ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ 
ರಾಜ್ಯ

ರಾಜ್ಯದ ಎಲ್ಲಾ ಬಸ್‌ಗಳಲ್ಲಿ ತುರ್ತು ನಿರ್ಗಮನ ದ್ವಾರ ಕಡ್ಡಾಯ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ಸಭೆಯಲ್ಲಿ ಇತ್ತೀಚಿನ ಬಸ್ ಅಪಘಾತಗಳನ್ನು ಉಲ್ಲೇಖಿಸಿದ ಸಚಿವರು, ನಿಯಮ ಪಾಲನೆಯನ್ನು ಖಚಿತಪಡಿಸಿಕೊಳ್ಳಲು ಶೀಘ್ರದಲ್ಲೇ ಸುತ್ತೋಲೆ ಹೊರಡಿಸಲಾಗುವುದು.

ಬೆಂಗಳೂರು: ರಾಜ್ಯದ ಎಲ್ಲಾ ಬಸ್‌ಗಳಲ್ಲಿ ತುರ್ತು ನಿರ್ಗಮನ ದ್ವಾರಗಳ ಅಳವಡಿಕೆ ಕಡ್ಡಾಯ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಗುರುವಾರ ಹೇಳಿದ್ದಾರೆ.

ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಪರಿಶೀಲನಾ ಸಭೆಯಲ್ಲಿ ಸಚಿವರು ಈ ನಿರ್ದೇಶನ ನೀಡಿದ್ದಾರೆಂದು ತಿಳಿದುಬಂದಿದೆ.

ಸಭೆಯಲ್ಲಿ ಇತ್ತೀಚಿನ ಬಸ್ ಅಪಘಾತಗಳನ್ನು ಉಲ್ಲೇಖಿಸಿದ ಸಚಿವರು, ಕರ್ನಾಟಕದ ಎಲ್ಲಾ ಬಸ್‌ಗಳು ನೋಂದಣಿ ಅಥವಾ ಫಿಟ್‌ನೆಸ್ ಪ್ರಮಾಣಪತ್ರಗಳನ್ನು ನವೀಕರಿಸುವ ಮೊದಲು ತುರ್ತು ನಿರ್ಗಮನ ದ್ವಾರಗಳನ್ನು ಹೊಂದಿರಬೇಕು. ನಿಯಮ ಪಾಲನೆಯನ್ನು ಖಚಿತಪಡಿಸಿಕೊಳ್ಳಲು ಶೀಘ್ರದಲ್ಲೇ ಸುತ್ತೋಲೆ ಹೊರಡಿಸಲಾಗುವುದು ಎಂದು ಹೇಳಿದರು.

ಇದೇ ವೇಳೆ ನಿಯಮವನ್ನು ಜಾರಿಗೊಳಿಸಲು ವಿಫಲರಾದ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದೂ ಎಚ್ಚರಿಕೆ ನೀಡಿದರು.

ಕರ್ನಾಟಕಕ್ಕೆ ಪ್ರವೇಶಿಸುವ ಅಂತರರಾಜ್ಯ ಬಸ್‌ಗಳನ್ನು ಪರಿಶೀಲಿಸಲಾಗುತ್ತದೆ ಮತ್ತು ತುರ್ತು ನಿರ್ಗಮನ ದ್ವಾರಗಳಿಲ್ಲದೆ ಕಂಡುಬಂದರೆ ಫಿಟ್‌ನೆಸ್ ಪ್ರಮಾಣಪತ್ರಗಳನ್ನು ರದ್ದುಪಡಿಸಲಾಗುತ್ತದೆ ಎಂದು ಹೇಳಿದರು.

ಹೆಚ್ಚುವರಿ ಲಗೇಜ್ ಸಾಗಿಸುವ ಬಸ್‌ಗಳು ಮತ್ತು ಅನುಮತಿಸಲಾದ ಮಿತಿಗಳನ್ನು ಮೀರಿ ಲೋಡ್ ಸಾಗಿಸುವ ಭಾರೀ ವಾಹನಗಳ ಮೇಲೆ ತಪಾಸಣೆ ತೀವ್ರಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಎಲ್ಲಾ ಶಾಲಾ ಮತ್ತು ಕಾಲೇಜು ಬಸ್‌ಗಳ ಫಿಟ್‌ನೆಸ್ ಪ್ರಮಾಣಪತ್ರಗಳನ್ನು ನವೀಕರಿಸುವ ಮೊದಲು ಸಂಪೂರ್ಣ ತಪಾಸಣೆಗೊಳಪಡಿಸಬೇಕು. ಅವಧಿ ಮೀರಿದ ಪ್ರಮಾಣಪತ್ರಗಳನ್ನು ಹೊಂದಿರುವ ವಾಹನಗಳಿಗೆ ತಕ್ಷಣವೇ ನೋಟಿಸ್ ನೀಡಬೇಕು ಮತ್ತು ಅನುಸರಣೆಯನ್ನು ಮೇಲ್ವಿಚಾರಣೆ ಮಾಡಲು ಪ್ರತಿ ತಿಂಗಳು ವಿಶೇಷ ತಪಾಸಣಾ ತಂಡಗಳನ್ನು ರಚಿಸಲಾಗುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ಪ್ರತಿಪಕ್ಷಗಳ ಪ್ರತಿಭಟನೆ, ಗದ್ದಲದ ನಡುವೆ ಯಾವುದೇ ಚರ್ಚೆಯಿಲ್ಲದೇ ವಿಧಾನ ಪರಿಷತ್ತಿನಲ್ಲಿ ಎರಡು ವಿಧೇಯಕಗಳು ಪಾಸ್

Biggboss Kannada ಅಗ್ನಿಪರೀಕ್ಷೆ: ಗೆಟ್ ಔಟ್, ಇದೆಲ್ಲಾ ಬೇಡ ಬ್ರೋ; ವಿನಯ್ ಗೌಡಗೆ ಸ್ಪರ್ಧಿ ತಿರುಗೇಟು, Video ವೈರಲ್!

SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್, ಬೆಂಗಳೂರಲ್ಲೇ ಅತಿ ಹೆಚ್ಚು!

ಕೊಲಂಬೊ ಟೆಸ್ಟ್‌ನಲ್ಲಿ ಭಾರತದ ಅಬ್ಬರ: 503/9ಕ್ಕೆ ಇನ್ನಿಂಗ್ಸ್ ಡಿಕ್ಲೇರ್, ಲಂಕಾ ಇನ್ನಿಂಗ್ಸ್ ಗೆ ಮಳೆ ಅಡ್ಡಿ