ರಾಜ್ಯ

Delhi blast: ಉಗ್ರರಿಗೆ ಇಂಬು ನೀಡುವಂತೆ ಕಾಂಗ್ರೆಸ್ ನಾಯಕರ ಬೇಜವಾಬ್ದಾರಿ ಹೇಳಿಕೆ, ಕೀಳುಮಟ್ಟದ ರಾಜಕೀಯ- ಬಿಜೆಪಿ ಕಿಡಿ

ದೆಹಲಿ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದಿಂದ ದೇಶವೇ ತಲ್ಲಣಗೊಂಡಿದೆ. ಇಂಥ ಸಂದರ್ಭದಲ್ಲಿ ಕಾಂಗ್ರೆಸ್‌ ನಾಯಕರು ಒಗ್ಗಟ್ಟಿನ ಬಲ ಪ್ರದರ್ಶಿಸದೆ ಉಗ್ರರಿಗೆ ಹಾಸಿಗೆ ಹಾಸಿಕೊಟ್ಟಂತೆ ವ್ಯತಿರಿಕ್ತ ಮಾತುಗಳನ್ನಾಡುತ್ತಿದ್ದಾರೆ

ಬೆಂಗಳೂರು: ದೇಶದಲ್ಲಿ ಎಲ್ಲೇನೇ ಸ್ಫೋಟ, ಭಯೋತ್ಪಾದನೆ ದಾಳಿ ನಡೆದಾಗಲೂ ಕಾಂಗ್ರೆಸ್‌ ತೀರಾ ಕೀಳುಮಟ್ಟದ ರಾಜಕೀಯಕ್ಕೆ ಇಳಿಯುತ್ತದೆ. ಈಗ ದೆಹಲಿ ಸ್ಫೋಟದಲ್ಲೂ ಅದನ್ನೇ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.

ದೆಹಲಿ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದಿಂದ ದೇಶವೇ ತಲ್ಲಣಗೊಂಡಿದೆ. ಇಂಥ ಸಂದರ್ಭದಲ್ಲಿ ಕಾಂಗ್ರೆಸ್‌ ನಾಯಕರು ಒಗ್ಗಟ್ಟಿನ ಬಲ ಪ್ರದರ್ಶಿಸದೆ ಉಗ್ರರಿಗೆ ಹಾಸಿಗೆ ಹಾಸಿಕೊಟ್ಟಂತೆ ವ್ಯತಿರಿಕ್ತ ಮಾತುಗಳನ್ನಾಡುತ್ತಿದ್ದಾರೆ ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರ್‌ ಸ್ಫೋಟಕ್ಕೂ ಬಿಹಾರ ಚುನಾವಣೆಗೂ ಏನು ಸಂಬಂಧ? ಕಾಂಗ್ರೆಸ್‌ ನಾಯಕರು ಸ್ವಲ್ಪ ಸೂಕ್ಷ್ಮಮತೀಯರಾಗಿ ವರ್ತಿಸಲಿ. ಉಗ್ರರಿಗೆ ಇಂಬು ನೀಡುವಂತೆ ಬೇಜವಾಬ್ದಾರಿ ಹೇಳಿಕೆ, ಕೀಳು ಮಟ್ಟದ ರಾಜಕೀಯ ಮಾಡುವುದನ್ನು ಬಿಡಬೇಕೆಂದು ಜಮೀರ್‌ ಅಹ್ಮದ್‌ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ದೆಹಲಿಯಲ್ಲಿ ಕಾರು ಸ್ಪೋಟದಿಂದ 12 ಜನ ಅಮಾಯಕರು ಮೃತಪಟ್ಟು, ಹಲವರು ಗಾಯಗೊಂಡರೂ ಇವರು ಜೀವದ ಬೆಲೆ ಅರಿಯದವರಂತೆ ಮಾತನಾಡುತ್ತಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

ದೆಹಲಿ ಸ್ಪೋಟ-ಭಯೋತ್ಪಾದಕ ಕೃತ್ಯದ ಬಗ್ಗೆ ತನಿಖೆ ನಡೆಯುತ್ತಿದೆ. ಆದರೆ, ಕಾಂಗ್ರೆಸ್‌ ನಾಯಕರು ಮುಂಚಿತವಾಗಿಯೇ ತೀರ್ಮಾನಕ್ಕೆ ಬಂದು ಬಿಡುತ್ತಿದ್ದಾರೆ. ಬೆಂಗಳೂರು ಕೆಫೆ ಸ್ಫೋಟ, ಪೆಹಲ್ಗಾಮ್‌ ಭಯೋತ್ಪಾದನಾ ದಾಳಿ ಹೀಗೆ ಪ್ರತಿ ಸಂದರ್ಭದಲ್ಲೂ ಪಾಕಿಸ್ತಾನದ ಮಾದರಿಯಲ್ಲೇ ಹೇಳಿಕೆ ನೀಡುತ್ತಾರೆ ಎಂದು ಹರಿ ಹಾಯ್ದಿದ್ದಾರೆ.

ದೇಶದಲ್ಲಿ ಎಲ್ಲೇ ಆಗಲಿ ಭಯೋತ್ಪಾದನಾ ದಾಳಿ ನಡೆದಾಗ ಉಗ್ರರನ್ನು ಸೆದೆಬಡಿಯಲು ಪಕ್ಷಾತೀತವಾಗಿ ಬೆಂಬಲಿಸಬೇಕು ಮತ್ತು ಒಗ್ಗಟ್ಟಿನ ಬಲ ಪ್ರದರ್ಶಿಸಬೇಕು. ಉಗ್ರರ ವಿರುದ್ಧ ಒಂದೇ ಗಟ್ಟಿ ಧ್ವನಿ ಮೊಳಗಿಸಬೇಕು. ಆದರೆ ಕಾಂಗ್ರೆಸ್‌ ನಾಯಕರು ಹೀಗೆ ಕೀಳು ಮಟ್ಟದ ರಾಜಕೀಯ ಮಾಡುತ್ತಿರುವುದು ದುರಂತ ಮತ್ತು ದೇಶದ ದೌರ್ಭಾಗ್ಯ ಎಂದು ಪ್ರಲ್ಹಾದ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!