ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ 
ರಾಜ್ಯ

ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತ; ಡಿಸೆಂಬರ್ 4ಕ್ಕೆ ಮುಂದಿನ ವಿಚಾರಣೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳನ್ನು ಸಿಎಂ ಕುಟುಂಬದ ಸದಸ್ಯರಿಗೆ ಹಂಚಿಕೆ ಮಾಡುವಲ್ಲಿ ಮುಖ್ಯಮಂತ್ರಿ ಮತ್ತು ಇತರರು ಅಕ್ರಮ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರು ಶನಿವಾರ ತನಿಖಾ ಸ್ಥಿತಿಗತಿ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆಯನ್ನು ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಇಂದು ನಡೆಸಿತು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳನ್ನು ಸಿಎಂ ಕುಟುಂಬದ ಸದಸ್ಯರಿಗೆ ಹಂಚಿಕೆ ಮಾಡುವಲ್ಲಿ ಮುಖ್ಯಮಂತ್ರಿ ಮತ್ತು ಇತರರು ಅಕ್ರಮ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಪ್ರಕರಣದ ವಿಚಾರಣೆ ವೇಳೆ ಅರ್ಜಿದಾರರು ಹಾಗೂ ಜಾರಿ ನಿರ್ದೇಶನಾಲಯ ಹಾಗೂ ಲೋಕಾಯುಕ್ತ ಪರವಾಗಿ ವಿಶೇಷ ಪಬ್ಲಿಕ್ ಪ್ಲಾಸಿಕ್ಯೂಟರ್ (SPP) ಉಪಸ್ಥಿತಿದ್ದರು. ಸಂಕ್ಷಿಪ್ತ ವಿಚಾರಣೆಯ ಸಮಯದಲ್ಲಿ, ಲೋಕಾಯುಕ್ತದ SPP ಮುಡಾ ಸಂಬಂಧಿತ ಆರೋಪಗಳ ಕುರಿತು ನಡೆಯುತ್ತಿರುವ ತನಿಖೆಯ ಸ್ಥಿತಿಗತಿ ವರದಿಯನ್ನು ಸಲ್ಲಿಸಿದರು. ವರದಿಯ ಪ್ರತಿಯನ್ನು ದೂರುದಾರರಿಗೆ ಹಸ್ತಾಂತರಿಸಲಾಯಿತು.

ಸದ್ಯ ತನಿಖೆ ಪ್ರಗತಿಯಲ್ಲಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದ ಪ್ರಾಸಿಕ್ಯೂಟರ್, ಹೆಚ್ಚಿನ ವಿವರವಾದ ವರದಿ ಸಲ್ಲಿಸಲು ಹೆಚ್ಚಿನ ಸಮಾಯವಕಾಶವನ್ನು ಕೋರಿದರು. ಸಲ್ಲಿಕೆಯನ್ನು ಸ್ವೀಕರಿಸಿದ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಡಿಸೆಂಬರ್ 4 ಕ್ಕೆ ಮುಂದೂಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Cash for query: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾಗೆ ಸಂಕಷ್ಟ; ಆರೋಪ ಪಟ್ಟಿ ಸಲ್ಲಿಸಲು ಸಿಬಿಐಗೆ ಲೋಕಪಾಲ ಅನುಮತಿ!

Microsoft ತಾಂತ್ರಿಕ ಸಿಬ್ಬಂದಿ ಹೆಸರಲ್ಲಿ ಅಮೆರಿಕನ್ನರಿಗೆ ವಂಚನೆ: ಬೆಂಗಳೂರಿನಲ್ಲಿ 21 ಮಂದಿ ಬಂಧನ

ಬಿಹಾರದಲ್ಲಿ ಟೈಗರ್‌ ಅಬಿ ಜಿಂದಾ ಹೈ (ನೇರ ನೋಟ)

ನೌಗಮ್ ಠಾಣಾ ಸ್ಫೋಟ: ರಸಾಯನಶಾಸ್ತ್ರ ಮತ್ತು ನಿರ್ಲಕ್ಷ್ಯಗಳ ದುರಂತ ಸಂಗಮ

ಬಿಜೆಪಿಗೆ ಬಿಸಿ ತುಪ್ಪವಾದ ಚಿರಾಗ್ ಪಾಸ್ವಾನ್: ನಿತೀಶ್ ಅವರೇ ನಮ್ಮ ಸಿಎಂ; ನೂತನ ಸರ್ಕಾರ ಸೇರುತ್ತೇವೆ ಎಂದ ಕೇಂದ್ರ ಸಚಿವ! Video

SCROLL FOR NEXT