ರಾಜ್ಯ

ಚಿಕ್ಕಬಳ್ಳಾಪುರ: ಪ್ರೀತಿಸಿ ಮದುವೆಯಾದ ಜೋಡಿಗೆ ನೀವು ಅಣ್ಣ-ತಂಗಿ ಎಂದ ಪೋಷಕರು; ನನಗೆ ಅವನೇ ಬೇಕೆಂದು ವಿಷ ಕುಡಿದ ಯುವತಿ!

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗ್ರಾಮದಲ್ಲಿ ಹದಿಹರೆಯದ ವಯಸ್ಸಿನಲ್ಲಿ ತಿಳಿಯದೆಯೇ ಯುವಕ-ಯುವತಿಯೊಬ್ಬಳು ಪರಸ್ಪರ ಪ್ರೀತಿಸಿ ಮನೆ ಬಿಟ್ಟು ಬಂದು ಮದುವೆಯಾಗಿದ್ದರು. ಆದರೆ ಮನೆಗೆ ಬಂದ ಜೋಡಿಗೆ ಆಕಾಶವೇ ಕಳಚಿ ತಲೆ ಮೇಲೆ ಬಿದ್ದಂತಾಗಿದೆ.

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗ್ರಾಮದಲ್ಲಿ ಹದಿಹರೆಯದ ವಯಸ್ಸಿನಲ್ಲಿ ತಿಳಿಯದೆಯೇ ಯುವಕ-ಯುವತಿಯೊಬ್ಬಳು ಪರಸ್ಪರ ಪ್ರೀತಿಸಿ ಮನೆ ಬಿಟ್ಟು ಬಂದು ಮದುವೆಯಾಗಿದ್ದರು. ಆದರೆ ಮನೆಗೆ ಬಂದ ಜೋಡಿಗೆ ಆಕಾಶವೇ ಕಳಚಿ ತಲೆ ಮೇಲೆ ಬಿದ್ದಂತಾಗಿದೆ. ಹೌದು... ಅದಕ್ಕೆ ಕಾರಣ ಸಂಬಂಧ. ಈ ಜೋಡಿ ವರಸೆಯಲ್ಲಿ ಅಣ್ಣಾ-ತಂಗಿ ಆಗಬೇಕು ಎಂದು ಪೋಷಕರು ಹೇಳಿದ್ದೂ ಈ ಮದುವೆಗೆ ಸುತಾರಾಂ ಒಪ್ಪಿವುದಿಲ್ಲ ಎಂದು ಪೋಷಕರು ಹಠ ಹಿಡಿದಿದ್ದರು.

ಗೋಪಲ್ಲಿ ಗ್ರಾಮದ 23 ವರ್ಷದ ನಿತಿನ್ ಹಾಗೂ 19 ವರ್ಷದ ಸುಕನ್ಯಾ ಪ್ರೀತಿಸಿ ಮೂರು ದಿನಗಳ ಹಿಂದೆ ಮನೆ ಬಿಟ್ಟು ಹೋಗಿ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದರು. ಮದುವೆಯಾಗಿ ಮನೆಗೆ ಬಂದ ಜೋಡಿಗೆ ಯುವಕನ ಮನೆಯವರು ನೀವಿಬ್ಬರು ಅಣ್ಣ-ತಂಗಿ ಆಗಬೇಕು. ಈ ಮದುವೆಯನ್ನು ನಾವು ಒಪ್ಪಲ್ಲ ಎಂದು ಹೇಳಿದ್ದಾರೆ. ಇನ್ನು ಯುವತಿ ಮನೆಯವರೂ ಸಹ ನಿಮ್ಮ ಮದುವೆಗೆ ನಾವು ಯಾರೂ ಕೂಡ ಒಪ್ಪಲ್ಲ, ಸಂಬಂಧಿಕರು ಬೈದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಆದರೆ ಯುವತಿ ನನಗೆ ಅದೇ ಹುಡುಗ ಬೇಕು. ಅವನಿಲ್ಲದೇ ನಾನು ಬದುಕಲ್ಲ ಎಂದು ಪಟ್ಟು ಹಿಡಿದ್ದಾಳೆ. ಇತ್ತ ಪೋಷಕರು ಸಹ ಸಹಮತ ವ್ಯಕ್ತಪಡಿಸದಿದ್ದಕ್ಕೆ ಮನನೊಂದ ಸುಕನ್ಯಾ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಂತಾಮಣಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾಳೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಿನಲ್ಲಿ ಕಸ ಗುಡಿಸುವ ಯಂತ್ರಗಳಿಗೆ 613 ಕೋಟಿ ರೂ. ಬಾಡಿಗೆ; ಸಂಪುಟ ಸಭೆಯ ಪ್ರಮುಖ ತೀರ್ಮಾನಗಳು ಹೀಗಿವೆ

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಷರತ್ತುಬದ್ಧ ಅನುಮತಿ

ಡಿಸೆಂಬರ್ 8 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

ಇದೇ ಮೊದಲು, ಬಿಜೆಪಿಯಿಂದ ಗೆದ್ದು TMC ಸೇರಿದ್ದ ಮುಕುಲ್ ರಾಯ್ ಶಾಸಕ ಸ್ಥಾನ ರದ್ದುಗೊಳಿಸಿದ ಹೈಕೋರ್ಟ್!

ಮೇಕೆದಾಟು ಯೋಜನೆ: ಕರ್ನಾಟಕಕ್ಕೆ ಗೆಲುವು; ತಮಿಳು ನಾಡು ಅರ್ಜಿ ಸುಪ್ರೀಂ ಕೋರ್ಟ್ ವಜಾ

SCROLL FOR NEXT