ಡಿ.ಕೆ.ಶಿವಕುಮಾರ್ ಭೇಟಿಯಾದ ಸಿಂಗಪುರ ವಿದೇಶಾಂಗ ಸಚಿವೆ ಗಾನ್ ಶಿಯೋ ಹುಯಂಗ್ 
ರಾಜ್ಯ

ರಾಜ್ಯದಲ್ಲಿ ವ್ಯಾಪಾರ, ಬಂಡವಾಳ ಹೂಡಿಕೆಗೆ ಸಿಂಗಾಪುರ ಉತ್ಸುಕ: ಮುಂದಿನ ಚುನಾವಣೆ ಹೊತ್ತಿಗೆ ಮಹಿಳಾ ಮೀಸಲಾತಿ; ಡಿ.ಕೆ. ಶಿವಕುಮಾರ್

ಕಳೆದ ವರ್ಷ ಸಿಂಗಾಪುರದ ಕೌನ್ಸಲೇಟ್ ಗೆ ಬಂದಿದ್ದರು. ಗುರುವಾರ ಅವರು ಬೆಂಗಳೂರಿನಲ್ಲಿ ಕಚೇರಿ ಆರಂಭಿಸುತ್ತಿದ್ದಾರೆ. ಅವರು ಒಪ್ಪಿದರೆ ಒಂದು ಬಹುಮಹಡಿ ಕಟ್ಟಡ ನಿರ್ಮಿಸಿ ಅವರ ಎಲ್ಲಾ ಕಚೇರಿಗಳು ಒಂದೇ ಕಡೆ ಇರುವಂತೆ ಮಾಡಲು ಪ್ರಸ್ತಾವನೆ ನೀಡಿದ್ದೇನೆ

ಬೆಂಗಳೂರು: ಬೆಂಗಳೂರಿನಲ್ಲಿ ಸಿಂಗಪುರ ದೇಶವು ವ್ಯಾಪಾರ ವಹಿವಾಟು ನಡೆಸಲು ಹೆಚ್ಚು ಉತ್ಸುಕವಾಗಿದೆ. ತಂತ್ರಜ್ಞಾನ ಹಂಚಿಕೊಳ್ಳುವಿಕೆ ಸೇರಿದಂತೆ ಕೈಗಾರಿಕಾ ಪಾರ್ಕ್ ಆರಂಭಿಸುವ ಬಗ್ಗೆ ಸಿಂಗಾಪುರ ವಿದೇಶಾಂಗ ಸಚಿವರು ಚರ್ಚೆ ನಡೆಸಿದರು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸಿಂಗಾಪುರ ವಿದೇಶಾಂಗ, ವಾಣಿಜ್ಯ ಮತ್ತು ಕೈಗಾರಿಕೆ ಸಚಿವೆ ಗಾನ್ ಶಿಯೋ ಹುಯಂಗ್ ಅವರ ನೇತೃತ್ವದ ಸಿಂಗಾಪುರ ಸರಕಾರದ ನಿಯೋಗದ ಜೊತೆ ಚರ್ಚೆ ನಡೆಸಿದ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.

ಕಳೆದ ವರ್ಷ ಸಿಂಗಾಪುರದ ಕೌನ್ಸಲೇಟ್ ಗೆ ಬಂದಿದ್ದರು. ಗುರುವಾರ ಅವರು ಬೆಂಗಳೂರಿನಲ್ಲಿ ಕಚೇರಿ ಆರಂಭಿಸುತ್ತಿದ್ದಾರೆ. ಅವರು ಒಪ್ಪಿದರೆ ಒಂದು ಬಹುಮಹಡಿ ಕಟ್ಟಡ ನಿರ್ಮಿಸಿ ಅವರ ಎಲ್ಲಾ ಕಚೇರಿಗಳು ಒಂದೇ ಕಡೆ ಇರುವಂತೆ ಮಾಡಲು ಪ್ರಸ್ತಾವನೆ ನೀಡಿದ್ದೇನೆ. ನಾನು ಈ ವಿಚಾರವಾಗಿ ಬೇರೆ ದೇಶದವರ ಜೊತೆಗೂ ಮಾತನಾಡಿದ್ದೆ. ಭದ್ರತಾ ಉದ್ದೇಶದಿಂದ ಕೆಲವರು ಒಪ್ಪಿರಲಿಲ್ಲ. ಈಗ ಒಂದು ಪ್ರಯತ್ನ ಮಾಡುತ್ತಿದ್ದೇವೆ. ಹಲವು ದೇಶದ ಜನ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದು, ಇಲ್ಲಿ ಬಂಡವಾಳ ಹೂಡಿಕೆಗೆ ಮುಂದಾಗಿದ್ದಾರೆ ಎಂದು ತಿಳಿಸಿದರು.

ಹಲವು ದೇಶಗಳ ಜನ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದು, ಹೀಗಾಗಿ ಸಿಂಗಪುರ ಇಲ್ಲಿ ಬಂಡವಾಳ ಹೂಡಿಕೆಗೆ ಮುಂದಾಗಿದೆ ಎಂದರು. ಭಾರತದಲ್ಲಿ ಅತ್ಯಧಿಕ ವಿದೇಶಿ ನೇರ ಹೂಡಿಕೆ ಮಾಡುತ್ತಿರುವ ಸಿಂಗಪುರ ಜತೆ ಕೈಗಾರಿಕಾ ಮತ್ತು ವಾಣಿಜ್ಯ ಸಹಭಾಗಿತ್ವ ಬೆಳೆಸಿಕೊಳ್ಳಲು ರಾಜ್ಯದ ಪಾಲಿಗೆ ಒಳ್ಳೆಯ ಅವಕಾಶ. ಇದನ್ನು ಸದ್ಭಳಕೆ ಮಾಡಿಕೊಳ್ಳುವ ಉದ್ದೇಶದಿಂದ 2026ರಲ್ಲಿ ಸಿಂಗಪುರಕ್ಕೆ ಭೇಟಿ ನೀಡಲಾಗುವುದು’ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಗಾನ್ ಶಿಯೋ ಹುಯಂಗ್ ಜತೆ ಮಾತುಕತೆ ಬಳಿಕ ತಿಳಿಸಿದರು.

