ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ 
ರಾಜ್ಯ

ನೀರಾವರಿ ಯೋಜನೆ: ಡಿಕೆಶಿ ಕೊಂಡಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರದ ಅನ್ಯಾಯ ಬಗ್ಗೆ ಮೌನ ತಾಳಿರುವ BJP-JDS ಸಂಸದರ ವಿರುದ್ಧ ಕಿಡಿ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಧ್ವನಿ ಎತ್ತುವುದೇ ಇಲ್ಲ.

ಬೆಂಗಳೂರು: ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ಅರ್ಜಿ ಸುಪ್ರೀಂಕೋರ್ಟ್ ನಲ್ಲಿ ವಜಾ ಆಗಲು ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ಅವರ ಪ್ರಯತ್ನ ಶ್ಲಾಘನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮೆಚ್ಚುಗೆ ವ್ಯಕ್ತಪಡಿಸಿದ್ದು, ಇದೇ ವೇಳೆ ಕೇಂದ್ರ ಸರ್ಕಾರದ ಅನ್ಯಾಯದ ಬಗ್ಗೆ ಮೌನ ತಾಳಿರುವ ಬಿಜೆಪಿ ಹಾಗೂ ಜೆಡಿಎಸ್ ಸಂಸದರ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ರಚಿಸಿರುವ ನೀರಿನ ಹೆಜ್ಜೆ; ವಿವಾದ-ಒಪ್ಪಂದ-ತೀರ್ಪು ಕೃತಿಯನ್ನು ಬಿಡುಗಡೆ ಮಾಡಿ ಮುಖ್ಯಮಂತ್ರಿಗಳು ಮಾತನಾಡಿದರು.

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಧ್ವನಿ ಎತ್ತುವುದೇ ಇಲ್ಲ ಎಂದ ಕಿಡಿಕಾರಿದರು.

ಶಿವಕುಮಾರ್ ಅವರು ಜಲಸಂಪನ್ಮೂಲ ಸಚಿವರಾಗಿ ತಮ್ಮ ಅನುಭವ ಮತ್ತು ಗ್ರಹಿಕೆಯನ್ನು ಹಾಗೂ ನೀರಿನ ಮಹತ್ವವನ್ನು ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ. ನಾನು ಪುಸ್ತಕವನ್ನು ಪೂರ್ತಿ ಓದುತ್ತೇನೆ. ನದಿ ವಿವಾದಗಳ ಆಳ ಅಗಲವನ್ನು ಜನರಿಗೆ ತಿಳಿಸುವ ಕೆಲಸವನ್ನು ನೀರಿನ ಹೆಜ್ಜೆ ಪುಸ್ತಕ ಮಾಡಲಿದೆ. ರಾಜ್ಯದಲ್ಲಿ 2028 ರಲ್ಲೂ ಕಾಂಗ್ರೆಸ್ಸೇ ಅಧಿಕಾರಿಕ್ಕೆ ಬರುವುದು ಶತಸಿದ್ಧ. ಮಹದಾಯಿ, ಕೃಷ್ಣಾ ಮತ್ತು ಕಾವೇರಿ ಸೇರಿ ಅಂತಾರಾಜ್ಯ ಜಲ ವಿವಾದಗಳು ಇನ್ನೂ ಜೀವಂತವಾಗಿದ್ದು, ರಾಜ್ಯಕ್ಕೆ ಪೂರ್ತಿ ಅನುಕೂಲಕರವಾದ ನ್ಯಾಯಬದ್ಧ ತೀರ್ಮಾನಗಳು ಇನ್ನೂ ಆಗಬೇಕಿದೆ.

