ಬೆಂಗಳೂರು: ಜಿಎಸ್ ಟಿ ಇಳಿಕೆ ಖುಷಿಯಲ್ಲಿದ್ದ ರಾಜ್ಯದ ಗ್ರಾಹಕರಿಗೆ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (KMF) ಶಾಕ್ ನೀಡಿದೆ. ನಂದಿನಿ ತುಪ್ಪದ (Nandini Ghee) ದರ ಪ್ರತಿ ಲೀಟರ್ಗೆ 90 ರೂಪಾಯಿ ಏರಿಕೆ ಮಾಡಿದೆ.
ಇತ್ತೀಚಿಗಷ್ಟೇ ಜಿಎಸ್ಟಿ ದರ ಇಳಿಕೆಯಾದ ನಂತರ ಕೆಎಂಎಫ್ ಹಾಲು ಉತ್ಪನ್ನಗಳ ದರ ಇಳಿಕೆ ಮಾಡಿತ್ತು. ನಂದಿನಿ ತುಪ್ಪದ ಬೆಲೆ 40 ರೂಪಾಯಿ ಇಳಿಕೆಯಾಗಿತ್ತು. ಆದರೆ, ಈಗ ಗ್ರಾಹಕರಿಗೆ ಬಿಸಿ ತುಪ್ಪವಾಗಿದೆ. ಇಂದಿನಿಂದಲೇ ನೂತನ ದರ ಜಾರಿಗೆ ಬರಲಿದೆ ಎಂದು ತಿಳಿಸಿದೆ.
ನಂದಿನಿ ತುಪ್ಪದ ಬೆಲೆ
ಈ ಹಿಂದೆ 1 ಕೆಜಿ ತುಪ್ಪಕ್ಕೆ 610 ರೂ. ಇತ್ತು, ಸದ್ಯ 90 ರೂ. ಏರಿಕೆಯಿಂದ 700 ರೂ.ಗೆ ಏರಿಕೆಯಾಗಿದೆ. ಜಿಎಸ್ಟಿ ಸುಧಾರಣೆ ಬಳಿಕ 40 ರೂಪಾಯಿ ಇಳಿಕೆ ಮಾಡಲಾಗಿತ್ತು. ಜಾಗತಿಕ ಮಾರುಕಟ್ಟೆಯಲ್ಲಿ ದರ ಏರಿಕೆ ಹಿನ್ನೆಲೆ ದಿಢೀರ್ ಬೆಲೆ ಹೆಚ್ಚಳ ಮಾಡಲಾಗಿದೆ ಎಂದು ಕೆಎಂಎಫ್ ತಿಳಿಸಿದೆ.
ನೂತನ ದರ ಹೀಗಿದೆ
50 ಎಂಎಲ್ – 47
100 ಎಂಎಲ್ – 75
200 ಎಂಎಲ್ – 155–165
500 ಎಂಎಲ್ – 350–360
1 ಲೀಟರ್ (1000 ಎಂಎಲ್) – 700–720