ಸಾಂದರ್ಭಿಕ ಚಿತ್ರ 
ರಾಜ್ಯ

ಉದ್ಯೋಗಸ್ಥ ಮಹಿಳೆಯರಿಗೆ ವರ್ಷಕ್ಕೆ 12 ದಿನ ವೇತನ ಸಹಿತ ಮುಟ್ಟಿನ ರಜೆ: ರಾಜ್ಯ ಸರ್ಕಾರ ಆದೇಶ

ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅವಶ್ಯಕತೆ ಇರುವುದಿಲ್ಲ ಎಂಬ ಷರತ್ತುಗಳನ್ನು ವಿವರಿಸಿ ಆದೇಶಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸಬೇಕು ಎಂದು ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ.

ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, ತೋಟ ಕಾರ್ಮಿಕರ ಕಾಯ್ದೆ, ಬೀಡಿ ಮತ್ತು ಸಿಗಾರ್‌ ಕಾರ್ಮಿಕರ ಕಾಯ್ದೆ, ಮೋಟಾರು ಸಾರಿಗೆ ಕಾಯ್ದೆ ಅಡಿಯಲ್ಲಿ ನೋಂದಣಿ ಆಗಿರುವ ಕೈಗಾರಿಕೆಗಳು ಮತ್ತು ಸಂಸ್ಥೆಗಳೂ ಸೇರಿದಂತೆ ಎಲ್ಲ ವಲಯಗಳಲ್ಲಿ ಕೆಲಸ ಮಾಡುತ್ತಿರುವ 18ರಿಂದ 52ರ ವಯೋಮಾನದ ಎಲ್ಲ ಕಾಯಂ, ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೆ ಈ ಸೌಲಭ್ಯ ನೀಡಬೇಕು ಎಂದು ಎಲ್ಲ ಉದ್ಯೋಗದಾತರಿಗೂ ಸೂಚಿಸಿದೆ.

ಈ ಸಂಬಂಧ ಸರ್ಕಾರ 2024ರ ಜನವರಿ 12ರಂದು ಅಧಿಸೂಚನೆ ಹೊರಡಿಸಿತ್ತು. ಜತೆಗೆ ಕಾರ್ಮಿಕ ಇಲಾಖೆ ಆಯುಕ್ತರು 21/02/2025ರಂದು ಪತ್ರ ಬರೆದಿದ್ದರು.

ಬಳಿಕ 9/10/2025ರಂದು ನಡೆದ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ಕೂಡ ನೀಡಲಾಗಿತ್ತು.

ಈ ಎಲ್ಲದರ ಹಿನ್ನೆಯಲ್ಲಿ ಇಂದು ಆದೇಶ ಹೊರಡಿಸಿರುವ ಕಾರ್ಮಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್‌.ಸುಮ ಅವರು, ರಾಜ್ಯದಲ್ಲಿ ಕಾರ್ಖಾನೆಗಳ ಕಾಯ್ದೆ, 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961, ತೋಟ ಕಾರ್ಮಿಕರ ಕಾಯ್ದೆ, 1951, ಬೀಡಿ ಮತ್ತು ಸಿಗಾರ್ ಕಾರ್ಮಿಕರ (ಉದ್ಯೋಗ ಮತ್ತು ಷರತ್ತುಗಳು) ಕಾಯ್ದೆ, 1966 ಹಾಗೂ ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ, 1961ರಡಿ ನೋಂದಣಿಯಾಗಿರುವ ಎಲ್ಲ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲರಿಗೂ ಇದು ಅನ್ವಯವಾಗಲಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಷರತ್ತುಗಳು:

1. ಮಹಿಳಾ ನೌಕರರು ಆಯಾ ತಿಂಗಳ ಋತುಚಕ್ರ ರಜೆಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು. ಹಿಂದಿನ ತಿಂಗಳ ಋತುಚಕ್ರ ರಜೆಯನ್ನು ಮುಂದಿನ ತಿಂಗಳಿಗೆ ವಿಸ್ತರಿಸಲು ಅವಕಾಶವಿರುವುದಿಲ್ಲ.

2. ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅವಶ್ಯಕತೆ ಇರುವುದಿಲ್ಲ ಎಂಬ ಷರತ್ತುಗಳನ್ನು ವಿವರಿಸಿ ಆದೇಶಿಸಿದ್ದಾರೆ.

3. 52 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಈ ರಜೆಯ ಸೌಲಭ್ಯ ಇಲ್ಲ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort Blast: ಮೃತರ ಸಂಖ್ಯೆ 12ಕ್ಕೆ ಏರಿಕೆ; ಕಾರು ಸ್ಪೋಟಿಸಿದ್ದು ಉಮರ್ ನಬಿ​, DNA ಪರೀಕ್ಷೆಯಲ್ಲಿ ಬಹಿರಂಗ..!

Delhi Red Fort Car Blast: NIA ತನಿಖೆಯಲ್ಲಿ ಮಹತ್ವದ ಬೆಳವಣಿಗೆ; ಉಗ್ರರ ಡೈರಿ ಪತ್ತೆ, ಸ್ಫೋಟಕ ಮಾಹಿತಿ ಬಹಿರಂಗ..!

Delhi Blast: ಬಾಂಬ್ ತಯಾರಿಕೆಗೆ ₹26 ಲಕ್ಷಕ್ಕೂ ಅಧಿಕ ಹಣ ಸಂಗ್ರಹ; 26 ಕ್ವಿಂಟಾಲ್ NPK ರಸಗೊಬ್ಬರ ಖರೀದಿಸಿದ್ದ ಶಂಕಿತರು!

Delhi: ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಸ್ಫೋಟ! ಬೆಚ್ಚಿ ಬಿದ್ದ ಜನತೆ, ಅಷ್ಟಕ್ಕೂ ಆದದ್ದು ಏನು?

Delhi blast: ರಾತ್ರಿಯಿಡೀ ಕಾರಿನಲ್ಲಿಯೇ ಕಳೆದಿದ್ದ ಡಾ. ಉಮರ್, ಸ್ಫೋಟಕ್ಕೂ ಮುನ್ನ ಮಸೀದಿಗೆ ಭೇಟಿ!

SCROLL FOR NEXT