ಮೇಕೆದಾಟಿನಲ್ಲಿ 67 ಟಿಎಂಸಿ ನೀರನ್ನು ಶೇಖರಣೆ ಮಾಡಲಾಗುತ್ತದೆ. ಈ ಯೋಜನೆಯಲ್ಲಿ ನಮಗಿಂತ ಹೆಚ್ಚು ತಮಿಳುನಾಡಿಗೇ ಅನುಕೂಲವಿದೆ. ಆದರೂ ಅವರು ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ತಮಿಳುನಾಡು ಸರ್ಕಾರ ಕೇವಲ ರಾಜಕೀಯ ಕಾರಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. ಇದನ್ನು ನಾವು ವಿರೋಧಿಸಿ ಪಾದಯಾತ್ರೆ ನಡೆಸಿದೆವು. ಪಾದಯಾತ್ರೆಗೆ ಹಲವು ಟೀಕೆಗಳು ಬಂದರೂ ನಾವು ಎದೆಗುಂದದೆ ಪಾದಯಾತ್ರೆ ಯಶಸ್ವಿಗೊಳಿಸಿದೆವು.

ಮತ್ತೊಂದು ಕಡೆ ಕೃಷ್ಣಾ ನದಿ ನೀರಿನ ವಿವಾದದಲ್ಲೂ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಮಾಡಿಲ್ಲ. ಜೆಡಿಎಸ್ ಪಕ್ಷವಾಗಲೀ, ಬಿಜೆಪಿ ಪಕ್ಷವಾಗಲೀ, ಈ ಪಕ್ಷಗಳ ಸಂಸದರಾಗಲೀ ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆಯಾಗಲೀ, ಆರ್ಥಿಕವಾಗಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಗೆಯುತ್ತಿರುವ ದ್ರೋಹದ ಬಗ್ಗೆಯೂ ಮಾತಾಡುವುದಿಲ್ಲ. ಇಷ್ಟು ಮಾತ್ರವಲ್ಲದೆ ಕಬ್ಬು ಬೆಳಗಾರರಿಗೆ ದ್ರೋಹ ಬಗೆದಿರುವುದೂ ಕೇಂದ್ರ ಸರ್ಕಾರ. ಈ ಬಗ್ಗೆಯೂ ಬಿಜೆಪಿ, ಜೆಡಿಎಸ್ ಸಂಸದರು ಬಾಯಿ ಬಿಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶ್ರೀನಗರ ನೌಗಾಮ್ ಪೊಲೀಸ್ ಠಾಣೆಯಲ್ಲಿ ಭಾರೀ ಸ್ಫೋಟ: 9 ಸಾವು, 27 ಮಂದಿ ಗಾಯ, ದೆಹಲಿ ಸ್ಫೋಟ ಬೆನ್ನಲ್ಲೇ ಮತ್ತೊಂದು ಘಟನೆ

ಬೆಳೆಗಾರರ ಹೆಸರಲ್ಲಿ ಕಬ್ಬಿನ ಟ್ರ್ಯಾಕ್ಟರ್'ಗಳಿಗೆ ಬೆಂಕಿ: ತನಿಖೆಗೆ ರಾಜ್ಯ ಸರ್ಕಾರ ಆದೇಶ

ಮುಸ್ಲಿಂ-ಯಾದವ್ RJD ತುಷ್ಠಿಕರಣಕ್ಕೆ ಬುದ್ಧಿ ಕಲಿಸಿದ್ದು ನಮ್ಮ ಮಹಿಳೆ-ಯುವಕರ M-Y ಸೂತ್ರ: ಪ್ರಧಾನಿ ಮೋದಿ

ಬಿಹಾರ ಚುನಾವಣೆಯಲ್ಲಿ ಅನ್ಯಾಯ; ಫಲಿತಾಂಶಗಳು ಆಘಾತಕಾರಿ: ಹೀನಾಯ ಸೋಲಿನ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ!

ಬಿಹಾರ ಸಿಎಂ ಗಾದಿಯಲ್ಲಿ ಮುಂದುವರೆಯುತ್ತಾರಾ ನಿತೀಶ್ ಕುಮಾರ್?: ಮೋದಿಯ ಹನುಮಾನ್ ಚಿರಾಗ್ ಪಾಸ್ವಾನ್ ಹೇಳಿದ್ದೇನು?

SCROLL FOR NEXT