ಪ್ರಾತಿನಿಧಿಕ ಚಿತ್ರ online desk
ರಾಜ್ಯ

ಕೃಷಿ ಮೇಳದಿಂದ ವಾಪಸ್ಸಾಗುತ್ತಿದ್ದ ರೈತನಿಗೆ ಮಚ್ಚು ತೋರಿಸಿ ಬೆದರಿಕೆ; 100 ರೂಪಾಯಿ ದೋಚಿದ ಮೂವರು!

ಈ ಘಟನೆಯನ್ನು ಮತ್ತೊಬ್ಬ ದಾರಿಹೋಕ ರೆಕಾರ್ಡ್ ಮಾಡುತ್ತಿರುವುದನ್ನು ಗಮನಿಸಿದ ಆರೋಪಿಗಳಲ್ಲಿ ಒಬ್ಬಾತ ಆತನ ಕಡೆಗೆ ಮಚ್ಚನ್ನು ಬೀಸಿದ್ದಾನೆ. ಸದ್ಯ ದಾರಿಹೋಕ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾನೆ.

ಬೆಂಗಳೂರು: ಜಿಕೆವಿಕೆಯಲ್ಲಿ ನಡೆದ ಕೃಷಿ ಮೇಳದಿಂದ ಹಿಂತಿರುಗುತ್ತಿದ್ದ ರೈತನೊಬ್ಬನನ್ನು ಶನಿವಾರ ಬೆಳಗಿನ ಜಾವ ಆರ್‌ಎಂಸಿ ಯಾರ್ಡ್ ಪೊಲೀಸ್ ವ್ಯಾಪ್ತಿಯ ಯಶವಂತಪುರ ರೈಲು ನಿಲ್ದಾಣದ ಬಳಿ ಮಚ್ಚಿನಿಂದ ಬೆದರಿಸಿ 100 ರೂ. ದೋಚಿರುವ ಘಟನೆ ನಡೆದಿದೆ.

ಈ ಘಟನೆಯ ವಿಡಿಯೋಗಳು ವೈರಲ್ ಆಗಿದ್ದು, ಅನೇಕ ನೆಟ್ಟಿಗರು ನಗರದ ಕಾನೂನು ಸುವ್ಯವಸ್ಥೆಯನ್ನು ಟೀಕಿಸಿದ್ದಾರೆ ಮತ್ತು ರಾತ್ರಿ ಗಸ್ತು ತಿರುಗುವ ಪೊಲೀಸರ ಪರಿಣಾಮಕಾರಿತ್ವವನ್ನು ಪ್ರಶ್ನಿಸಿದ್ದಾರೆ.

ಬೆಳಗಿನ ಜಾವ 3.15ರ ಸುಮಾರಿಗೆ ಸ್ಕೂಟರ್‌ನಲ್ಲಿ ಬಂದ ಮೂವರು ವ್ಯಕ್ತಿಗಳು, ಮಚ್ಚು ತೋರಿಸಿ ಪಾದಚಾರಿಗಳಿಗೆ ಬೆದರಿಸಿ ದರೋಡೆ ಮಾಡಲು ಪ್ರಯತ್ನಿಸಿದ್ದಾರೆ. ಅವರಲ್ಲಿ ಒಬ್ಬಾತ ರೈತನ ಬಳಿಗೆ ಬಂದು, ಅವರನ್ನು ನಿಂದಿಸಿ, ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾನೆ. ಗಾಡಿಗೆ ಇಂಧನ ಹಾಕಿಸಲೆಂದು 100 ರೂ. ದೋಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯನ್ನು ಮತ್ತೊಬ್ಬ ದಾರಿಹೋಕ ರೆಕಾರ್ಡ್ ಮಾಡುತ್ತಿರುವುದನ್ನು ಗಮನಿಸಿದ ಆರೋಪಿಗಳಲ್ಲಿ ಒಬ್ಬಾತ ಆತನ ಕಡೆಗೆ ಮಚ್ಚನ್ನು ಬೀಸಿದ್ದಾನೆ. ಸದ್ಯ ದಾರಿಹೋಕ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾನೆ. ನಂತರ ರೈತ ದೂರು ದಾಖಲಿಸಿದ್ದಾರೆ. ಈ ಸಂಬಂಧ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳು ಮತ್ತು ಆನ್‌ಲೈನ್‌ನಲ್ಲಿ ಪ್ರಸಾರವಾಗುವ ವಿಡಿಯೋಗಳನ್ನು ವಿಶ್ಲೇಷಿಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿಗಳ ಪತ್ತೆಗೆ ಶೋಧಕಾರ್ಯ ಆರಂಭಿಸಲಾಗಿದೆ.

