ಬೆಂಗಳೂರು: ನಗರದ ಮೈಸೂರು ರಸ್ತೆಯಲ್ಲಿರುವ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಶುಕ್ರವಾರ ಭೇಟಿ ನೀಡಿದ್ದು, ವಿಶೇಷ ಪೂಜೆ ಸಲ್ಲಿಸಿದ್ದಾರೆ.
ರಾಷ್ಟೀಯ ಸ್ವಯಂಸೇವಕ ಸಂಘವು (RSS) ಕಳೆದ ವಿಜಯದಶಮಿಯಂದು (ಅಕ್ಟೋಬರ್ 2, 2025) ತನ್ನ 100 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ.
ಶತಾಬ್ದಿ ವರ್ಷದಲ್ಲಿ ವಿಜಯದಶಮಿ ಉತ್ಸವಗಳು, ಯುವ ಸಮಾವೇಶ, ಮನೆಮನೆ ಸಂಪರ್ಕ, ಹಿಂದೂ ಸಮ್ಮೇಳನ, ಸಾಮಾಜಿಕ ಸದ್ಭಾವನಾ ಸಮಾವೇಶ, ಪ್ರಮುಖ ನಾಗರಿಕರ ವಿಚಾರಗೋಷ್ಠಿ ಮುಂತಾದ ವಿವಿಧ ಚಟುವಟಿಕೆಗಳನ್ನು ದೇಶಾದ್ಯಂತ ಹಮ್ಮಿಕೊಳ್ಳುತ್ತಾ ಬರುತ್ತಿದೆ.
ಇದರ ಮುಂದುವರಿದ ಹಾದಿಯಾಗಿ ನಗರದಲ್ಲಿ ನವೆಂಬರ್ 8 ಮತ್ತು 9ರಂದು ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಕಾರ್ಯಕ್ರಮದಲ್ಲಿ ಡಾ.ಮೋಹನ್ ಭಾಗವತ್ ಅವರು ಮಾತನಾಡಲಿದ್ದಾರೆ. ಇದರಂತೆ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ.