ಬೆಂಗಳೂರು: ಹೊಣೆಗಾರಿಕೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ನರೇಂದ್ರ ಮೋದಿ ಅವರು ಗುಜರಾತ್ ನಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಭಯೋತ್ಪಾದನೆ ಕುರಿತು ನೀಡಿದ್ದ ಹೇಳಿಕೆಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಹೊಣೆಗಾರಿಕೆಯನ್ನು ಮುಖ್ಯಮಂತ್ರಿ ಮೋದಿ ಅವರಿಗಿಂತ ಚೆನ್ನಾಗಿ ಬೇರೆ ಯಾರೂ ಬಯಲು ಸಾಧ್ಯವಿಲ್ಲ. ಪ್ರಧಾನಿ ಪಾಲಿಗೆ ಹೊಣೆಗಾರಿಕೆ ಎಂಬುದು ಇತರರಿಗೆ ಮಾತ್ರ ಅನ್ವಯಿಸುತ್ತದೆ ಎಂದಿದ್ದಾರೆ.
ವಿರೋಧ ಪಕ್ಷದಲ್ಲಿದ್ದಾಗ ಹೊಣೆಗಾರಿಕೆ ಬಗ್ಗೆ ಮಾತನಾಡುವ ಪ್ರಧಾನಿ ಅಧಿಕಾರದಲ್ಲಿದ್ದಾಗ ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತಾರೆ ಎಂದು ಕಿಡಿಕಾರಿದ್ದಾರೆ.
ಪ್ರಧಾನಿ ಮೋದಿ ಓರ್ವ ಪಲಾಯನವಾದಿ, ಸುದ್ದಿಗೋಷ್ಠಿಯಿಂದ ತಪ್ಪಿಸಿಕೊಳ್ಳುತ್ತಾರೆ, ಸಂಸತ್ತನ್ನು ಕಡೆಗಣಿಸುತ್ತಾರೆ. ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ವಿಷಯಾಂತರ ಮಾಡ್ತಾರೆ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.