ಈಮಧ್ಯೆ, ಶಾಂತಿನಗರ ಬಳಿ ನಡೆದ ದರೋಡೆ ಎಂದು ಹೇಳಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಮತ್ತೊಂದು ವಿಡಿಯೋ ದರೋಡೆಗೆ ಸಂಬಂಧಿಸಿದ್ದಲ್ಲ ಎಂದು ವಿಲ್ಸನ್ ಗಾರ್ಡನ್ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಚರ್ಚ್ ರಸ್ತೆ ಬಳಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಇದು ಶಂಕಿತ ರಸ್ತೆ ದರೋಡೆ ಪ್ರಕರಣವಾಗಿದೆ ಎಂದು ತಿಳಿಸಿದ್ದಾರೆ.

ಕೆಲಸಕ್ಕೆ ಹೋಗುತ್ತಿದ್ದ 40 ವರ್ಷದ ವ್ಯಕ್ತಿಯೊಬ್ಬ ಮತ್ತೊಬ್ಬ ಬೈಕರ್ ಜೊತೆ ಸಣ್ಣಪುಟ್ಟ ವಾಗ್ವಾದ ನಡೆಸಿದ್ದಾನೆ. ವಿಡಿಯೋದ ಪ್ರಕಾರ, ಸ್ಕೂಟರ್‌ನಲ್ಲಿ ಬಂದ ಮೂವರು ವ್ಯಕ್ತಿಗಳು ಮತ್ತೊಬ್ಬ ಬೈಕರ್‌ನನ್ನು ಅಡ್ಡಗಟ್ಟಿದ್ದಾರೆ. ಅವರಲ್ಲಿ ಇಬ್ಬರು ವಾಹನದಿಂದ ಇಳಿದು, ಆತನೊಂದಿಗೆ ಜಗಳವಾಡಿ, ಆತನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಾಂಗ್ಲಾದೇಶ ಹಿಂಸಾಚಾರ: ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ: ICT ತೀರ್ಪು

"ನನಗೆ ಚಿಂತೆಯೇ ಇಲ್ಲ. ಅಲ್ಲಾಹ್ ಜೀವ ಕೊಟ್ಟಿದ್ದಾನೆ.. ಅವನೇ ತೆಗೆದುಕೊಳ್ಳುತ್ತಾನೆ": ಕೋರ್ಟ್ ತೀರ್ಪಿಗೂ ಮೊದಲು ಶೇಖ್ ಹಸೀನಾ!

Congo copper mine: ಕಾಂಗೋದಲ್ಲಿ ಭೀಕರ ಗಣಿ ಅವಘಡ, ಭೂ ಕುಸಿತದಲ್ಲಿ ಕನಿಷ್ಟ 80 ಮಂದಿ ಸಾವು! Video

ಸೌದಿಯಲ್ಲಿ ಬಸ್–ಡೀಸೆಲ್ ಟ್ಯಾಂಕರ್ ಡಿಕ್ಕಿಯಾಗಿ ಘೋರ ದುರಂತ: 45 ಮಂದಿ ಭಾರತೀಯ ಯಾತ್ರಿಕರು ದುರ್ಮರಣ, ಸಹಾಯವಾಣಿ ಆರಂಭ

ಬಿಹಾರದಲ್ಲಿ ಶಾಕಿಂಗ್ ಟ್ವಿಸ್ಟ್: ಎನ್ ಡಿಎಗೆ ಲಾಲೂ ಪ್ರಸಾದ್ ಪುತ್ರ ತೇಜ್ ಪ್ರತಾಪ್ ಯಾದವ್ ಬೆಂಬಲ!

SCROLL FOR NEXT