ಹುಕ್ಕೇರಿ ತಾಲ್ಲೂಕಿನ ಹತ್ತರಗಿ ಟೋಲ್ ನಾಕಾ ಬಳಿ ಶುಕ್ರವಾರ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. 
ರಾಜ್ಯ

ಕಬ್ಬು ಬೆಳೆಗಾರರ ಕಿಚ್ಚು: ಬೆಳಗಾವಿಯಲ್ಲಿ ಪೊಲೀಸರ ಲಾಠಿ ಚಾರ್ಜ್ ವಿರುದ್ಧ ಸಿಡಿದೆದ್ದ ರೈತರು; ಕಲ್ಲು ತೂರಾಟ; ಪರಿಸ್ಥಿತಿ ಉದ್ವಿಗ್ನ!

ಪ್ರತಿ ಟನ್ ಕಬ್ಬಿಗೆ 3,500 ರೂ. ಬೆಂಬಲ ಬೆಲೆಗೆ ಒತ್ತಾಯಿಸಿ ರೈತರು ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ.

ಬೆಳಗಾವಿ: ಪ್ರತಿ ಟನ್ ಕಬ್ಬಿಗೆ 3,500 ರೂ. ಬೆಂಬಲ ಬೆಲೆಗೆ ಒತ್ತಾಯಿಸಿ ರೈತರು ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಇಂದು ಮಧ್ಯಾಹ್ನದ ನಂತರ ಅವಳಿ ಜಿಲ್ಲೆಯಲ್ಲಿ ಬಂದ್ ಅಥವಾ ಹೆದ್ದಾರಿ ತಡೆ ನಡೆಸುವುದಾಗಿ ರೈತರು ಷರತ್ತು ವಿಧಿಸಿದ್ದರು. ಅದರಂತೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ಬಂದ್‌ ನಡೆಸಿದ್ದರೆ ಬಾಗಲಕೋಟೆ ಜಿಲ್ಲೆಯ ರೈತರು ಜಿಲ್ಲೆಯ ಮೂರು ಸ್ಥಳಗಳಲ್ಲಿ ಹೆದ್ದಾರಿ ತಡೆ ನಡೆಸಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು ಹೆದ್ದಾರಿ ಬಂದ್​​ಗೆ ಮುಂದಾಗಿರುವ ರೈತರ ಮೇಲೆ ಪೊಲಿಸರು ಲಾಠಿಚಾರ್ಜ್ ನಡೆಸಿದ್ದಾರೆ. ಇದರಿಂದ ರೊಚ್ಚಿಗೆದ್ದ ರೈತರು ಲಾಠಿ ಚಾರ್ಜ್​ಗೆ ಪ್ರತಿಯಾಗಿ ಪೊಲೀಸರ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಹತ್ತರಗಿ ರಾಷ್ಟ್ರೀಯ ಹೆದ್ದಾರಿ ಟೋಲ್ ಬಳಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಬಾಗಲಕೋಟೆ ಜಿಲ್ಲೆಯಲ್ಲಿ ಶುಕ್ರವಾರ ಕಬ್ಬು ರೈತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಬಾಗಲಕೋಟೆಯ ರೈತರು ಹುಬ್ಬಳ್ಳಿ ಮತ್ತು ಸೋಲಾಪುರಕ್ಕೆ ಸಂಪರ್ಕಿಸುವ ಗಡ್ಡಕೇರಿ ಹೆದ್ದಾರಿ 218, ವಿಜಯಪುರ ಮತ್ತು ಧಾರವಾಡಕ್ಕೆ ಸಂಪರ್ಕಿಸುವ ಮುಧೋಳ ತಾಲೂಕಿನ ಮುದ್ದಾಪುರ ಗ್ರಾಮದ ಹೆದ್ದಾರಿ ಮತ್ತು ಜಿಲ್ಲೆಯ ಕಮತಗಿ ಗ್ರಾಮದ ಹೆದ್ದಾರಿಯನ್ನು ತಡೆದಿದ್ದರು. ಬೆಳಿಗ್ಗೆಯಿಂದಲೇ ರಸ್ತೆ ತಡೆ ಆರಂಭವಾಯಿತು. ಇದರಿಂದಾಗಿ ಬಾಗಲಕೋಟೆಯ ಮೂರು ಸ್ಥಳಗಳಲ್ಲಿಯೂ ಸಂಚಾರ ಸ್ಥಗಿತಗೊಂಡಿತ್ತು. ರೈತರು ರಸ್ತೆ ತಡೆ ನಡೆಸಿ ಬ್ಯಾರಿಕೇಡ್‌ಗಳನ್ನು ಹಾಕಿದ್ದ ವಾಹನಗಳು ಸಾಲುಗಟ್ಟಿ ನಿಂತಿವೆ. ವಿವಿಧ ಮಠಾಧೀಶರ ರೈತ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.

