ಬೆಂಗಳೂರು: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ (KPYCC) ಶನಿವಾರ ವಿವಿಧ ರಾಜ್ಯಗಳಲ್ಲಿ ನಡೆದ ಚುನಾವಣೆಗಳಲ್ಲಿ ದೊಡ್ಡ ಪ್ರಮಾಣದ 'ವೋಟ್ ಚೋರಿ' (ಮತ ಕಳ್ಳತನ) ನಡೆದಿದೆ ಎಂದು ಆರೋಪಿಸಿ ಭಾರತ ಚುನಾವಣಾ ಆಯೋಗ ಮತ್ತು ಕೇಂದ್ರ ಸೂಕ್ತ ಉತ್ತರ ನೀಡಬೇಕೆಂದು ಒತ್ತಾಯಿಸಿದೆ.
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ 'ಅಗಾಧ ಪ್ರಮಾಣದಲ್ಲಿ ಮತ ಕಳ್ಳತನ' ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿದ ನಂತರ ಈ ಪ್ರತಿಭಟನೆ ನಡೆದಿದೆ. ರಾಹುಲ್ ಗಾಂಧಿ ಫಲಿತಾಂಶ ಪ್ರಕಟಣೆಗೆ ಮುನ್ನವೇ ಚುನಾವಣಾ ಆಯೋಗ ಮತ್ತು ಬಿಜೆಪಿ ಕಡೆ ಬೊಟ್ಟು ಮಾಡಿ ಆರೋಪ ಮಾಡಿದ್ದರು. ನ್ಯಾಯಯುತವಲ್ಲದ ಇಂತಹ ಚುನಾವಣೆಯಲ್ಲಿ ನಾವು ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯ ನೇತೃತ್ವವನ್ನು ಭಾರತೀಯ ಯುವ ಕಾಂಗ್ರೆಸ್ (IYC) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್, ಐವೈಸಿ ಉಸ್ತುವಾರಿ ಮನೀಶ್ ಶರ್ಮಾ, ಕೆಪಿವೈಸಿಸಿ ಅಧ್ಯಕ್ಷ ಮಂಜುನಾಥ್ ಗೌಡ ವಹಿಸಿದ್ದರು. ಕಾರ್ಮಿಕ ಸಚಿವ ಸಂತೋಷ್ ಲಾಡ್, ರಾಜ್ಯಸಭಾ ಸಂಸದ ಜಿ ಸಿ ಚಂದ್ರಶೇಖರ್ ಸೇರಿದಂತೆ ಕರ್ನಾಟಕದ ಹಲವಾರು ಹಿರಿಯ ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು.
ಬೆಂಗಳೂರಿನಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಪ್ರತಿಭಟನಾಕಾರರು ಮೆರವಣಿಗೆ ನಡೆಸಿ, ಚುನಾವಣಾ ವ್ಯವಸ್ಥೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಯನ್ನು ಪಾರದರ್ಶಕತೆಯಿಂದ ನಡೆಸಿ ಕ್ರಮಗಳನ್ನು ಕೋರಿ ಜ್ಞಾಪಕ ಪತ್ರವನ್ನು ಸಲ್ಲಿಸಿದರು.
2024 ರ ಹರಿಯಾಣ ವಿಧಾನಸಭಾ ಚುನಾವಣೆ, ಕರ್ನಾಟಕ ಮತ್ತು ಮಹಾರಾಷ್ಟ್ರ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ಇತ್ತೀಚೆಗೆ ಮತ ಕಳ್ಳತನ ಆರೋಪ ಮಾಡಿದೆ.
ಕಾಂಗ್ರೆಸ್ ಮತ್ತು ಇಂಡಿಯಾ ಬಣವು ಬಿಹಾರ ಚುನಾವಣಾ ಫಲಿತಾಂಶಗಳ ಆಳವಾದ ಪರಿಶೀಲನೆಯನ್ನು ನಡೆಸುತ್ತದೆ. ಪ್ರಜಾಪ್ರಭುತ್ವವನ್ನು ಉಳಿಸಲು ಹೆಚ್ಚು ಪರಿಣಾಮಕಾರಿ ಪ್ರಯತ್ನಗಳನ್ನು ಮುಂದುವರಿಸುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದರು.