ಸಾಂದರ್ಭಿಕ ಚಿತ್ರ 
ರಾಜ್ಯ

Chikkaballapur: ಮಹಿಳೆಯ ಕಾಮದಾಹಕ್ಕೆ ಯುವಕ ಬಲಿ; ಕಾಟ ತಾಳಲಾರದೆ ಆತ್ಮಹತ್ಯೆ

ಮೃತ ಯುವಕನನ್ನು ನಿಖಿಲ್ ಕುಮಾರ್ (19) ಎಂದು ಗುರುತಿಸಲಾಗಿದ್ದು, ಈತ ಇದೇ ಗ್ರಾಮದ 38 ವರ್ಷದ ಮಹಿಳೆ ಶಾರದಾ ಎಂಬಾಕೆ ಜೊತೆ ಅಕ್ರಮ ಸಂಬಂಧ ಹೊಂದಿದ್ದ.

ಚಿಕ್ಕಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಯುವಕನೋರ್ವ ಬಲಿಯಾಗಿದ್ದು, 38 ವರ್ಷದ ಮಹಿಳೆಯ ಕಾಟ ತಾಳಲಾರದೆ 19 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಕುರಿತು ಮಾಧ್ಯಮವೊಂದು ವರದಿ ಮಾಡಿದ್ದು, ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲ್ಲೂಕಿನ ಮೂಡಚಿಂತಲಹಳ್ಳಿ ಗ್ರಾಮದಲ್ಲಿ 38 ವರ್ಷ ವಯಸ್ಸಿನ ಮಹಿಳೆ ಅಕ್ರಮ ಸಂಬಂಧಕ್ಕಾಗಿ ಪದೇಪದೆ ಕಾಡಿಸುತ್ತಿದ್ದ ಕಾರಣ 19 ವರ್ಷ ವಯಸ್ಸಿನ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಮೃತ ಯುವಕನನ್ನು ನಿಖಿಲ್ ಕುಮಾರ್ (19) ಎಂದು ಗುರುತಿಸಲಾಗಿದ್ದು, ಈತ ಇದೇ ಗ್ರಾಮದ 38 ವರ್ಷದ ಮಹಿಳೆ ಶಾರದಾ ಎಂಬಾಕೆ ಜೊತೆ ಅಕ್ರಮ ಸಂಬಂಧ ಹೊಂದಿದ್ದ. ಈ ಬಗ್ಗೆ ವಿಚಾರ ತಿಳಿದ ನಿಖಿಲ್ ಪೋಷಕರು ಇದಕ್ಕೆ ತೀವ್ರ ವಿರೋಧ ತೋರಿದ್ದರು. ಆದರೆ ಮಹಿಳೆ ಶಾರದಾ ಮಾತ್ರ ಅತನನ್ನು ಬಿಟ್ಟಿರಲಿಲ್ಲ.

ಮಹಿಳೆಯ ಕಾಟ ತಾಳಲಾರದೆ ಆತ ಸಾವಿಗೆ ಶರಣಾಗಿದ್ದಾನೆ ಎಂದು ಆತನ ಮನೆಯವರು ಆರೋಪಿಸಿದ್ದಾರೆ. ಪೋಷಕರ ಕಣ್ತಪ್ಪಿಸಿ ಯುವಕನನ್ನು ಹೊರಗಡೆ ಕರೆದೊಯ್ಯುತಿದ್ದಳು ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಮೂಲಗಳ ಪ್ರಕಾರ ಹಲವು ವರ್ಷಗಳ ಹಿಂದೆ ಗಂಡನಿಗೆ ವಿಚ್ಚೇದನ ನೀಡಿದ್ದ ಶಾರದಾ, ಇಬ್ಬರು ಮಕ್ಕಳೊಂದಿಗೆ ಮೂಡಚಿಂತಹಳ್ಳಿ ಗ್ರಾಮದಲ್ಲಿ ವಾಸವಿದ್ದಳು. ಯುವಕ ನಿಖಿಲ್​​ಗೆ ಅಕ್ರಮ ಸಂಬಂಧಕ್ಕಾಗಿ ಕಾಟ ಕೊಡುತ್ತಿದ್ದಳು ಎಂಬ ಆರೋಪವಿದೆ.

ಸದ್ಯ, ಚಿಂತಾಮಣಿಯ ಕಾಚಹಳ್ಳಿ ಕೆರೆ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದ್ದು, ಮೃತ ಯುವಕ ನಿಖಿಲ್ ಪೋಷಕರು ಈಗ ಶಾರದಾ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

IPL Valuation Chart: 1.63 ಲಕ್ಷ ಕೋಟಿಗೇರಿದ ಐಪಿಎಲ್ ಮೌಲ್ಯ, CSK ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ KKR, 'ಕಿಂಗ್' ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಗೊತ್ತಾ?

ಮಾರ್ತಾಂಡ ಆನೆ ಕೊಂದ ಕಂಜನ್ ದಸರಾದಿಂದ ಶಾಶ್ವತ ನಿಷೇಧ: ಸಚಿವ ಈಶ್ವರ್ ಖಂಡ್ರೆ ಆದೇಶ

ಬೋಗಸ್ ದಾಖಲೆ ಸೃಷ್ಟಿಸಿ 23 ಕೋಟಿ ರೂ ಲೂಟಿ; ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಕಡೆ ಲೋಕಾಯುಕ್ತ ದಾಳಿ!

ವಚನಾನಂದಶ್ರೀ ವಿರುದ್ಧದ Pocso ಪ್ರಕರಣ: ತನಿಖಾಧಿಕಾರಿ PSI ಮಂಜುಳಾ ದಿಢೀರ್ ವರ್ಗಾವಣೆ!

SCROLL FOR NEXT