ಉಗ್ರ ಜುಹಾದ್ ಹಮೀದ್ ಶಕೀಲ್ ಮತ್ತು ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ 
ರಾಜ್ಯ

Serious Action Soon': ಸೆಂಟ್ರಲ್ ಜೈಲಲ್ಲಿ ಐಸಿಸ್‌ ಉಗ್ರ, ವಿಕೃತ ಕಾಮಿಗೆ 'ರಾಜಾತಿಥ್ಯ' ವಿಡಿಯೋ; ಸಿಎಂ ಕಿಡಿ!

ಸಂಬಂಧ ಪಟ್ಟ ಅಧಿಕಾರಿ ರಜೆಯಲ್ಲಿದ್ದಾರೆ. ಗೃಹ ಸಚಿವರು ನಾಳೆ ಸಭೆ ಕರೆದಿದ್ದಾರೆ. ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇವೆ.

ಹರಪ್ಪನಹಳ್ಳಿ: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಸಿಸ್‌ ಉಗ್ರ ಜುಹಾದ್ ಹಮೀದ್ ಶಕೀಲ್ ಮನ್ನಾ ಹಾಗೂ ವಿಕೃತ ಕಾಮಿ ಉಮೇಶ್‌ ರೆಡ್ಡಿ ಸೇರಿ ಹಲವರಿಗೆ ಮೊಬೈಲ್ ಫೋನ್, ಟಿವಿ ಸೇರಿದಂತೆ ರಾಜಾತಿಥ್ಯ ನೀಡಿರುವ ವಿಡಿಯೋಗಳು ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವುದರೊಂದಿಗೆ ಭಾರಿ ಚರ್ಚೆಗೆ ಕಾರಣವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ರಾಜಾತಿಥ್ಯ ನೀಡಿರುವ ಬಗ್ಗೆ ಗೊತ್ತಾಗಿದೆ. ತಪ್ಪು ಮಾಡಿದವರ ಮೇಲೆ ಕಠಿಣ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ಪಟ್ಟಣದಲ್ಲಿ ನಡೆದ ಮಾಜಿ ಸಚಿವ ಪಿಟಿ ಪರಮೇಶ್ವರ ನಾಯ್ಕ್ ಪುತ್ರನ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ತಪ್ಪು ಮಾಡಿದವರ ಮೇಲೆ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಸಂಬಂಧ ಪಟ್ಟ ಅಧಿಕಾರಿ ರಜೆಯಲ್ಲಿದ್ದಾರೆ. ಗೃಹ ಸಚಿವರು ನಾಳೆ ಸಭೆ ಕರೆದಿದ್ದಾರೆ. ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇವೆ. ಆ ರೀತಿ ಯಾರು ಮಾಡಿದ್ದಾರೋ ಅವರಿಗೆ, ಅವಕಾಶ ಮಾಡಿಕೊಟ್ಟವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಐಸಿಸ್‌ ಉಗ್ರ ಜುಹಾದ್ ಹಮೀದ್ ಶಕೀಲ್ ಮನ್ನಾ, ವಿಕೃತ ಕಾಮಿ ಉಮೇಶ್‌ ರೆಡ್ಡಿ ಹಾಗೂ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಜೈಲು ಸೇರಿರುವ ನಟಿ ರನ್ಯಾ ರಾವ್‌ ಪ್ರಿಯಕರ ತರುಣ್‌ ರಾಜ್‌ ಜೈಲಿನಲ್ಲಿ ಬಿಂದಾಸ್‌ ಲೈಫ್‌ ನಡೆಸುತ್ತಿರುವ ಫೋಟೋ ಮತ್ತು ವಿಡಿಯೋಗಳು ಶನಿವಾರ ವೈರಲ್‌ ಆಗಿತ್ತು. ಫೋನ್‌ನಲ್ಲಿ ಮಾತನಾಡುತ್ತಾ, ಎಲ್ಇಡಿ ಟಿವಿ ನೋಡಿಕೊಂಡು ಮಜಾ ಮಾಡುತ್ತಿದ್ದ ದೃಶ್ಯ ವೈರಲ್‌ ಆಗಿತ್ತು.

ಇನ್ನೂ ಆರ್ ಎಸ್ ಎಸ್ ಬ್ಯಾನ್ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಆರ್.ಎಸ್.ಎಸ್. ನ್ನು ಸೀಮಿತಗೊಳಿಸಿ ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಪಡೆಯುವುದನ್ನು ಕಡ್ಡಾಯ ಮಾಡಿಲ್ಲ. ಯಾವುದೇ ಸಂಘ ಸಂಸ್ಥೆಗಳು ಆಯಾ ಜಿಲ್ಲಾಧಿಕಾರಿಗಳ ಬಳಿ ಅನುಮತಿ ಪಡೆಯಬೇಕು ಎಂದು ಆದೇಶದಲ್ಲಿ ಹೇಳಿದೆ. ಅವರು ಹಾಗೆ ಭಾವಿಸಿಕೊಂಡಿದ್ದಾರೆ ಅಷ್ಟೆ. ಆರ್.ಎಸ್.ಎಸ್ ಮುಖ್ಯಸ್ಥರಾದ ಮೋಹನ್ ಭಾಗವತ್ ಅವರು ಹೇಳಿದ್ದಕ್ಕೆಲ್ಲ ನಾವು ಉತ್ತರಿಸಲಾಗುವುದಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

IPL Valuation Chart: 1.63 ಲಕ್ಷ ಕೋಟಿಗೇರಿದ ಐಪಿಎಲ್ ಮೌಲ್ಯ, CSK ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ KKR, 'ಕಿಂಗ್' ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಗೊತ್ತಾ?

ನಾಯಕತ್ವ ತ್ಯಜಿಸಿದ ಬಳಿಕ ಸಂಕಷ್ಟದಲ್ಲಿದ್ದೆ.. ನೆರವಿಗೆ ಬಂದಿದ್ದು 'ಜಾಮಿ' ಮಾತ್ರ: Virat Kohli

IPL 2026: ವೈಭವ್ ಸೂರ್ಯವಂಶಿ ಆರ್ಭಟಕ್ಕೆ ಮಕಾಡೆ ಮಲಗಿದ LSG, ಗೆದ್ದ RR ಪ್ಲೇ ಆಫ್ ಕನಸು ಜೀವಂತ!

ಮಾರ್ತಾಂಡ ಆನೆ ಕೊಂದ ಕಂಜನ್ ದಸರಾದಿಂದ ಶಾಶ್ವತ ನಿಷೇಧ: ಸಚಿವ ಈಶ್ವರ್ ಖಂಡ್ರೆ ಆದೇಶ

SCROLL FOR NEXT