ಬಿಎಂಟಿಸಿ ಬಸ್ ಗಳು BMTC
ರಾಜ್ಯ

ಮದ್ಯ ಸೇವನೆ ಮಾಡಿ ಬರುತ್ತಿದ್ದ ಚಾಲಕರಿಂದ ಲಂಚ; BMTC ಅಧಿಕಾರಿಗಳು ಅಮಾನತು!

ಅಕ್ಟೋಬರ್ 13ರಂದು ಖಾಸಗಿ ಸುದ್ದಿವಾಹಿತಿಯೊಂದು ಈ ಬಗ್ಗೆ ವರದಿ ಪ್ರಕಟಿಸಿತ್ತು. ವರದಿ ಬಂದ ಬೆನ್ನಲ್ಲೇ ಬಿಎಂಟಿಸಿ, ಕಠಿಣ ಕ್ರಮವನ್ನು ತೆಗೆದುಕೊಂಡಿದೆ.

ಬೆಂಗಳೂರು: ಮದ್ಯದ ಮತ್ತಿನಲ್ಲಿ ಕೆಲಸಕ್ಕೆ ಬರುತ್ತಿದ್ದ ಎಲೆಕ್ಟ್ರಿಕ್ ಬಸ್ ಡ್ರೈವರ್​ಗಳ ಬಳಿ ಲಂಚ ಪಡೆದು ಕರ್ತವ್ಯಕ್ಕೆ ನಿಯೋಜನೆ ಮಾಡುತ್ತಿದ್ದ ಡಿಪೋ ಮ್ಯಾನೇಜರ್ ಸೇರಿದಂತೆ 9 ಮಂದಿಯನ್ನು BMTC ಅಮಾನತುಗೊಳಿಸಿದೆ.

ಅಕ್ಟೋಬರ್ 13ರಂದು ಖಾಸಗಿ ಸುದ್ದಿವಾಹಿತಿಯೊಂದು ಈ ಬಗ್ಗೆ ವರದಿ ಪ್ರಕಟಿಸಿತ್ತು. ವರದಿ ಬಂದ ಬೆನ್ನಲ್ಲೇ ಬಿಎಂಟಿಸಿ, ಕಠಿಣ ಕ್ರಮವನ್ನು ತೆಗೆದುಕೊಂಡಿದೆ.

ಡಿಪೋ- 35ರ ಎಲೆಕ್ಟ್ರಿಕ್ ಬಸ್​ಗಳ ಕೆಲವು ಚಾಲಕರು ಮದ್ಯ ಸೇವಿಸಿ ಕರ್ತವ್ಯಕ್ಕೆ ಬರುತ್ತಿದ್ದರು. ಹೀಗಿದ್ದರೂ ಅಧಿಕಾರಿಗಳು ಚಾಲಕರಿಂದ ಸಾವಿರಾರು ರೂ. ಲಂಚ ಪಡೆದು ಕರ್ತವ್ಯಕ್ಕೆ ಹಾಜರಾಗಲು ಅವಕಾಶ ನೀಡುತ್ತಿದ್ದರು.

ನಿಯಮಗಳ ಪ್ರಕಾರ ಬಸ್ ಚಾಲನೆ ಮಾಡಲು ಡಿಪೋಗೆ ಬರುವ ಪ್ರತಿ ಚಾಲಕನನ್ನು ಮದ್ಯ ಸೇವನೆ ಸಂಬಂಧ ತಪಾಸಣೆ ನಡೆಸುವುದು ಕಡ್ಡಾಯವಾಗಿದೆ. ಮದ್ಯ ಸೇವನೆ ಮಾಡಿ ಬಂದಿದ್ದರೆ, ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಹೀಗಿದ್ದರೂ ಮದ್ಯ ಸೇವನೆ ಮಾಡಿದ ಚಾಲಕರಿಂದ ಲಂಚದ ಹಣ ಪಡೆದು ಕರ್ತವ್ಯಕ್ಕೆ ಹಾಜರಾಗಲು ಅನುಮತಿ ನೀಡುವ ಮೂಲಕ ಬಿಎಂಟಿಸಿ ಅಧಿಕಾರಿಗಳೇ ಜನರ ಜೀವಗಳ ಜೊತೆ ಚಲ್ಲಾಟ ಆಡುತ್ತಿದ್ದರು.

ಯಾರೆಲ್ಲ ಸಸ್ಪೆಂಡ್​?

ಸಂಚಾರ ನಿರೀಕ್ಷಕ ಶ್ರೀನಿವಾಸ, ಘಟಕ ವ್ಯವಸ್ಥಾಪಕ ಎಂ.ಜಿ ಕೃಷ್ಣ, ಡಿ.ಇ.ಎಸ್. ಅರುಣ್ ಕುಮಾರ್, ಕಿರಿಯ ಸಹಾಯಕಿ ಪ್ರತಿಭಾ ಕೆ.ಎಸ್., ಕ.ರಾ.ಸಾ.ಹವಲ್ದಾರ್ ಮಂಜುನಾಥ ಎಂ., ಕ.ರಾ.ಸಾ. ಪೇದೆಗಳಾದ ಮಂಜುನಾಥ ಎಸ್.ಜಿ., ಚೇತನಕುಮಾರ್, ಪುನೀತ್ ಕುಮಾರ್, ಲಕ್ಷ್ಮೀ ಕೆ. ಅವರನ್ನು ಅಮಾನತು ಮಾಡಿ ಬಿಎಂಟಿಸಿ ಆದೇಶಿಸಿದೆ. ಬೆಂಗಳೂರು ನಗರದಲ್ಲಿ ಮೇಲಿಂದ ಮೇಲೆ ಬಿಎಂಟಿಸಿ ಬಸ್​ಗಳು ಅಪಘಾತಕ್ಕೀಡಾಗುತ್ತಿರುವ ಹೊತ್ತಿನಲ್ಲೇ ಈ ಅಘಾತಕಾರಿ ಪ್ರಕರಣ ಬಯಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಕರ್ನಾಟಕದ ಗ್ಯಾರಂಟಿ ಮಾದರಿ' ಗುರುತಿಸಿ, ಹೆಚ್ಚಿನ ಆರ್ಥಿಕ ಬೆಂಬಲ ನೀಡಿ: ಕೇಂದ್ರಕ್ಕೆ ಸಿದ್ದರಾಮಯ್ಯ ಆಗ್ರಹ

ಚುನಾವಣಾ ಆಯೋಗ ಕೇಂದ್ರದ ಜತೆ ಸೇರಿ ಪ್ರಜಾಪ್ರಭುತ್ವದ 'ಕತ್ತು ಹಿಸುಕುತ್ತಿದೆ': ಸಿದ್ದರಾಮಯ್ಯ

'ಕೊಟ್ಟ ಮಾತು ಉಳಿಸಿಕೊಳ್ಳಿ': ಕ್ರಿಕೆಟ್ ದಂತಕಥೆ ಸುನೀಲ್ ಗವಾಸ್ಕರ್ ಗೆ ಜೆಮಿಮಾ ಆಗ್ರಹ! Video

EAM ಜೈಶಂಕರ್ ಮುಂದಿನ ವಾರ ಕೆನಡಾಕ್ಕೆ ಭೇಟಿ: ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಒತ್ತು!

SIR ವಿರುದ್ಧ ಕಾನೂನು ಹೋರಾಟಕ್ಕೆ ಕೇರಳ ಸರ್ಕಾರ ನಿರ್ಧಾರ; ಪ್ರತಿಪಕ್ಷಗಳಿಂದಲೂ ಬೆಂಬಲ

SCROLL FOR NEXT