ಬಾಗಲಕೋಟೆಯ ಮುಧೋಳದಲ್ಲಿ ಬೆಂಬಲ ಬೆಲೆಗಾಗಿ ಕಬ್ಬು ಬೆಳಗಾರರು ಮಾಡಿದ್ದ ಪ್ರತಿಭಟನೆ ವೇಳೆ ಟ್ರ್ಯಾಕ್ಟರ್ಗಳಿಗೆ ಬೆಂಕಿ, ಕಲ್ಲು ತೂರಾಟ ಮಾಡಿದ್ದ ಪ್ರಕರಣದ ಸಂಬಂಧ ಮೂರು ಪ್ರತ್ಯೇಕ ಎಫ್‌ಐಆರ್ ದಾಖಲಾಗಿವೆ. ಪ್ರತಿಭಟನೆ ವೇಳೆ ಉದ್ರಿಕ್ತ ಪ್ರತಿಭಟನಾಕರರು ಸಂಗಾನಟ್ಟಿ ಬಳಿ ಎರಡು ಟ್ರೇಲರ್ನ ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿದ್ದರು. ನಂತರ ಗೋದಾವರಿ ಕಾರ್ಖಾನೆ ಆವರಣದಲ್ಲಿನ 20ಕ್ಕೂ ಅಧಿಕ ಟ್ರ್ಯಾಕ್ಟರ್ಗಳಿಗೆ ಬೆಂಕಿ ಹಚ್ಚಲಾಗಿತ್ತು. ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋ ಆಧರಿಸಿ ಮೂವರು ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದೆ. ಅಲ್ಲದೆ ಇದೇ ವೇಳೆ ಎಎಸ್ಪಿ ಮಹಾಂತೇಶ್ವರ ಜಿದ್ದಿ ಅವರ ಕಾಲು ಮುರಿದಿತ್ತು. ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಕಲ್ಲು ತೂರಾಟ, ಪೊಲೀಸರಿಗೆ ಗಾಯ, ಪೊಲೀಸ್ ವಾಹನ ಜಖಂಗೊಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಭಟನಾಕರರ ಗುಂಪಿನ 10 ಜನರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ.