ಕರ್ನಾಟಕ ಹೈಕೋರ್ಟ್ 
ರಾಜ್ಯ

Phone Tapping Case: CAT ಆದೇಶಕ್ಕೆ ತಡೆ ನೀಡಲು ಹೈಕೋರ್ಟ್​ ನಕಾರ

ವಿಚಾರಣೆ ವೇಳೆ ಸಿಎಟಿ ಆದೇಶಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿದ ಪೀಠವು, ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ಡಿಸೆಂಬರ್‌ 4ಕ್ಕೆ ಮುಂದೂಡಿತು.

ಬೆಂಗಳೂರು: ಟೆಲಿಫೋನ್‌ ಕದ್ದಾಲಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್‌ ಅಧಿಕಾರಿ ಅಲೋಕ್‌ ಕುಮಾರ್‌ ವಿರುದ್ಧ ಇಲಾಖಾವಾರು ತನಿಖೆ ರದ್ದುಗೊಳಿಸಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿ(ಸಿಎಟಿ) ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ ನಿರಾಕರಿಸಿದೆ.

ಸಿಎಟಿ ಆದೇಶವನ್ನು ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಬಿ ಎಂ ಶ್ಯಾಮ್‌ ಪ್ರಸಾದ್‌ ಮತ್ತು ಟಿ ಎಂ ನದಾಫ್‌ ಅವರ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸಿಎಟಿ ಆದೇಶಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿದ ಪೀಠವು, ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ಡಿಸೆಂಬರ್‌ 4ಕ್ಕೆ ಮುಂದೂಡಿತು.

ಅಲೋಕ್​ ಕುಮಾರ್ ವಿರುದ್ಧ ಟೆಲಿಫೋನ್​ ಕದ್ದಾಲಿಕೆ ಆರೋಪವಿತ್ತು. ಈ ಸಂಬಂಧ ತನಿಖೆ ನಡೆಸಿದ್ದ ಸಿಬಿಐ, ಕ್ರಿಮಿನಲ್​ ಆರೋಪವಿಲ್ಲ ಎಂದು ತಿಳಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿರುವುದಾಗಿ ವಿಶೇಷ ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಿತ್ತು.ಅಲ್ಲದೆ, ಪ್ರಕರಣ ಸಂಬಂಧ ಇಲಾಖಾವಾರು ತನಿಖೆ ನಡೆಸಲು ಸರ್ಕಾರಕ್ಕೆ ಸೂಚನೆ ನೀಡಿತ್ತು.

ಇದನ್ನು ಪ್ರಶ್ನಿಸಿ ಅಲೋಕ್​ ಕುಮಾರ್ ಸಿಎಟಿ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಸಿಎಟಿ, ಇಲಾಖಾವಾರು ತನಿಖೆ ರದ್ದುಪಡಿಸಿ ಆದೇಶಿಸಿದೆ. ಆ ಆದೇಶವನ್ನು ಪ್ರಶ್ನಿಸಿ ಸರ್ಕಾರವು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. ವಾದ ಆಲಿಸಿದ ನ್ಯಾಯಪೀಠ, ಸಿಎಟಿ ಆದೇಶಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್