ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ 
ರಾಜ್ಯ

ಬೆಂಗಳೂರು: ಸರ್ಕಾರಿ ಹಾಸ್ಟೆಲ್‌ಗಳಿಗೆ ಲೋಕಾಯುಕ್ತ ದಿಢೀರ್ ಭೇಟಿ, ಅವ್ಯವಸ್ಥೆ ದರ್ಶನ...!

ನಗರದ ಎಂಜಿ ರಸ್ತೆಯಲ್ಲಿರುವ ಸರ್ಕಾರಿ ವಿಜ್ಞಾನ ಕಾಲೇಜು ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರು ಅನಿರೀಕ್ಷಿತ ಭೇಟಿ ನೀಡಿದರು.

ಬೆಂಗಳೂರು: ಸಾಲು ಸಾಲು ದೂರು ಹಿನ್ನೆಲೆಯಲ್ಲಿ ನಗರದಲ್ಲಿರುವ ಹಾಸ್ಟೆಲ್‌ಗಳಿಗೆ ಲೋಕಾಯುಕ್ತರು ಮತ್ತು ಉಪಲೋಕಾಯುಕ್ತರು ಗುರುವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಗರದ ಎಂಜಿ ರಸ್ತೆಯಲ್ಲಿರುವ ಸರ್ಕಾರಿ ವಿಜ್ಞಾನ ಕಾಲೇಜು ಬಾಲಕರ ಹಾಸ್ಟೆಲ್‌ಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರು ಅನಿರೀಕ್ಷಿತ ಭೇಟಿ ನೀಡಿದರು.

ಈ ವೇಳೆ ವಿದ್ಯಾರ್ಥಿಗಳ ಶೋಚನೀಯ ಸ್ಥಿತಿ ಲೋಕಾಯುಕ್ತರ ಗಮನಕ್ಕೆ ಬಂದಿತು. ಸರ್ಕಾರ ಪ್ರತೀ ಕೋಣೆಗೆ 4 ವಿದ್ಯಾರ್ಥಿಗಳಿಗೆ ಅವಕಾಶ ನೀಡಿದ್ದರೂ, ಹಾಸ್ಟೆಲ್ ನಲ್ಲಿ 6-7 ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿದೆ. ಹೀಗಾಗಿ ನಾಲ್ಕು ವಿದ್ಯಾರ್ಥಿಗಳು ಮಂಚಗಳ ಮೇಲೆ ಮಲಗುತ್ತಿದ್ದರೆ, ಉಳಿವರು ನೆಲದಲ್ಲಿ ಮಲಗುತ್ತಿರುವುದು ಕಂಡು ಬಂದಿದೆ.

ಹಾಸ್ಟೆಲ್‌ನಲ್ಲಿ ಯಾವುದೇ ಇಂಡೆಂಟ್ ಮತ್ತು ಸ್ಟಾಕ್ ಪುಸ್ತಕವನ್ನು ನಿರ್ವಹಿಸಲಾಗಿಲ್ಲ, ಇದು ದುರುಪಯೋಗಕ್ಕೆ ದಾರಿ ಮಾಡಿಕೊಡುತ್ತಿದೆ. ಪ್ರತಿ ತಿಂಗಳು ಸಮಾಜ ಕಲ್ಯಾಣ ಇಲಾಖೆಯಿಂದ 25,000 ರೂ. ಮಂಜೂರು ಮಾಡಲಾಗುತ್ತಿದೆ, ಆದರೂ ಹಾಸ್ಟೆಲ್ ಅನ್ನು ಕ್ರಮಬದ್ಧವಾಗಿ ಇಡಲಾಗಿಲ್ಲ. ನೈರ್ಮಲ್ಯವಿಲ್ಲ. 373 ವಿದ್ಯಾರ್ಥಿಗಳಿಗೆ ಕೇವಲ 38 ಶೌಚಾಲಯಗಳಿದ್ದು, ಅವು ಅನೈರ್ಮಲ್ಯದಿಂದ ಕೂಡಿವೆ ಎಂಬುದನ್ನು ಉಪ ಲೋಕಾಯುಕ್ತರು ಗಮನಿಸಿದರು.

ಪರಿಶೀಲನೆ ವೇಳೆ ಲೋಕಾಯುಕ್ತರು, ವಿದ್ಯಾರ್ಥಿಗಳು ಕಿಕ್ಕಿರಿದು ತುಂಬಿರುವುದು ಕಂಡುಬಂದಿದ್ದು, ತಕಣವೇ ವಾರ್ಡನ್ ಮತ್ತು ಅಡುಗೆ ಸಹಾಯಕರನ್ನು ಹೊರಗಡೆ ಕಳುಹಿಸಿ, ಎಲ್ಲಾ ವಿದ್ಯಾರ್ಥಿಗಳನ್ನು ಕರೆಸಿ ಮಾಹಿತಿ ಪಡೆದು ಕೊಂಡಿದ್ದಾರೆ.

