ರೈತರ ಜೊತೆ ಸಚಿವ ಪಾಟೀಲ್ ನಡೆಸಿದ ಸಂಧಾನ ಸಭೆ ವಿಫಲ  
ರಾಜ್ಯ

ಇಂದು 8ನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಹೋರಾಟ: ಸರ್ಕಾರಕ್ಕೆ ಡೆಡ್ ಲೈನ್, ಸಚಿವ ಪಾಟೀಲ್ ಸಂಧಾನ ಸಭೆ ವಿಫಲ-Video

ಪ್ರತಿ ಟನ್‌ ಕಬ್ಬಿಗೆ 3,500 ರೂಪಾಯಿ ನಿಗದಿಮಾಡಬೇಕೆಂದು ಪಟ್ಟು ಹಿಡಿದಿರುವ ಕಬ್ಬು ಬೆಳೆಗಾರರು, ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದು, ಇಂದು 8 ನೇ ದಿನಕ್ಕೆ ಕಾಲಿಟ್ಟಿದೆ.

ಬೆಳಗಾವಿ: ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇಂದು 8ನೇ ದಿನಕ್ಕೆ ಕಾಲಿಟ್ಟಿದೆ.

ಪ್ರತಿ ಟನ್‌ ಕಬ್ಬಿಗೆ 3,500 ರೂಪಾಯಿ ನಿಗದಿಮಾಡಬೇಕೆಂದು ಪಟ್ಟು ಹಿಡಿದಿರುವ ಕಬ್ಬು ಬೆಳೆಗಾರರು, ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದು, ಇಂದು 8 ನೇ ದಿನಕ್ಕೆ ಕಾಲಿಟ್ಟಿದೆ.

ಬೆಳಗಾವಿ ಜಿಲ್ಲೆಯ ಅಥಣಿ, ರಾಯಬಾಗ, ಬೆಳಗಾವಿ ಸೇರಿದಂತೆ ಎಲ್ಲಾ ಕಡೆಯೂ ಹೋರಾಟ ನಡೆಯುತ್ತಿದೆ. ರೈತರ ಕಿಚ್ಚು ಹೆಚ್ಚಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಸರ್ಕಾರ, ಹಿರಿಯ ಸಚಿವ ಹೆಚ್‌.ಕೆ ಪಾಟೀಲ್‌ರನ್ನು ನಿನ್ನೆ ಸಂಧಾನಕ್ಕೆ ಕಳುಹಿಸಿದ್ದು ಮಾತುಕತೆ ವಿಫಲವಾಗಿದೆ.

ಸಂಧಾನ ವಿಫಲ ಆಗುತ್ತಿದ್ದಂತೆಯೇ ಸಚಿವರು ಕಾರು ಹತ್ತಿ ವಾಪಸ್ ಆಗುತ್ತಿದ್ದಾಗ ಅವರ ಕಾರಿನ ಮುಂದೆ ಮಲಗಿ, ಕಾರಿಗೆ ಗುದ್ದಿ ರೈತರು ಆಕ್ರೋಶ ಹೊರಹಾಕಿದ್ದಾರೆ. ಬೇಕೇ ಬೇಕು ನ್ಯಾಯ ಬೇಕು ಎಂದು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಸಚಿವರ ಕಾರಿಗೆ ಮುತ್ತಿಗೆ ಹಾಕಿದ ರೈತರನ್ನು ಪೊಲೀಸರು ಎಳೆದು ಹಾಕುತ್ತಿದ್ದಂತೆಯೇ ತಳ್ಳಾಟ, ನೂಕಾಟವಾಯಿತು.

ಸಿಎಂ ಜತೆ ಮಾತುಕತೆಗೆ ರೈತರ ನಕಾರ: ಇಂದು ಹೆದ್ದಾರಿ ಬಂದ್‌

ನಿನ್ನೆ ರೈತರ ಜೊತೆ ಸಂಧಾನಕ್ಕೆ ಬಂದಿದ್ದ ಸಚಿವ ಪಾಟೀಲ್‌, ಸಿಎಂ ಅವರ ಬಳಿ‌ ರೈತರ ನಿಯೋಗ ಕರೆದುಕೊಂಡು ಬನ್ನಿ ಎಂದು ಮನವಿ ಮಾಡಿದ್ದರು. ಆದರೆ, ನೀವು 3,500 ರೂ. ಬೆಲೆ ನಿಗದಿ ಘೋಷಣೆಯ ನಿರ್ಧಾರ ಮಾಡಿ. ಇಂದು ಸಂಜೆ 7 ಗಂಟೆಯೊಳಗೆ ನಿರ್ಧಾರ ಮಾಡಿ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಸಂಧಾನಕ್ಕೆ ಬಂದಿದ್ದ ಹೆಚ್‌ಕೆ ಪಾಟೀಲ್‌ ವಾಪಸ್ ಆಗಿದ್ದಾರೆ.