ಬಾಗಲಕೋಟೆ ರೀತಿಯಲ್ಲೇ ವಿಜಯಪುರ ಜಿಲ್ಲೆಯಲ್ಲಿಯೂ ರೈತರು ಸಹ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದು ಪಟ್ಟು ಸಡಿಲಿಸುತ್ತಿಲ್ಲ. ಇಂಡಿ ತಾಲ್ಲೂಕು ಬಂದ್‌ಗೆ ರೈತರು ಕರೆ ನೀಡಿದ್ದರಿಂದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಬಂದ್ ಮಾಡಲಾಗಿದ್ದು ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿಜಯಪುರ ನಗರದಲ್ಲಿ ರೈತರು ಈಗಾಗಲೇ ಗಗನ್ ಮಹಲ್ ಬಳಿ ರಾತ್ರಿಯಿಡೀ ಧರಣಿ ನಡೆಸುತ್ತಿದ್ದಾರೆ. ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಇದಕ್ಕೆ ವಿವಿಧ ಪ್ರಗತಿಪರ, ರೈತ ಪರ ಮತ್ತು ದಲಿತ ಪರ ಸಂಘಟನೆಗಳು ಬೆಂಬಲ ನೀಡಿವೆ.

ರೈತರು ತಮ್ಮ ಬೇಡಿಕೆಗಳನ್ನು ಈಡೇರಿಸಲು ಮತ್ತು ಮಹಾರಾಷ್ಟ್ರದ ಮಾದರಿಯಲ್ಲಿ ಕಬ್ಬಿಗೆ ಲಾಭದಾಯಕ ಬೆಲೆಯನ್ನು ಘೋಷಿಸಲು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಜಿಲ್ಲೆಯ ಭೀಮಾಶಂಕರ್ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ನಂತರ ಪ್ರತಿಭಟನೆ ಮತ್ತಷ್ಟು ತೀವ್ರಗೊಂಡಿದೆ. ಕಾರ್ಖಾನೆಯ ದ್ವಾರಗಳ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಜಮಾಯಿಸಿದ್ದು ಕಾರ್ಖಾನೆಯು ವಿಳಂಬವಿಲ್ಲದೆ ಪುನರಾರಂಭಿಸಬೇಕೆಂದು ಒತ್ತಾಯಿಸಿದ್ದಾರೆ. ಏತನ್ಮಧ್ಯೆ, ರೈತರು ತಮ್ಮ ಬೇಡಿಕೆಗಳು ಈಡೇರುವವರೆಗೆ ತಮ್ಮ ಪ್ರತಿಭಟನೆ ಮುಂದುವರಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ಕಬ್ಬು ರೈತರು ಪ್ರತಿಭಟನೆ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪುಣೆ ಭೂ ಹಗರಣ: ಮಹಾರಾಷ್ಟ್ರ ಸರ್ಕಾರದಿಂದ ಕವರ್‌ಅಪ್? FIR ನಲ್ಲಿ ಅಜಿತ್ ಪವಾರ್ ಪುತ್ರನ ಹೆಸರಿಲ್ಲ, ಆದ್ರೆ...

ಟೋಪಿ ಧರಿಸುವಂತ ಪರಿಸ್ಥಿತಿ ಬಂದರೆ ನನ್ನ ತಲೆಯನ್ನೇ ಕತ್ತರಿಸಿಕೊಳ್ಳುತ್ತೇನೆ: ಸಿಎಂ ರೇವಂತ್ ರೆಡ್ಡಿ ವಿರುದ್ಧ ಬಂಡಿ ಸಂಜಯ್ ವಾಗ್ದಾಳಿ

Mark Teaser: ಕಿಚ್ಚ ಸುದೀಪ್ ಮಾಸ್ ಅವತಾರಕ್ಕೆ ಅಭಿಮಾನಿಗಳು ಫಿದಾ, ಡಿ.25ಕ್ಕೆ ರಸದೌತಣ!

'ಮತಗಳ್ಳತನದ ಮೂಲಕ ಅಧಿಕಾರಕ್ಕೆ ಬಂದ ಸರ್ಕಾರದಿಂದ ದಲಿತರ ಭೂಮಿ ಕಳ್ಳತನ': ಮೋದಿ ಮೌನ ಪ್ರಶ್ನಿಸಿದ ರಾಹುಲ್

ಅಕ್ರಮ ಪರಮಾಣು ಚಟುವಟಿಕೆಗಳು ಪಾಕಿಸ್ತಾನದ ದೀರ್ಘಕಾಲೀನ ಅಭ್ಯಾಸ: ಟ್ರಂಪ್ ಹೇಳಿಕೆ ಕುರಿತು ಭಾರತ ತೀಕ್ಷ್ಣ ಪ್ರತಿಕ್ರಿಯೆ!

SCROLL FOR NEXT