಲೇ ನೀಡಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಈಗಿನ ಸಿನಿಮಾಗಳಲ್ಲಿ ಸಾಮಾಜಿಕ ಕಾಳಜಿ, ಗುಣಮಟ್ಟ ಕ್ಷೀಣ: ಮೊದಲೆಲ್ಲಾ ಸಿನಿಮಾಗಳ ಸಂಖ್ಯೆ ಕಡಿಮೆ ಇತ್ತು. ನಾವು ನೋಡಿದ್ದನ್ನೇ ಮತ್ತೆ ಮತ್ತೆ ನೋಡುತ್ತಿದ್ದೆವು. ಈಗ ಸಿಕ್ಕಾಪಟ್ಟೆ ಸಿನಿಮಾಗಳು ಬರುತ್ತಿವೆ. ಆದರೆ, ಸಾಮಾಜಿಕ ಕಾಳಜಿ ಮತ್ತು ಗುಣಮಟ್ಟ ಕಡಿಮೆ ಆಗುತ್ತಿದೆ. ಆದ್ದರಿಂದ ಈಗ ಸಿನಿಮಾ ನೋಡುವುದನ್ನೇ ಕಡಿಮೆ ಮಾಡಿದ್ದೇನೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಚಿವ ಸಂಪುಟ ಪುನಾರಚನೆ: ಆತುರದ ನಿರ್ಧಾರ ಕೈಗೊಳ್ಳದೆ, ಕಾದು ನೋಡುವ ತಂತ್ರ ಅಳವಡಿಸಿಕೊಂಡ 'ಕೈ' ಕಮಾಂಡ್

ಬಿಹಾರ ಚುನಾವಣೆಯಲ್ಲಿ ಮಹಾಘಟಬಂಧನ್‌ಗೆ ಆಡಳಿತ ವಿರೋಧಿ ಅಲೆ ಸಹಾಯ ಮಾಡುತ್ತದೆ: ಸಿಎಂ ಸಿದ್ದರಾಮಯ್ಯ

ನವರತ್ನ ಧಾರಣೆ: ಗ್ರಹಗಳ ಅಧಿಪತಿ 'ಸೂರ್ಯ'ನ ಫಲ ಪಡೆಯಲು ಯಾವ ರತ್ನ ಧರಿಸಬೇಕು?

ಉಪ ಮುಖ್ಯಮಂತ್ರಿಯಾಗಲು ನಾನು ಸಿದ್ಧ: ಹೈಕಮಾಂಡ್ ಬಯಸಿದರೆ ಸಚಿವ ಸ್ಥಾನ ತ್ಯಾಗ; ಜಮೀರ್‌ ಅಹ್ಮದ್‌ ಖಾನ್‌

ನ.18ರಿಂದ Bengaluru Tech Summit 2025: ‘ಡೀಪ್‌ಟೆಕ್ ದಶಕ’ಕ್ಕೆ 600 ಕೋಟಿ ರೂ. ಹೂಡಿಕೆ; ಸಚಿವ ಪ್ರಿಯಾಂಕ್ ಖರ್ಗೆ

SCROLL FOR NEXT