ಇಂದಿನಿಂದ ಹೋರಾಟ ತೀವ್ರಗೊಳಿಸಲು ನಿರ್ಧರಿಸಿರುವ ರೈತರು, ನಾಳೆಯಿಂದ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ನಿರ್ಧರಿಸಿದ್ದಾರೆ.

ಕಬ್ಬು ಬೆಳೆಗಾರರ ಬೇಡಿಕೆ

  • ಪ್ರತಿ ಟನ್ ಕಬ್ಬಿಗೆ 3,500 ರೂ. ನಿಗದಿಪಡಿಸಿ ಆದೇಶ ಹೊರಡಿಸಬೇಕು.

  • ಕಬ್ಬಿನ ತೆರಿಗೆ ಹಣದಲ್ಲಿ ರೈತರಿಗೆ 1 ಸಾವಿರ ರೂ. ನೀಡಬೇಕು.

  • ಕಬ್ಬಿನ ತೂಕದಲ್ಲಿ ಮೋಸ ಮಾಡುತ್ತಿರುವುದು ಬಂದ್ ಆಗಬೇಕು.

  • ಸರ್ಕಾರವೇ ಸಕ್ಕರೆ ಕಾರ್ಖಾನೆ ಬಳಿ ತೂಕದ ಮೆಷಿನ್ ಇಡಬೇಕು.

  • ತೂಕ ಸೇರಿ ಪ್ರತಿಯೊಂದು ಮಾಹಿತಿ ಡಿಜಿಟಲೀಕರಣ ಮಾಡಬೇಕು.

  • ಸಕ್ಕರೆ ಆಯುಕ್ತರ ಕಚೇರಿಗೆ 100 ಸಿಬ್ಬಂದಿ ನೇಮಕ‌ ಮಾಡಬೇಕು.


ಇಂದು ಸಚಿವ ಸಂಪುಟ ಸಭೆ

ಇದೆಲ್ಲದರ ನಡುವೆ ಇಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಇದೇ ಸಭೆಯಲ್ಲಿ ಸರ್ಕಾರ ಬೆಲೆ ನಿಗದಿ ಮಾಡುವ ಸಾಧ್ಯತೆ ಇದೆ. ಇಂದು ಸಂಜೆಯೊಳಗೆ ಸರ್ಕಾರ ರೈತರ ಬೇಡಿಕೆಗೆ ಒಪ್ಪಿಕೊಳ್ಳದಿದ್ದರೆ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಹಾರ ವಿಧಾನಸಭಾ ಚುನಾವಣೆ 2025: ಈವರೆಗೂ ಶೇ. 27ರಷ್ಟು ಮತದಾನ, ನ. 14 ರಂದು ಹೊಸ ಸರ್ಕಾರ ರಚನೆ ಎಂದ ತೇಜಸ್ವಿ ಯಾದವ್

ಒತ್ತಡ, ಹಣದುಬ್ಬರಕ್ಕೆ ಕುಸಿಯುತ್ತಿದೆ ಜನನ ಪ್ರಮಾಣ! (ಹಣಕ್ಲಾಸು)

ಮೊದಲ ಹಂತದ ಮತದಾನಕ್ಕೂ ಮುನ್ನವೇ ಪ್ರಶಾಂತ್ ಕಿಶೋರ್ ಗೆ ಭಾರೀ ಹಿನ್ನಡೆ: BJP ಸೇರಿದ ಜನ್ ಸುರಾಜ್ ಪಕ್ಷದ ಅಭ್ಯರ್ಥಿ

ಜ್ಯೋತಿಷ್ಯದಲ್ಲಿ ಆರೋಗ್ಯ ಕಂಡುಕೊಳ್ಳುವುದು ಹೇಗೆ: ದೇಹದ ಅನಾರೋಗ್ಯ ನಿರ್ಧರಿಸುವ ಗ್ರಹಗಳು ಯಾವುವು? 'ತ್ರಿದೋಷ' ಎಂದರೇನು?

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡುವೆ 'ದೆಹಲಿಗೆ' ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್! ವರಿಷ್ಠರನ್ನು ಭೇಟಿಯಾಗ್ತಾರಾ?

SCROLL FOR NEXT