ಇಳಕಲ್: ಹುಚ್ಚು ನಾಯಿ ಕಡಿತದಿಂದ ಚಿಕ್ಕ ಮಕ್ಕಳು, ಮಹಿಳೆಯರು, ವೃದ್ಧರು ಸೇರಿದಂತೆ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಲ್ಲಿ ನಡೆದಿದೆ.
ಗೋಲೆರಗುಡಿ, ಜೂನಿಯರ್ ಕಾಲೇಜು ರಸ್ತೆ, ಶರಣಬಸವೇಶ್ವರ ದೇವಸ್ಥಾನ ಸೇರಿದಂತೆ ಹಲವು ಕಡೆಗಳಲ್ಲಿ ಈ ದಾಳಿ ನಡೆದಿದ್ದು, ಸ್ಥಳೀಯ ನಿವಾಸಿಗಳಲ್ಲಿ ಭೀತಿ ಮೂಡಿಸಿದೆ.
ಹುಚ್ಚು ನಾಯಿ ಕಡಿತದಿಂದ ಹಲವು ಮಕ್ಕಳ ಮುಖ, ತುಟಿ ಮತ್ತು ಕೆನ್ನೆಗಳಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಧಿಕಾರಿಗಳು ಹುಚ್ಚು ನಾಯಿ ಪತ್ತೆಹಚ್ಚಲು ಮತ್ತು ಸೆರೆಹಿಡಿಯಲು ಪ್ರಯತ್ನಿಸುತ್ತಿದ್ದಾರೆ.
ದಾವಣಗೆರೆಯಲ್ಲಿ ಇತ್ತೀಚಿಗೆ ನಡೆದಿದ್ದ ಮತ್ತೊಂದು ಘಟನೆಯಲ್ಲಿ ಬೀದಿ ನಾಯಿ ದಾಳಿಯ ನಂತರ ನಾಲ್ಕು ತಿಂಗಳಿನಿಂದ ಜೀವನ್ಮರಣದಲ್ಲಿ ಹೋರಾಡುತ್ತಿದ್ದ ನಾಲ್ಕು ವರ್ಷದ ಬಾಲಕಿ ಖಾದಿರಾ ಭಾನು ಆಗಸ್ಟ್‌ನಲ್ಲಿ ಸಾವನ್ನಪ್ಪಿದಳು.
ಬೆಂಗಳೂರು ವಿಶ್ವವಿದ್ಯಾಲಯದ ಕೆಂಗೇರಿ ಕ್ಯಾಂಪಸ್‌ನೊಳಗೆ ಇಬ್ಬರು ಕಾಲೇಜು ವಿದ್ಯಾರ್ಥಿಗಳ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದರಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ರಾಜ್ಯದಲ್ಲಿ ಈ ವರ್ಷದ ಜನವರಿಯಿಂದ ಆಗಸ್ಟ್ ರ ನಡುವೆ 2.86 ಲಕ್ಷ ನಾಯಿ ಕಡಿತ ಪ್ರಕರಣಗಳು ಮತ್ತು ರೇಬೀಸ್‌ನಿಂದ 26 ಸಾವನ್ನಪ್ಪಿರುವುದಾಗಿ ವರದಿಯಾಗಿದೆ.