ಸಿಎಂ ಸಿದ್ದರಾಮಯ್ಯ ಸಭೆ 
ರಾಜ್ಯ

ಕಬ್ಬು ಬೆಳೆಗಾರರ ಪ್ರತಿಭಟನೆ: ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ತುರ್ತು ಸಭೆ; ದರ ಏರಿಕೆಗೆ ಕೇಂದ್ರದ ಮೇಲೆ ಒತ್ತಡ ಹೇರಲು ಆಗ್ರಹ..!

ಕಬ್ಬಿಗೆ ನೀಡಬಹುದಾದ ಬೆಲೆ ಮತ್ತು ರೈತರಿಗೆ ನ್ಯಾಯವಾದ ಪರಿಹಾರ ನೀಡುವ ಕುರಿತು ಸಿಎಂ ಸಿದ್ದರಾಮಯ್ಯ ಅವರು ನೇರವಾಗಿ ಕಾರ್ಖಾನೆ ಮಾಲೀಕರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ.

ಬೆಂಗಳೂರು: ಪ್ರತಿ ಟನ್‌ ಕಬ್ಬಿಗೆ 3500 ರೂ. ದರ ಘೋಷಣೆಗೆ ಆಗ್ರಹಿಸಿ ಕಬ್ಬು ಬೆಳೆಗಾರರು ಬೆಳಗಾವಿಯಲ್ಲಿ ನಡೆಸುತ್ತಿರುವ ಹೋರಾಟ ತೀವ್ರಗೊಂಡಿದ್ದು, ಈ ನಡುವಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಮಹತ್ವದ ಸಭೆ ನಡೆಸುತ್ತಿದ್ದಾರೆ.

ಸಭೆಯಲ್ಲಿ 38ಕ್ಕೂ ಹೆಚ್ಚು ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಆಡಳಿತ ಮಂಡಳಿಯ ಪ್ರತಿನಿಧಿಗಳು ಭಾಗಿಯಾಗಿದ್ದಾರೆ.

ಸಭೆಯಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಎಂ.ಬಿ. ಪಾಟೀಲ್, ಆರ್.ಬಿ. ತಿಮ್ಮಾಪೂರ, ಲಕ್ಷ್ಮಿ ಹೆಬ್ಬಾಳ್ಕರ್, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮುರುಗೇಶ್ ನಿರಾಣಿ, ರಾಜು ಅಸಿಫ್ ಸೇಟ್ ಸೇರಿದಂತೆ ಹಲವರು ಉಪಸ್ಥಿತರಿದ್ದಾರೆ,

ಕಬ್ಬಿಗೆ ನೀಡಬಹುದಾದ ಬೆಲೆ ಮತ್ತು ರೈತರಿಗೆ ನ್ಯಾಯವಾದ ಪರಿಹಾರ ನೀಡುವ ಕುರಿತು ಸಿಎಂ ಸಿದ್ದರಾಮಯ್ಯ ಅವರು ನೇರವಾಗಿ ಕಾರ್ಖಾನೆ ಮಾಲೀಕರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ.

ಸಭೆಯ ಆರಂಭದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ತಮ್ಮ ವಾದ ಮಂಡಿಸಿದ್ದು, ಸಕ್ಕರೆ ಕಾರ್ಖಾನೆಗಳ ಆರ್ಥಿಕ ಸ್ಥಿತಿ ಉತ್ತಮ ಆಗಲು ರಾಜ್ಯ ಸರ್ಕಾರ ಸಹಕರಿಸಬೇಕು, ಜೊತೆಗೆ ಕಾರ್ಖಾನೆಗಳಿಂದ ಖರೀದಿ ಮಾಡುವ ವಿದ್ಯುತ್ ದರ ಪ್ರತಿ ಯೂನಿಟ್‌ಗೆ 5.50 ರೂ. ಹೆಚ್ಚಳ ಮಾಡಬೇಕು ಎಂದು ಮನವಿ ಮಾಡಿದರು.

ಅಷ್ಟೇ ಅಲ್ಲದೇ, ಸಕ್ಕರೆ ದರ ಏರಿಕೆ ಮಾಡಲು ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ತರಬೇಕು. ವಾಣಿಜ್ಯ ಮತ್ತು ಗೃಹ ಬಳಕೆ ಸಕ್ಕರೆ ಪ್ರತ್ಯೇಕವಾಗಿ ದರ ಏರಿಕೆ ಮಾಡಬೇಕು. ಎಥೆನಾಲ್ ಹಂಚಿಕೆ ಪ್ರಮಾಣದಲ್ಲಿ ಏರಿಕೆ ಮಾಡಬೇಕು ಎಂದು ಆಗ್ರಹಿಸಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್