ಸಂಗ್ರಹ ಚಿತ್ರ 
ರಾಜ್ಯ

ಆದಾಯ ಮೀರಿ ಆಸ್ತಿ ಗಳಿಕೆ: BMTC ಅಧಿಕಾರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ; 70 ಲಕ್ಷ ರೂ ದಂಡ..!

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಆರೋಪದಡಿ 2014ನೇ ಸಾಲಿನಲ್ಲಿ ಕೆ.ಬಿ. ರಾಮಕೃಷ್ಣ ರೆಡ್ಡಿ ಅವರ ಮನೆ, ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು.

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಿಎಂಟಿಸಿ ಅಧಿಕಾರಿಯೊಬ್ಬರಿಗೆ ಮೂರು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 70 ಲಕ್ಷ ರೂಪಾಯಿ ದಂಡ ವಿಧಿಸಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಬಿಎಂಟಿಸಿ ವಿಭಾಗೀಯ ಸಂಚಾರ ನಿಯಂತ್ರಕ ಕೆ.ಬಿ. ರಾಮಕೃಷ್ಣ ರೆಡ್ಡಿ ಶಿಕ್ಷೆಗೆ ಗುರಿಯಾದ ಅಧಿಕಾರಿಯಾಗಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಆರೋಪದಡಿ 2014ನೇ ಸಾಲಿನಲ್ಲಿ ಕೆ.ಬಿ. ರಾಮಕೃಷ್ಣ ರೆಡ್ಡಿ ಅವರ ಮನೆ, ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು.

ನಂತರ ಪ್ರಕರಣದ ವಿಚಾರಣೆ ನಡೆಸಿದ ಲೋಕಾಯುಕ್ತ ಪೊಲೀಸರು ರಾಮಕೃಷ್ಣ ರೆಡ್ಡಿ ಅವರು ಆದಾಯಕ್ಕಿಂತ 61.45 ಲಕ್ಷ ರೂ. ಮೌಲ್ಯದ ಅಧಿಕ ಆಸ್ತಿ ಹೊಂದಿರುವುದನ್ನು ಬಯಲು ಮಾಡಿದ್ದರು. ಈ ಸಂಬಂಧ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಲೋಕಾಯುಕ್ತ ಪೊಲೀಸರ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಮಂಜುನಾಥ ಹೊನ್ನಯ್ಯ ನಾಯಕ್ ಅವರು ಪ್ರಕರಣಕ್ಕೆ ಪೂರಕವಾದ ಸಾಕ್ಷ್ಯಗಳೊಂದಿಗೆ ವಾದಿಸಿದರು.

ಅಂತಿಮವಾಗಿ, ಆರೋಪಿಯು 69.33 ಲಕ್ಷ ರೂ. ಅಕ್ರಮ ಆಸ್ತಿಯನ್ನು ಹೊಂದಿದ್ದಾರೆಂಬುದು ಸಾಬೀತಾಯಿತು. ಆರೋಪಿಯು ತಾನು ನಿರಪರಾಧಿ ಎಂದು ಸಾಬೀತುಪಡಿಸುವಲ್ಲಿ ವಿಫಲನಾಗಿದ್ದಾನೆಂದು ನ್ಯಾಯಾಲಯ ಹೇಳಿದ್ದು, ಈ ಹಿನ್ನೆಲೆಯಲ್ಲಿ ಅ. 31ರಂದು ಕೆ.ಬಿ. ರಾಮಕೃಷ್ಣ ರೆಡ್ಡಿ ಅವರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ, 70 ಲಕ್ಷ ರೂ. ದಂಡ ವಿಧಿಸಿ ಅಂತಿಮ ತೀರ್ಪು ನೀಡಿದೆ. ದಂಡ ಪಾವತಿಸುವಲ್ಲಿ ವಿಫಲರಾದರೆ ಆರು ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸುವಂತೆ ಉಲ್ಲೇಖಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ನಿರ್ಬಂಧ: ತಡೆಯಾಜ್ಞೆ ವಿರೋಧಿಸಿ ಸರ್ಕಾರದ ಮೇಲ್ಮನವಿ, 'ಆದೇಶ ಕಾಯ್ದಿರಿಸಿದ' ಹೈಕೋರ್ಟ್

ಕೊನೆಗೆ ನಿಮಗೆ 'ಚಹ ಕಪ್' ಗತಿ: ವಿಶ್ವಕಪ್ ಗೆದ್ದ ನಂತರ Pakistan ಕಾಲೆಳೆದು ಸೇಡು ತೀರಿಸಿಕೊಂಡ ಹರ್ಮನ್‌ಪ್ರೀತ್ ಕೌರ್, Video ವೈರಲ್!

ರಾಮನಗರ: ಕೋಟ್ಯಂತರ ರೂ. ವೆಚ್ಚದಲ್ಲಿ 'ಹಿಂದೂ ದೇವಾಲಯ' ಕಟ್ಟಿಸಿಕೊಟ್ಟ ಮುಸ್ಲಿಂ ಉದ್ಯಮಿ!

Chhattisgarh: ಭೀಕರ ಅಪಘಾತ; ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಡಿಕ್ಕಿ; 6 ಮಂದಿ ಸಾವು! Video

ಆಪರೇಷನ್ ಸಿಂಧೂರ್ ನಂತರ ಮೊದಲ ಗಡಿ ದಾಟುವಿಕೆ; ಪಾಕ್ ಪ್ರವೇಶಿಸಿದ ಭಾರತೀಯ ಸಿಖ್ ಯಾತ್ರಿಕರು!

SCROLL FOR NEXT