ಈ ವೇಳೆ ವಿದ್ಯಾರ್ಥಿಗಳು ತಮಗೆ ನೀಡುವ ಬೆಳೆಗಿನ ಉಪಾಹಾರವು ಗುಣಮಟ್ಟದಿಂದ ಕೂಡಿರುವುದಿಲ್ಲ. ಮಧ್ಯಾಹ್ನ ಮತ್ತು ರಾತ್ರಿ ನೀಡುವ ಅನ್ನ ಬೆಂದಿರುವುದಿಲ್ಲ ಹಾಗೂ ಸಾರಿನಲ್ಲಿ ತರಕಾರಿ ಯಾಗಲೀ, ಬೇಳೆಯಾಗಲೀ ಇರುವುದಿಲ್ಲ ಎಂದು ದೂರಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ, ವರದಿ ನೀಡಿ ಎಂದು ಲೋಕಾಯುಕ್ತರು, ಪೊಲೀಸರಿಗೆ ಸೂಚಿಸಿದರು.

ಈ ನಡುವೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ ಎನ್ ಫಣೀಂದ್ರ ಮತ್ತು ನ್ಯಾಯಮೂರ್ತಿ ಬಿ ವೀರಪ್ಪ ಅವರು ವಿಜಯನಗರದಲ್ಲಿರುವ ಸರ್ಕಾರಿ ಬಾಲಕರ ವಸತಿ ನಿಲಯಗಳು, ಜಕ್ಕೂರು ಮತ್ತು ಯಲಹಂಕದ ಸರ್ಕಾರಿ ಮಹಿಳಾ ವಸತಿ ನಿಲಯಗಳು ಮತ್ತು ನಗರದ ಹೆಸರಘಟ್ಟ ಮುಖ್ಯ ರಸ್ತೆಯಲ್ಲಿರುವ ಸರ್ಕಾರಿ ಪೋಸ್ಟ್ ಮೆಟ್ರಿಕ್/ಪಿಜಿ ಕಾಲೇಜು ಮಹಿಳಾ ವಸತಿ ನಿಲಯಕ್ಕೂ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಈ ವಸತಿ ನಿಲಯಗಳನ್ನು ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆ ನಡೆಸುತ್ತಿದ್ದು, ಅಕ್ರಮಗಳನ್ನು ಪರಿಶೀಲಿಸಲು ಲೋಕಾಯುಕ್ತ ಮತ್ತು ಉಪ ಲೋಕಾಯುಕ್ತರ 14 ತಂಡಗಳು ಏಕಕಾಲದಲ್ಲಿ ಭೇಟಿ ನೀಡಿ, ಪರಿಶೀಲನೆ ನಡೆಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ನ್ಯೂ ಟೀಂ ಘೋಷಣೆ; ರಾಮ್ ಮಾಧವ್, ಸ್ಮೃತಿ ಜೊತೆ ಕರ್ನಾಟಕದ ಇಬ್ಬರಿಗೆ ಪ್ರಮುಖ ಸ್ಥಾನ!

ಪ್ರಧಾನಿ ಮೋದಿ ಭೇಟಿ ಮಾಡಿದ ದೇವೇಂದ್ರ ಫಡ್ನವೀಸ್; ಮಹಾರಾಷ್ಟ್ರ ರಾಜಕೀಯಕ್ಕೆ ಗುಡ್ ಬೈ?

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ರಾಜ್ಯಾದ್ಯಂತ ತೀವ್ರಗೊಂಡ ಆಹಾರ ಸುರಕ್ಷತಾ ಅಭಿಯಾನ: 1,849 ಹೋಟೆಲ್‌, ರೆಸ್ಟೋರೆಂಟ್ ಗಳಲ್ಲಿ ತಪಾಸಣೆ- ಯು.ಟಿ. ಖಾದರ್

ನಾನು ರಾತ್ರೋರಾತ್ರಿ ಸ್ಟಾರ್ ಆದವನಲ್ಲ, ಕಷ್ಟಪಟ್ಟು ಸ್ಟಾರ್ ಆಗಿದ್ದೇನೆ: ಕಷ್ಟದ ದಿನಗಳನ್ನು ನೆನೆದ ರಾಕಿಂಗ್ ಸ್ಟಾರ್ ಯಶ್‌