ಬೆಂಗಳೂರು: ರಾಜ್ಯ ಮುಖ್ಯಮಂತ್ರಿ ಬದಲಾವಣೆ ಹಾಗೂ ಸಚಿವ ಸಂಪುಟ ಪುನಾರಚನೆ ಚರ್ಚೆಗಳ ನಡುವಲ್ಲೇ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ನಿಗಮ ಮಂಡಳಿ ಸದಸ್ಯರ ನೇಮಕದ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿರುವ ಅವರು, ರಾಜ್ಯದ ವಿವಿಧ ನಿಗಮ ಮತ್ತು ಮಂಡಳಿಗಳಿಗೆ ಕಾಂಗ್ರೆಸ್ ಕಾರ್ಯಕರ್ತರನ್ನು ನಿರ್ದೇಶಕರನ್ನಾಗಿ ನೇಮಕ ಮಾಡುವ ಕಾರ್ಯವನ್ನು ಒಂದು ವಾರದೊಳಗೆ ಮಾಡಲಾಗುವುದು ಎಂದು ಹೇಳಿದರು.
ಈಗಾಗಲೇ 3 ಸಾವಿರ ಕಾರ್ಯಕರ್ತರಿಗೆ ಅಧಿಕಾರ ನೀಡಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 15 ಜನರಿಗೆ ಗ್ಯಾರಂಟಿ ಸಮಿತಿ ಜವಾಬ್ದಾರಿ ನೀಡಿದ್ದೇವೆ. ಪ್ರತಿ ಕ್ಷೇತ್ರಗಳಲ್ಲಿ 60 ಜನರನ್ನು ನಾಮನಿರ್ದೇಶನ ಮಾಡಿದ್ದೇವೆ. ರಾಜ್ಯ ಮಟ್ಟದಲ್ಲಿ ನಿಗಮ ಮಂಡಳಿಗಳಲ್ಲಿ 600 ಸ್ಥಾನಗಳಿವೆ. ಇವುಗಳನ್ನು ಇನ್ನೊಂದು ವಾರದಲ್ಲಿ ಪ್ರಕಟಿಸುತ್ತೇವೆ ಎಂದು ತಿಳಿಸಿದರು