ಹುಲಿ ದಾಳಿಗೆ ಬಲಿಯಾದ ರೈತ 
ರಾಜ್ಯ

ಮೈಸೂರು: ಹುಲಿ ದಾಳಿಗೆ ಮತ್ತೋರ್ವ ರೈತ ಸಾವು

ಪದೇ ಪದೇ ಹುಲಿ ದಾಳಿ ಹಿನ್ನಲೆ ಕಾಡಂಚಿನ ಗ್ರಾಮದ ನಿವಾಸಿಗಳು ಕಂಗಾಲಾಗಿದ್ದು, ಕೆಲಸಕ್ಕೆ ಹೋಗಲೂ ಸಾದ್ಯವಾಗದ ಪರಿಸ್ಥಿತಿ ಉಂಟಾಗಿದೆ.

ಮೈಸೂರು: ಮೈಸೂರು ಜಿಲ್ಲೆಯಲ್ಲಿ ವ್ಯಾಘ್ರನ ಅಟ್ಟಹಾಸ ಮುಂದುವರಿದಿದೆ, ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿದ್ದಾರೆ. ಸರಗೂರು ತಾಲೂಕಿನ ಹಳೇಹೆಗ್ಗೂಡಿಲು ಗ್ರಾಮದಲ್ಲಿ ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ಹುಲಿ ದಾಳಿ ಮಾಡಿದ್ದು, ದಂಡನಾಯ್ಕ ಅಲಿಯಾಸ್​ ಸ್ವಾಮಿ(58ವ) ಮೃತಪಟ್ಟಿದ್ದಾರೆ. ನುಗು ವನ್ಯಜೀವಿಧಾಮ ವ್ಯಾಪ್ತಿಯ ಅರಣ್ಯದಲ್ಲಿ ಘಟನೆ ನಡೆದಿದೆ.

8 ತಿಂಗಳ ಹಿಂದೆ ಡಂಡ ನಾಯ್ಕ ಮೇಲೆ ಆನೆ ದಾಳಿ ನಡೆಸಿತ್ತು. ಪ್ರಾಣಾಪಾಯದಿಂದ ಪಾರಾಗಿದ್ದರು. ಇದೀಗ ಹುಲಿ ದಾಳಿಗೆ ದಂಡನಾಯ್ಕ ಬಲಿಯಾಗಿದ್ದಾರೆ.

ರೈತರು ಕಂಗಾಲು

ಪದೇ ಪದೇ ಹುಲಿ ದಾಳಿ ಹಿನ್ನಲೆ ಕಾಡಂಚಿನ ಗ್ರಾಮದ ನಿವಾಸಿಗಳು ಕಂಗಾಲಾಗಿದ್ದು, ಕೆಲಸಕ್ಕೆ ಹೋಗಲೂ ಸಾದ್ಯವಾಗದ ಪರಿಸ್ಥಿತಿ ಉಂಟಾಗಿದೆ. ಹುಲಿ ದಾಳಿಯಿಂದ ಈಗಾಗಲೇ ಹಲವು ರೈತರು ಪ್ರಾಣ ಕಳೆದುಕೊಂಡಿರುವ ನಡುವೆ ದನ ಕಾಯುತ್ತಿದ್ದ ರೈತನ ಬಳಿಯೇ ಹುಲಿ ಬಂದ ಘಟನೆ ಇತ್ತೀಚೆಗೆ ನಂಜನಗೂಡು ತಾಲೂಕಿನ ನೇರಳೆ ಗ್ರಾಮದಲ್ಲಿ ನಡೆದಿತ್ತು.

ಮನುಷ್ಯರು ಮಾತ್ರವಲ್ಲದೆ ಜಾನುವಾರುಗಳ ಮೇಲೂ ವ್ಯಾಘ್ರ ದಾಳಿ ನಡೆಸುತ್ತಿದ್ದು ಮೇಯಲು ಹೋದ ಪ್ರಾಣಿಗಳ ಜೊತೆಗೆ, ಕೊಟ್ಟಿಗೆಗೂ ನುಗ್ಗಿ ದಾಳಿ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ನಂಜನಗೂಡು ತಾಲೂಕಿನ ಉಪ್ಪನಹಳ್ಳಿಯಲ್ಲಿ ರೈತ ಸಣ್ಣಮಾದಯ್ಯ ಎಂಬವರಿಗೆ ಸೇರಿದ ಕೊಟ್ಟಿಗೆಗೆ ನುಗ್ಗಿದ್ದ ಹುಲಿ ಮೇಕೆಯನ್ನು ಕೊಂದು ತಿಂದಿತ್ತು.

ಮೈಸೂರು ಭಾಗದಲ್ಲಿ ನಿರಂತರ ಹುಲಿ ದಾಳಿ ಪ್ರಕರಣ ಹಿನ್ನಲೆ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!

ಅಮೆರಿಕ ಯೋಧನ ತಲೆಗೆ 30 ಸಾವಿರ ಡಾಲರ್ ಬಹುಮಾನ: ಇರಾನ್‌ನಿಂದ ವಿಜಯನಗರದ ಅರಸನ ತಂತ್ರ ಬಳಕೆ!

ಅಭಿಮನ್ಯು ಇಲ್ಲದ ದಸರಾ; ಈ ಬಾರಿ ಹೊರೋದ್ಯಾರು ಅಂಬಾರಿ?

ರಾಮ ಮಂದಿರ ದೇಣಿಗೆ ಕಳ್ಳತನ: ಚಂಪತ್ ರಾಯ್, ಅನಿಲ್ ಮಿಶ್ರಾಗೆ ಉತ್ತರಪ್ರದೇಶ SIT ಕ್ಲೀನ್ ಚಿಟ್!