ನೀರಿನ ಹೆಜ್ಜೆ ಪುಸ್ತಕ ಬರೆದ ಡಿಕೆ ಶಿವಕುಮಾರ್ 
ರಾಜ್ಯ

'ನೀರಿನ ಹೆಜ್ಜೆ' ಪುಸ್ತಕ ಬರೆದ ಡಿ.ಕೆ ಶಿವಕುಮಾರ್; ನವೆಂಬರ್ 14 ರಂದು ಸಿಎಂ ಸಿದ್ದರಾಮಯ್ಯ ಬಿಡುಗಡೆ

ಸಚಿವರಾದ ಎಚ್‌ಕೆ ಪಾಟೀಲ್, ಎಂಬಿ ಪಾಟೀಲ್, ಎನ್ಎಸ್ ಬೋಸರಾಜು, ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮೋಹನ್ ವಿ ಕಾತರಕಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಬೆಂಗಳೂರು: ಉಪಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ಬರೆದಿರುವ 'ನೀರಿನ ಹೆಜ್ಜೆ' ಪುಸ್ತಕವನ್ನು ನವೆಂಬರ್ 14 ರಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಲಿದ್ದಾರೆ.

ಕರ್ನಾಟಕದ ಜಲಸಂಪನ್ಮೂಲಗಳ ಇತಿಹಾಸ, ಸವಾಲುಗಳು ಮತ್ತು ಅವಕಾಶಗಳ ಮೇಲೆ ಈ ಪುಸ್ತಕ ಬೆಳಕು ಚೆಲ್ಲುತ್ತದೆ ಎಂದು ಉಪಮುಖ್ಯಮಂತ್ರಿ ಕಚೇರಿ ಗುರುವಾರ ತಿಳಿಸಿದೆ.

ಈ ಕಾರ್ಯಕ್ರಮವು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಲಿದೆ. ಸಚಿವರಾದ ಎಚ್‌ಕೆ ಪಾಟೀಲ್, ಎಂಬಿ ಪಾಟೀಲ್, ಎನ್ಎಸ್ ಬೋಸರಾಜು, ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮೋಹನ್ ವಿ ಕಾತರಕಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿಕೆ ತಿಳಿಸಿದೆ.

ರಾಜ್ಯ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಜಲ ವಿವಾದಗಳು, ಒಪ್ಪಂದಗಳು, ನ್ಯಾಯಾಲಯದ ತೀರ್ಪುಗಳು, ನೀರಾವರಿ ಯೋಜನೆಗಳು, ಸಮಸ್ಯೆಗಳು ಮತ್ತು ಪರಿಹಾರಗಳ ಚಿತ್ರಣವಿರುವ ನಾನು ಬರೆದಿರುವ ನೀರಿನ ಹೆಜ್ಜೆ ಕೃತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 5ರಂದು ಬಿಡುಗಡೆ ಮಾಡಲಿದ್ದಾರೆ ಎಂದು ಈ ಹಿಂದೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದರು.

ಮಾಜಿ ಸಚಿವ ಮತ್ತು ಕಾಂಗ್ರೆಸ್ ಶಾಸಕರಾದ ಎಚ್‌ವೈ ಮೇಟಿ ಅವರ ನಿಧನದ ಹಿನ್ನೆಲೆಯಲ್ಲಿ ಬುಧವಾರ ನಿಗದಿಯಾಗಿದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026, qualifier 1: ಟಾಸ್ ಗೆದ್ದ GT ಬೌಲಿಂಗ್ ಆಯ್ಕೆ, ಕುತೂಹಲಕ್ಕೆ ಬ್ರೇಕ್, ವೆಂಕಟೇಶ್ ಅಯ್ಯರ್ ಗೆ ಸ್ಟಿಕ್ ಆದ RCB!

ಫೈನಲ್ ಫೈಟ್: ಸಿದ್ದರಾಮಯ್ಯ ಮನವೊಲಿಕೆಗೆ ರಾಹುಲ್ ಗಾಂಧಿ ಯತ್ನ; ಯತೀಂದ್ರಗೆ DCM ಸ್ಥಾನ, ರಾಜ್ಯಸಭೆ ಆಫರ್?

ಪಟ್ಟಕ್ಕಾಗಿ ಫೈನಲ್ ಫೈಟ್: ಮೂರು ಷರತ್ತುಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ; CM ಹುದ್ದೆಗಾಗಿ ಬಿಗಿಪಟ್ಟು!

Indian Stock Market: ಕಚ್ಚಾ ತೈಲ ದರ ಏರಿಕೆ; ರೂಪಾಯಿ ಮೌಲ್ಯ, Sensex ಇಳಿಕೆ

SCROLL FOR NEXT