ಬೆಂಗಳೂರು: ಬ್ಯಾಂಕಾಕ್‌ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ಆಗಮಿಸಿದ ಇಬ್ಬರು ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ, ಅವರಿಂದ ವಿಲಕ್ಷಣ ವನ್ಯಜೀವಿ ಪ್ರಭೇದಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರು ಕಸ್ಟಮ್ಸ್ 'X' ನಲ್ಲಿನ ಪೋಸ್ಟ್‌ನಲ್ಲಿ, ನವೆಂಬರ್ 9 ರಂದು, ಕೆಐಎ ಅಧಿಕಾರಿಗಳು ಬ್ಯಾಂಕಾಕ್‌ನಿಂದ ಆಗಮಿಸಿದ್ದ ಇಬ್ಬರು ಪ್ರಯಾಣಿಕರನ್ನು ಪರಿಶೀಲನೆ ನಡೆಸಿ, ಬಿಳಿ ಕೆನ್ನೆಯ ಗಿಬ್ಬನ್, ಮಂಕಿ ಮತ್ತು ಹಾರ್ನ್‌ಬಿಲ್ ಸೇರಿದಂತೆ ವಿಲಕ್ಷಣ ವನ್ಯಜೀವಿ ಪ್ರಭೇದಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಯಾಣಿಕರನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972ರ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಹೇಳಿದೆ.
ಅದೇ ದಿನ, ಬ್ಯಾಂಕಾಕ್‌ನಿಂದ ಆಗಮಿಸಿದ್ದ ಮತ್ತೊಬ್ಬ ಪ್ರಯಾಣಿಕನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಡೆದ ಅಧಿಕಾರಿಗಳು, 1.04 ಕೋಟಿ ರೂ. ಮೌಲ್ಯದ 2.990 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ ಎಂದು ಮತ್ತೊಂದು ಪೋಸ್ಟ್‌ನಲ್ಲಿ ತಿಳಿಸಿದೆ.
ನಂತರ, ಪ್ರಯಾಣಿಕನನ್ನು NDPS (ಮಾದಕದ್ರವ್ಯ ಮತ್ತು ಅಮಲು ಪದಾರ್ಥಗಳ ನಿಷೇಧ ಕಾಯ್ದೆ, 1985) ಅಡಿಯಲ್ಲಿ ಬಂಧಿಸಲಾಗಿದೆ ಎಂದು ಅದು ಹೇಳಿದೆ.