ಸಾಲುಮರದ ತಿಮ್ಮಕ್ಕನಿಗೆ ಅಂತಿಮ ನಮನ ಸಲ್ಲಿಸಿದ ಈಶ್ವರ ಖಂಡ್ರೆ 
ರಾಜ್ಯ

ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ಪ್ರಶಸ್ತಿ; ರಾಜ್ಯದ 114 ಸ್ಥಳದಲ್ಲಿ 114 ಸಸಿ ನೆಟ್ಟು ಪೋಷಣೆ

ಇಂದು ಮಧ್ಯಾಹ್ನ ಜ್ಞಾನಭಾರತಿ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಶತಾಯುಷಿ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆ ನೆರವೇರಿತು.

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಶುಕ್ರವಾರ ನಿಧನರಾದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಗೌರವಾರ್ಥ ರಾಜ್ಯದ 114 ಸ್ಥಳದಲ್ಲಿ ತಲಾ 114 ಸಸಿ ನೆಟ್ಟು ಪೋಷಣೆ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಅವರು ಶನಿವಾರ ಹೇಳಿದ್ದಾರೆ.

114 ವರ್ಷ ಜೀವಿಸಿದ್ದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಗೌರವಾರ್ಥ ರಾಜ್ಯದ 114 ಸ್ಥಳಗಳಲ್ಲಿ 114 ಸಸಿ ನೆಟ್ಟು ಪೋಷಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಇಂದು ಮಧ್ಯಾಹ್ನ ಜ್ಞಾನಭಾರತಿ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಶತಾಯುಷಿ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆ ನೆರವೇರಿತು.

ಈ ವೇಳೆ ಮಹಾನ್ ಪರಿಸರ ಪ್ರೇಮಿಗೆ ಅಂತಿಮ ನಮನ ಸಲ್ಲಿಸಿದ ನಂತರ ಮಾತನಾಡಿದ ಈಶ್ವರ ಖಂಡ್ರೆ ಅವರು, ಮರಗಳನ್ನೇ ಮಕ್ಕಳಂತೆ ಮಮಕಾರದಿಂದ ಬೆಳೆಸಿ ವಿಶ್ವಕ್ಕೇ ವೃಕ್ಷಗಳ ಮಹತ್ವ ಸಾರಿದ ಸಾಲುಮರದ ತಿಮ್ಮಕ್ಕ ಅವರ ಹೆಸರಲ್ಲಿ ಸಸಿನೆಡುವ ಮೂಲಕ ಅರಣ್ಯ ಇಲಾಖೆ ಗೌರವ ಸಲ್ಲಿಸಲಿದೆ ಎಂದರು.

ಅರಣ್ಯ ಇಲಾಖೆ ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯಾಗಿ ಪುರಸ್ಕರಿಸಿತ್ತು. ಅಜ್ಜಿಯ ಪ್ರೇರಣೆಯಿಂದ ನೂರಾರು ಜನ ತಮ್ಮ ಕೈಲಾದಷ್ಟು ಸಸಿ ನೆಟ್ಟು ಪೋಷಿಸುತ್ತಿದ್ದಾರೆ. ಲಕ್ಷಾಂತರ ಪರಿಸರ ಪ್ರೇಮಿಗಳಿಗೆ ಪ್ರೇರಣೆಯಾಗಿದ್ದ ತಿಮ್ಮಕ್ಕ ಅವರ ನಿಧನದಿಂದ ರಾಜ್ಯ ನಿಷ್ಠಾವಂತ ಪರಿಸರ ಕಾಳಜಿಯ ಮಹಾಜೀವಿಯನ್ನು ಕಳೆದುಕೊಂಡಿದೆ ಎಂದು ಸಚಿವರು ದುಃಖ ವ್ಯಕ್ತಪಡಿಸಿದರು.

ಸಾಲುಮರದ ತಿಮ್ಮಕ್ಕ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಈಶ್ವರ ಖಂಡ್ರೆ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Cash for query: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾಗೆ ಸಂಕಷ್ಟ, ಆರೋಪ ಪಟ್ಟಿ ಸಲ್ಲಿಸಲು ಸಿಬಿಐಗೆ ಲೋಕಪಾಲ ಅನುಮತಿ!

Microsoft ತಾಂತ್ರಿಕ ಸಿಬ್ಬಂದಿ ಹೆಸರಲ್ಲಿ ಅಮೆರಿಕನ್ನರಿಗೆ ವಂಚನೆ: ಬೆಂಗಳೂರಿನಲ್ಲಿ 21 ಮಂದಿ ಬಂಧನ

ಬಿಹಾರದಲ್ಲಿ ಟೈಗರ್‌ ಅಬಿ ಜಿಂದಾ ಹೈ (ನೇರ ನೋಟ)

ಬಿಜೆಪಿಗೆ ಬಿಸಿ ತುಪ್ಪವಾದ ಚಿರಾಗ್ ಪಾಸ್ವಾನ್: ನಿತೀಶ್ ಅವರೇ ನಮ್ಮ ಸಿಎಂ; ನೂತನ ಸರ್ಕಾರ ಸೇರುತ್ತೇವೆ ಎಂದ ಕೇಂದ್ರ ಸಚಿವ! Video

ನವೆಂಬರ್ ಕ್ರಾಂತಿ ಇಲ್ಲ: ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್; 8-12 ಸಚಿವರಿಗೆ ಕೊಕ್? ಆಕಾಂಕ್ಷಿಗಳ ಪಟ್ಟಿ!

SCROLL FOR NEXT