ಸಾಂದರ್ಭಿಕ ಚಿತ್ರ 
ರಾಜ್ಯ

ಆಳಂದ ವಿಧಾನಸಭಾ ಚುನಾವಣೆಯಲ್ಲಿ ಮತ ಕಳ್ಳತನ; ಪಶ್ಚಿಮ ಬಂಗಾಳದ ವ್ಯಕ್ತಿಯನ್ನು ಬಂಧಿಸಿದ ಸಿಐಡಿ!

27 ವರ್ಷದ ವ್ಯಕ್ತಿಯನ್ನು ಬುಧವಾರ ಬಂಧಿಸಿ, ಬೆಂಗಳೂರಿಗೆ ಕರೆತರಲಾಗಿದೆ. ವಿಚಾರಣೆಗಾಗಿ ಸಿಐಡಿ ಅವರನ್ನು ವಶಕ್ಕೆ ಪಡೆದಿದೆ.

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಆಳಂದ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳವು ಆರೋಪದ ತನಿಖೆ ನಡೆಸುತ್ತಿರುವ ಸಿಐಡಿ, ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ವ್ಯಕ್ತಿಯನ್ನು ಬಂಧಿಸಿದೆ ಎಂದು ಇಲಾಖೆಯ ಮೂಲಗಳು ಶುಕ್ರವಾರ ತಿಳಿಸಿವೆ.

27 ವರ್ಷದ ವ್ಯಕ್ತಿಯನ್ನು ಬುಧವಾರ ಬಂಧಿಸಿ, ಬೆಂಗಳೂರಿಗೆ ಕರೆತರಲಾಗಿದೆ. ವಿಚಾರಣೆಗಾಗಿ ಸಿಐಡಿ ಅವರನ್ನು ವಶಕ್ಕೆ ಪಡೆದಿದೆ.

ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಹಲವು ಮತಗಳನ್ನು ಅಳಿಸಲು ಆರೋಪಿ ಅರ್ಜಿ ಸಲ್ಲಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಸಿಐಡಿ ಮೂಲಗಳ ಪ್ರಕಾರ, ನಾಡಿಯಾದ ಬಾಪಿ ಅದ್ಯ ಎಂಬ ಆರೋಪಿಯನ್ನು ಅವರ ಬ್ಯಾಂಕ್ ಖಾತೆಗೆ ವರ್ಗಾವಣೆಯಾದ ಹಣದ ಜಾಡು ಹಿಡಿದ ನಂತರ ಬಂಧಿಸಲಾಗಿದೆ.

ಬಿಆರ್ ಪಾಟೀಲ್ ಮತ್ತು ಸಚಿವ ಮತ್ತು ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರು ಮತ ಅಳಿಸುವಿಕೆ ಪ್ರಯತ್ನಗಳ ಬಗ್ಗೆ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗಳ (CEO) ಗಮನಕ್ಕೆ ತಂದಿದ್ದರು. ಆದರೆ, ಮುಖ್ಯ ಚುನಾವಣಾ ಅಧಿಕಾರಿ, ಯಾವುದೇ ಮುಂದಿನ ಕ್ರಮಗಳನ್ನು ನಿಲ್ಲಿಸಲು ಮತ್ತು ಮತದಾರರ ಪಟ್ಟಿಯ ಸದ್ಯದ ಸ್ಥಿತಿಯನ್ನು ಕಾಯ್ದುಕೊಳ್ಳಲು ನಿರ್ಧರಿಸಿದರು.

ಪಾಟೀಲ್ ಅವರ ಪ್ರಕಾರ, ದಲಿತರು ಮತ್ತು ಅಲ್ಪಸಂಖ್ಯಾತರನ್ನು ಒಳಗೊಂಡ 6,994 'ಕಾಂಗ್ರೆಸ್ ಮತಗಳನ್ನು' ಅಳಿಸಲು ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಸಿಇಒ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶಿಸಿದ ನಂತರ ಮತ ಅಳಿಸುವಿಕೆಯನ್ನು ನಿಲ್ಲಿಸಲಾಯಿತು. ಈ ಮತಗಳನ್ನು ಅಳಿಸಿದ್ದರೆ ನಾನು ಖಂಡಿತವಾಗಿಯೂ ಚುನಾವಣೆಯಲ್ಲಿ ಸೋಲುತ್ತಿದ್ದೆ ಎಂದಿದ್ದಾರೆ.

ಅವರು 2023ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಹತ್ತಿರದ ಪ್ರತಿಸ್ಪರ್ಧಿ ಸುಭಾಷ್ ಗುತ್ತೇದಾರ್ (ಬಿಜೆಪಿ) ವಿರುದ್ಧ ಸುಮಾರು 10,000 ಮತಗಳ ಅಂತರದಿಂದ ಗೆದ್ದಿದ್ದರು.

ಇತ್ತೀಚೆಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ 'ವೋಟ್ ಚೋರಿ' ಹೇಗೆ ನಡೆಯುತ್ತಿದೆ ಎಂಬುದನ್ನು ವಿವರಿಸಿದರು ಮತ್ತು ಆಳಂದ ಕ್ಷೇತ್ರದ ಉದಾಹರಣೆ ನೀಡಿದ್ದರು.

ಇದನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಸರ್ಕಾರ, 'ಮತ ಕಳ್ಳತನ'ದ ತನಿಖೆಗಾಗಿ ಎಸ್‌ಐಟಿಯನ್ನು ರಚಿಸಿತು. ಸಿಐಡಿಯಲ್ಲಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಬಿಕೆ ಸಿಂಗ್ ಇದರ ನೇತೃತ್ವ ವಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಶಾಲೆಗಳಿಗೆ ಯೂಟ್ಯೂಬರ್‌ಗಳು, ಸೋಷಿಯಲ್ ಮೀಡಿಯಾ ಮಂದಿಗೆ ನೋ ಎಂಟ್ರಿ: ಉತ್ತರ ಪ್ರದೇಶ ಸರ್ಕಾರದ ಖಡಕ್ ಆದೇಶ

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!