ಸಿಂಗಪುರ ಭೇಟಿಗೂ ಮುನ್ನ ದ್ವಿಪಕ್ಷೀಯ ಕೈಗಾರಿಕಾ ಬಾಂಧವ್ಯ ವರ್ಧನೆ ಕುರಿತು ಅಧಿಕಾರಿಗಳ ಮಟ್ಟದಲ್ಲಿ ವಿಚಾರ ವಿನಿಮಯ ನಡೆಸಲಾಗುವುದು. ಮಾಹಿತಿ ತಂತ್ರಜ್ಞಾನ, ಸೆಮಿಕಂಡಕ್ಟರ್, ಫಿನ್-ಟೆಕ್, ಚಿಪ್ ವಿನ್ಯಾಸ, ಔಷಧ ತಯಾರಿಕೆ ಮುಂತಾದ ಕ್ಷೇತ್ರಗಳಲ್ಲಿ ಹೂಡಿಕೆಗೆ ಅತ್ಯುತ್ತಮ ಅವಕಾಶಗಳಿವೆ ಎಂದು ಹೇಳಿದರು.

ಭವಿಷ್ಯದಲ್ಲಿ ಮಹಿಳಾ ಮೀಸಲಾತಿಯನ್ನು ಯಾರೂ ಸಹ ತಪ್ಪಿಸಲು ಆಗುವುದಿಲ್ಲ. ಕೇಂದ್ರ ಹಾಗೂ ರಾಜ್ಯದಲ್ಲಿ ಶೇ. 33 ರಷ್ಟು ಮಹಿಳಾ ಮೀಸಲಾತಿಗೆ ಎರಡು ಮೂರು ಪಕ್ಷಗಳು ಅಂಕಿತ ಹಾಕಿವೆ. ಮಹಿಳಾ ನಾಯಕರ ಅವಶ್ಯಕತೆಯಿದೆ. ಈಗಾಗಲೇ ಸ್ಥಳೀಯ ಸಂಸ್ಥೆಗಳಲ್ಲಿ ಶೇ.50 ರಷ್ಟು ಮೀಸಲಾತಿಯಿದೆ. ಮುಂದಿನ ಚುನಾವಣೆ ಹೊತ್ತಿಗೆ ವಿಧಾನಸಭಾ ಚುನಾವಣೆಗೂ ಮಹಿಳಾ ಮೀಸಲಾತಿ ಬರಬಹುದು. ನಾವು ಸಹ ಇದರ ಬಗ್ಗೆ ತಯಾರಿ ನಡೆಸಿಕೊಳ್ಳುತ್ತಿದ್ದೇವೆ ಎಂದರು.

ತನ್ನ ಸ್ವಂತ ಶಕ್ತಿಯಿಂದ ನಾಯಕಿಯರು ಬೆಳೆಯುತ್ತಿಲ್ಲ. ಹೀಗೆ ಬೆಳೆದವರಿಗೆ ಹೆಚ್ಚು ಶಕ್ತಿ ನೀಡುವ ಕೆಲಸ ಮಾಡಬೇಕಿದೆ. ಉದಾಹರಣೆಗೆ ಡಿ.ಕೆ.ಶಿವಕುಮಾರ್ ಮಗಳು, ತಾಯಿ, ಹೆಂಡತಿ ಹೀಗೆ ಪ್ರಭಾವ ಇರುವವರೇ ಬರುವಂತಾಗಿದೆ. ಹೊಸ ನಾಯಕಿಯರನ್ನು ಗುರುತಿಸಿ ಬೆಳೆಸಬೇಕಿದೆ" ಎಂದರು. ಗ್ರಾಮೀಣ ಭಾಗದಲ್ಲಿ ತಕ್ಕಮಟ್ಟಿಗೆ ಮಹಿಳೆಯರು ಒಂದಷ್ಟು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ.

ನಗರ ಭಾಗದಲ್ಲಿಯೂ ಮಹಿಳೆಯರ ಪಾತ್ರ ಹಿರಿದಿದೆ. ಕುಟುಂಬದಲ್ಲಿ ಮಹಿಳೆಯರ ಪಾತ್ರವೇ ಮುಖ್ಯವಾದುದು. ಯಾವುದೇ ಆಹ್ವಾನ ಪತ್ರಿಕೆ ನೀಡುವಾಗ ಡಿ.ಕೆ.ಶಿವಕುಮಾರ್ ಹೆಸರು ಬರೆಯುವ ಮುಂಚಿತವಾಗಿ ಶ್ರೀಮತಿಯ ಹೆಸರು ಬರೆಯುತ್ತಾರೆ. ಶಿವ ಪಾರ್ವತಿ, ಲಕ್ಷ್ಮಿ ವೆಂಕಟೇಶ್ವರ ಎಂದು ಕರೆಯುತ್ತಾ" ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT