ಕೃಷ್ಣಮೃಗಗಳ ಮಾರಣಹೋಮ 
ರಾಜ್ಯ

ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಮಾರಣಹೋಮ: 31ಕ್ಕೇರಿದ ಸಾವಿನ ಸಂಖ್ಯೆ, ನಿರ್ಲಕ್ಷ್ಯವೇ ಕಾರಣ ಎಂದ ತಜ್ಞರು

ಮೃಗಾಲಯದಲ್ಲಿ ಇನ್ನೂ ಏಳು ಕೃಷ್ಣಮೃಗಗಳು ಜೀವ್ಮರಣದ ನಡುವೆ ಹೋರಾಟ ನಡೆಸುತ್ತಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಬೆಳಗಾವಿ: ಬೆಳಗಾವಿಯ ರಾಣಿ ಚನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಮಾರಣಹೋಮವಾಗಿದೆ. ಕೇವಲ ಮೂರು ದಿನಗಳಲ್ಲಿ ಮೃತಪಟ್ಟ ಕೃಷ್ಣಮೃಗಗಳ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.

ಮೃಗಾಲಯದಲ್ಲಿ ಇನ್ನೂ ಏಳು ಕೃಷ್ಣಮೃಗಗಳು ಜೀವ್ಮರಣದ ನಡುವೆ ಹೋರಾಟ ನಡೆಸುತ್ತಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಈ ನಡುವೆ ಬೆಳಗಾವಿಗೆ ಧಾವಿಸಿದ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಹಿರಿಯ ವೈರಾಲಜಿಸ್ಟ್ ಡಾ. ಚಂದ್ರಶೇಖರ್ ಅವರು, ಪರಿಶೀಲನೆ ನಡೆಸಿದ್ದು, ಮರಣೋತ್ತರ ವರದಿಗಳು ಕೃಷ್ಣಮೃಗಗಳ ಸಾವಿಗೆ ರಕ್ತಸ್ರಾವದ ಸೆಪ್ಟಿಸೆಮಿಯಾ (HS) ಕಾರಣವಾಗಿದೆ ಎಂದು ಹೇಳಿದ್ದಾರೆ.

ಮರಣೋತ್ತರ ಪರೀಕ್ಷೆಯ ಸಮಯದಲ್ಲಿ ರಕ್ತಸ್ರಾವದ ಗಾಯಗಳು ಇರುವುದು ಕಂಡು ಬಂದಿದೆ. ಇದು ಬ್ಯಾಕ್ಟೀರಿಯಾದ ಸೋಂಕನ್ನು ಸೂಚಿಸುತ್ತದೆ. ಕೃಷ್ಣಮೃಗಗಳು ಅತ್ಯಂತ ಸೂಕ್ಷ್ಮವಾಗಿರುತ್ತವೆ. ಹಠಾತ್ ತಾಪಮಾನ ಕುಸಿತ ಅಥವಾ ಒತ್ತಡವು ಅವುಗಳ ಸ್ಥಿತಿಯನ್ನು ಮತ್ತಷ್ಟು ಹದಗೆಡಿಸುತ್ತದೆ. ಮರಣವನ್ನು ವೇಗಗೊಳಿಸುತ್ತದೆ ಎಂದು ತಿಳಿಸಿದ್ದಾರೆ.

ಈ ನಡುವೆ ಅಧಿಕಾರಿಗಳ ನಿರ್ಲಕ್ಷ್ಯವೇ ಪ್ರಸ್ತುತದ ಪರಿಸ್ಥಿತಿಗೆ ಕಾರಣವೆಂದು ತಜ್ಞರು ಹೇಳಿದ್ದಾರೆ. ಸೋಮವಾರ ಸ್ಥಳಕ್ಕೆ ಭೇಟಿ ನೀಡಿದ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಕೆ. ರಂಗಸ್ವಾಮಿ, ಬಿಕ್ಕಟ್ಟಿನ ನಿರ್ವಹಣೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು.

ಇಷ್ಟು ಸಾವುಗಳನ್ನು ನೋಡುವುದು ಬೇಸರ ತಂದಿದೆ. ಈ ಪ್ರಕರಣದಲ್ಲಿ ಬಹು ಹಂತಗಳಲ್ಲಿ ನಿರ್ಲಕ್ಷ್ಯ ಕಂಡುಬರುತ್ತಿದೆ. ಮೊದಲ ಸಾವು ಸಂಭವಿಸಿದಾಗಲೇ ಪಶುವೈದ್ಯಕೀಯ ಮತ್ತು ಅರಣ್ಯ ಸಿಬ್ಬಂದಿ ಪ್ರತಿಕ್ರಿಯಿಸುವಲ್ಲಿ ವಿಫಲರಾಗಿದ್ದಾರೆನ ಎಂದು ಹೇಳಿದ್ದಾರೆ.

ಅಂತಿಮ ಪ್ರಯೋಗಾಲಯದ ಫಲಿತಾಂಶಗಳು ಸಾವಿಗೆ ಕಾರಣವನ್ನು ದೃಢಪಡಿಸಿದ ನಂತರವೇ ಕ್ರಮ ಕೈಗೊಳ್ಳಲಾಗುವುದು ಎಂದೂ ತಿಳಿಸಿದ್ದಾರೆ.

ಪ್ರಕರಣ ಸಂಬಂಧ ರಂಗಸ್ವಾಮಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮಾಹಿತಿ ನೀಡಿದ್ದು, ಹಿರಿಯ ಅರಣ್ಯ ಅಧಿಕಾರಿಗಳೊಂದಿಗೆ ಹೆಚ್ಚಿನ ಪರಿಶೀಲನಾ ಸಭೆಗಳನ್ನು ನಡೆಸಲಾಗುವುದು ಎಂದು ಹೇಳಿದ್ದಾರೆ.

ಏತನ್ಮಧ್ಯೆ ಮೃಗಾಲದಲ್ಲಿ ಹುಲಿಗಳು, ಸಿಂಹಗಳು, ಚಿರತೆಗಳು, ಕತ್ತೆಕಿರುಬಗಳು, ಕರಡಿಗಳು, ಮೊಸಳೆಗಳು ಮತ್ತು ಜಿಂಕೆ ಪ್ರಭೇದಗಳು ಸೇರಿದಂತೆ 226 ಪ್ರಾಣಿಗಳನ್ನು ಇರಿಸಲಾಗಿದ್ದು, ಕಟ್ಟುನಿಟ್ಟಾದ ತುರ್ತು ಪ್ರೋಟೋಕಾಲ್‌ಗಳನ್ನು ತಕ್ಷಣ ಜಾರಿಗೊಳಿಸದಿದ್ದರೆ ಸಾಂಕ್ರಾಮಿಕ ರೋಗ ಹರಡಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ.

ಸೋಂಕು ಹರಡಿರುವ ಪ್ರದೇಶದಲ್ಲಿ ಕೃಷ್ಣಮೃಗಗಳಿಗೆ ಕಡಲೆಕಾಯಿ, ನೆನೆಸಿದ ಹೆಸರುಕಾಳು ಮತ್ತು ಹುರುಳಿಕಾಳು, ಕ್ಯಾರೆಟ್, ದ್ವಿದಳ ಧಾನ್ಯಗಳನ್ನು ಒಳಗೊಂಡಿರುವ ಆಹಾರವನ್ನು ನೀಡಲಾಗುತ್ತಿತ್ತು. ಇದೀಗ ಆಹಾರ, ನೀರಿನ ಮೂಲ, ಮಾಲಿನ್ಯ, ಆವರಣದ ನೈರ್ಮಲ್ಯ ಅಥವಾ ಸಿಬ್ಬಂದಿ ನಿರ್ವಹಣೆಯು ಈ ಸಾಂಕ್ರಾಮಿಕ ರೋಗಕ್ಕೆ ಕಾರಣವೇ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕೂಡಲೇ ತುರ್ತು ಕ್ರಮಗಳನ್ನು ಜಾರಿಗೆ ತರದಿದ್ದರೆ, ಉಳಿದ ಕೃಷ್ಣಮೃಗಗಳು ಸಂಭಾವ್ಯವಾಗಿ ಇತರ ಪ್ರಭೇದಗಳು ಕೂಡ ಗಂಭೀರ ಅಪಾಯದಲ್ಲಿ ಸಿಲುಕಲಿವೆ ಎಂದು ವನ್ಯಜೀವಿ ತಜ್ಞರು ಎಚ್ಚರಿಸಿದ್ದಾರೆ.

ಈ ಸಾವಿನ ಪ್ರಮಾಣ ಎಚ್ಚರಿಕೆಯ ಕರೆ ಗಂಟೆಯಾಗಿರಬೇಕು. ತಕ್ಷಣದ ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಇತರೆ ಪ್ರಾಣಿಗಳು ಕೆಲವೇ ದಿನಗಳಲ್ಲಿ ಮೃಗಾಲಯದಿಂದ ಕಣ್ಮರೆಯಾಗಬಹುದು ಎಂದು ಹೇಳಿದ್ದಾರೆ.

ಏತನ್ಮಧ್ಯೆ, ಮೃಗಾಲಯದಲ್ಲಿ ಕಂಟೈನ್ಮೆಂಟ್ ವಲಯಗಳು, ಕ್ವಾರಂಟೈನ್ ಪ್ರೋಟೋಕಾಲ್‌ಗಳು, ವ್ಯಾಕ್ಸಿನೇಷನ್, ಕಣ್ಗಾವಲುಗಳನ್ನು ತೀವ್ರಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಅಲ್-ಫಲಾಹ್ ವಿಶ್ವವಿದ್ಯಾಲಯದ ಕಚೇರಿ-25 ಸ್ಥಳಗಳ ಮೇಲೆ ED ದಾಳಿ, ತೀವ್ರ ಶೋಧ..!

ಸೌದಿ ಅರೇಬಿಯಾ ಬಸ್ ದುರಂತ ಪ್ರಕರಣ: 45 ಮಂದಿ ಪೈಕಿ ಓರ್ವ ಕನ್ನಡಿಗನೂ ಬಲಿ, ಜೀವನಾಧಾರ ಕಳೆದುಕೊಂಡ ಹುಬ್ಬಳ್ಳಿ ಕುಟುಂಬ..!

ಉತ್ತಮ ಜನಪ್ರತಿನಿಧಿಗಳನ್ನು ತಯಾರು ಮಾಡಲು ಒಂದು ವರ್ಷದ ಕೋರ್ಸ್ ಆರಂಭಿಸಲು ಚಿಂತನೆ : ಸಭಾಧ್ಯಕ್ಷ ಯು.ಟಿ. ಖಾದರ್

ದೆಹಲಿ ಸ್ಫೋಟದ ಅಪರಾಧಿಗಳು ಎಲ್ಲೇ ಅಡಗಿದ್ದರೂ ಹಿಡಿದು ಅವರಿಗೆ ಕಠಿಣ ಶಿಕ್ಷೆ ಕೊಡಿಸುತ್ತೇವೆ: ಅಮಿತ್ ಶಾ

ಪ್ರಧಾನಿ ಮೋದಿ ಭೇಟಿಯಾದ ಸಿಎಂ; ರಾಯಚೂರಿಗೆ ಏಮ್ಸ್, ಪ್ರವಾಹ ಪರಿಹಾರಕ್ಕೆ ಮನವಿ

SCROLL FOR NEXT