ಕಬ್ಬು ಬೆಳೆಗಾರರ ಪ್ರತಿಭಟನೆ 
ರಾಜ್ಯ

ಬೆಳಗಾವಿ: ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆಸಿದ ಆರು ಜನರ ಬಂಧನ

ಪ್ರತಿಭಟನೆಯಿಂದಾಗಿ ಹೆದ್ದಾರಿಯಲ್ಲಿ ಸಂಚಾರಕ್ಕೆ ಸ್ವಲ್ಪ ಸಮಯ ಅಡ್ಡಿಯಾಗಿತ್ತು. ಹೀಗಾಗಿ ಒಂದು ಗುಂಪು ಕಲ್ಲು ತೂರಾಟ ನಡೆಸಿದ್ದು, ಘಟನೆಯಲ್ಲಿ 12 ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ.

ಬೆಳಗಾವಿ: ಕಬ್ಬಿಗೆ ಹೆಚ್ಚಿನ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ನವೆಂಬರ್ 7 ರಂದು ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಹತ್ತರಗಿ ಟೋಲ್ ಪ್ಲಾಜಾ ಬಳಿ ರೈತರು ಪ್ರತಿ ಟನ್ ಕಬ್ಬಿಗೆ 3,500 ರೂ. ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದಾಗ ಈ ಘಟನೆ ನಡೆದಿತ್ತು.

ಪ್ರತಿಭಟನೆಯಿಂದಾಗಿ ಹೆದ್ದಾರಿಯಲ್ಲಿ ಸಂಚಾರಕ್ಕೆ ಸ್ವಲ್ಪ ಸಮಯ ಅಡ್ಡಿಯಾಗಿತ್ತು. ಹೀಗಾಗಿ ಒಂದು ಗುಂಪು ಕಲ್ಲು ತೂರಾಟ ನಡೆಸಿದ್ದು, ಘಟನೆಯಲ್ಲಿ 12 ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ ಮತ್ತು ಎರಡು ಪೊಲೀಸ್ ವಾಹನ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಚನ್ನಗೌಡ ಸಸಾಲಟ್ಟಿ(40), ಪ್ರಶಾಂತ್ ಮುಗಳಿ(28), ವಿನಾಯಕ್ ಕೋಟಿವಾಲಿ(25), ಮಲ್ಲಪ್ಪ ಘಾಟಗಿ(46), ಶಿವಾನಂದ ವಾಣಿ(59) ಮತ್ತು ಸೋಮನಾಥ ಹಿರೇಮಠ(46) ಎಂದು ಗುರುತಿಸಲಾಗಿದೆ.

"ಹಿಂಸಾಚಾರದಲ್ಲಿ ಭಾಗಿಯಾಗಿರುವ ಈ ವ್ಯಕ್ತಿಗಳು ರೈತರಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್ ಅವರು ಹೇಳಿದ್ದಾರೆ.

ಆರೋಪಿಗಳು ಅಶಾಂತಿ ಸೃಷ್ಟಿಸುವ ಉದ್ದೇಶದಿಂದಲೇ ರೈತರ ಸೋಗಿನಲ್ಲಿ ಪ್ರತಿಭಟನೆಯೊಳಗೆ ನುಸುಳಿದ್ದರು. ಆರೋಪಿಗಳನ್ನು ಪತ್ತೆಹಚ್ಚಲು ಮತ್ತು ಗುರುತಿಸಲು ವಿಡಿಯೋ ದೃಶ್ಯಾವಳಿಗಳು ಮತ್ತು ಇತರ ಪುರಾವೆಗಳನ್ನು ಬಳಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಪೊಲೀಸರು ಭಾರತೀಯ ನ್ಯಾಯ ಸಂಹಿತಾ ಮತ್ತು ಕಾನೂನಿನ ಇತರ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್