ಹಾರೋಬೆಲೆ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಕಾಡಾನೆ ಸಾವು 
ರಾಜ್ಯ

ಬೆಂಗಳೂರು ದಕ್ಷಿಣ: ಹಾರೋಬೆಲೆ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ 2 ಕಾಡಾನೆ ಸಾವು

ಕನಕಪುರ ತಾಲೂಕಿನ ಸಾತನೂರು ಅರಣ್ಯ ವ್ಯಾಪ್ತಿಯ ಕೂನೂರು ಗ್ರಾಮದ ಬಳಿಯ ಅರ್ಕಾವತಿ ನದಿಯ ಹಾರೋಬೆಲೆ ಡ್ಯಾಂ ಹಿನ್ನೀರಿನಲ್ಲಿ ಎರಡು ಕಾಡಾನೆಗಳು ಮುಳುಗಿ ಸಾವನ್ನಪ್ಪಿವೆ.

ಬೆಂಗಳೂರು: ವ್ಯಕ್ತಿಯೋರ್ವನ ಕೊಂದು ಭಾರಿ ಆತಂಕ ಮೂಡಿಸಿದ್ದ ಹುಲಿ ಸೆರೆ ಸುದ್ದಿ ಬೆನ್ನಲ್ಲೇ ಇತ್ತ ರಾಮನಗರದಲ್ಲಿ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ 2 ಕಾಡಾನೆಗಳು ಸಾವನ್ನಪ್ಪಿವೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಅರಣ್ಯ ವ್ಯಾಪ್ತಿಯ ಕೂನೂರು ಗ್ರಾಮದ ಬಳಿಯ ಅರ್ಕಾವತಿ ನದಿಯ ಹಾರೋಬೆಲೆ ಡ್ಯಾಂ ಹಿನ್ನೀರಿನಲ್ಲಿ ಎರಡು ಕಾಡಾನೆಗಳು ಮುಳುಗಿ ಸಾವನ್ನಪ್ಪಿದ್ದು, ಆಹಾರ ಅರಸಿ ನಾಡಿಗೆ ಬಂದಿದ್ದ ಗಂಡಾನೆಗಳು ನದಿ ದಾಟುವಾಗ ಜೊಂಡಿಗೆ ಸಿಲುಕಿ ಮುಳುಗಿ ಮೃತಪಟ್ಟಿವೆ.

ಸ್ಥಳೀಯರ ಪ್ರಕಾರ, 'ಕಳೆದ ಒಂದು ವಾರದಿಂದ ಗ್ರಾಮದ ಸುತ್ತಮುತ್ತ ಏಳು ಗಂಡಾನೆಗಳು ಕಾಣಿಸಿಕೊಂಡಿದ್ದವು. ಹೀಗಾಗಿ ಅರಣ್ಯ ಇಲಾಖೆ ಸಿಬ್ಬಂದಿಗಳು ಎರಡು ದಿನಗಳ ಕೆಳಗೆ ಕಾಡಿಗೆ ಹಿಮ್ಮೆಟ್ಟಿಸುವ ಕೆಲಸ ಮಾಡಿದ್ದರು. ಈ ವೇಳೆ ಹದಿನೈದರಿಂದ ಇಪತ್ತು ವರ್ಷ ವಯಸ್ಸಿನ ಎರಡು ಗಂಡಾನೆಗಳು ನದಿ ದಾಟಲು ಹೋಗಿ ಜೊಂಡು (ಜಲಸಸ್ಯ) ಸಿಲುಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ.

ಸದ್ಯ ಸಾವನ್ನಪ್ಪಿರುವ ಕಾಡಾನೆಗಳನ್ನು ಸಿಬ್ಬಂದಿ ನದಿಯಿಂದ ಮೇಲೆತ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮರಣೋತ್ತರ ಪರೀಕ್ಷೆ ಬಳಿಕ ಅಂತ್ಯಸಂಸ್ಕಾರ ನಡೆಸಲಿದ್ದಾರೆ. ಸದ್ಯ ಸ್ಥಳದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್