ನಮ್ಮ ಮೆಟ್ರೊ ನಿಲ್ದಾಣ  
ರಾಜ್ಯ

'ನಾನು ಕೂಡ ಟೆರರಿಸ್ಟ್, ಕನ್ನಡಿಗರ ವಿರೋಧಿ': ನಮ್ಮ ಮೆಟ್ರೊ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಇಮೇಲ್

ಇಮೇಲ್‌ನಲ್ಲಿ, ಮೆಟ್ರೋ ಸಿಬ್ಬಂದಿಯಾದ ತನ್ನ ವಿಚ್ಛೇದಿತ ಪತ್ನಿಗೆ ಡ್ಯೂಟಿ ನಂತರ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ನಿಮ್ಮ ಒಂದು ಮೆಟ್ರೋ ನಿಲ್ದಾಣ ಬ್ಲಾಸ್ಟ್ ಮಾಡಬೇಕಾಗುತ್ತದೆ.

ಬೆಂಗಳೂರು: ಬೆಂಗಳೂರಿನ ಮೆಟ್ರೋ ನಿಲ್ದಾಣವನ್ನು (Metro Station Bomb Threat) ಸ್ಫೋಟಿಸುವುದಾಗಿ ಬಂದಿರುವ ಬೆದರಿಕೆ ಇಮೇಲ್‌ ಒಂದು ಬಿಎಂಆರ್‌ಸಿಎಲ್‌ನಲ್ಲಿ ಆತಂಕ ಸೃಷ್ಟಿಸಿದೆ. ನವೆಂಬರ್ 14ರ ರಾತ್ರಿ ಸುಮಾರು 11.30ಕ್ಕೆ ಬಿಎಂಆರ್‌ಸಿಎಲ್ (BMRCL) ಅಧಿಕೃತ ಇಮೇಲ್‌ಗೆ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆಯ ಸಂದೇಶ ಕಳುಹಿಸಿದ್ದ. ವ್ಯಕ್ತಿ ತಾನು ಕಳಿಸಿದ ಇ-ಮೇಲ್​ನಲ್ಲಿ ತನ್ನ ವಿಚ್ಛೇದಿತ ಪತ್ನಿಗೆ ಡ್ಯೂಟಿ ನಂತರ ಮಾನಸಿಕ ಕಿರುಕುಳ ನೀಡಿದರೆ ಮೆಟ್ರೋ ನಿಲ್ದಾಣ ಬ್ಲಾಸ್ಟ್ ಮಾಡುತ್ತೇನೆಂದು ಬರೆದಿದ್ದಾನೆ.

ಇಮೇಲ್‌ನಲ್ಲಿ, ಮೆಟ್ರೋ ಸಿಬ್ಬಂದಿಯಾದ ತನ್ನ ವಿಚ್ಛೇದಿತ ಪತ್ನಿಗೆ ಡ್ಯೂಟಿ ನಂತರ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ನಿಮ್ಮ ಒಂದು ಮೆಟ್ರೋ ನಿಲ್ದಾಣ ಬ್ಲಾಸ್ಟ್ ಮಾಡಬೇಕಾಗುತ್ತದೆ. ನಾನು ಉಗ್ರಗಾಮಿಯಂತೆ, ಅದರಲ್ಲೂ ಕನ್ನಡಿಗರ ವಿರುದ್ಧ ಎಂದು ಬೆದರಿಕೆ ಹಾಕಲಾಗಿದೆ. ಮೇಲ್ ಪರಿಶೀಲಿಸಿದ ಬಳಿಕ ಬಿಎಂಆರ್‌ಸಿಎಲ್ ಅಧಿಕಾರಿ ತಕ್ಷಣವೇ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ದೂರು ಆಧರಿಸಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಮೆಟ್ರೋ ಸ್ಫೋಟಿಸುವುದಾಗಿ ಬೆದರಿಕೆ

'If ever I come to know that your metro employees are torturing mentally to my past divorced wife, after duty hours, be careful, one of your metro station gets blasted ... I am also a terrorists liker PATRIOTIC against KANNADIGAS' ಎಂದು ಇಮೇಲ್ ನಲ್ಲಿ ವ್ಯಕ್ತಿ ಬರೆದಿದ್ದಾನೆ.

ನಮ್ಮ ಮೆಟ್ರೋ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿ ಬಿಎಂಆರ್‌ಸಿಎಲ್‌ನ ಅಧಿಕೃತ ಐಡಿಗೆ ವಂಚನೆ ಇಮೇಲ್ ಕಳುಹಿಸಿದ ವ್ಯಕ್ತಿಯನ್ನು ಗುರುತಿಸಲು ಬೆಂಗಳೂರು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಬಿಎಂಆರ್‌ಸಿಎಲ್‌ನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (Cyber security) ರತಿಕ್ ಥಾಮಸ್ ಸಲ್ಲಿಸಿದ ದೂರಿನ ಆಧಾರದ ಮೇಲೆ, ನ್ಯಾಯಾಲಯದ ನಿರ್ದೇಶನದ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಆರೋಪಿಗಳ ವಿರುದ್ಧ ಬಿಎನ್‌ಎಸ್ ಅಡಿಯಲ್ಲಿ ಸೆಕ್ಷನ್ 351(2) (ಕ್ರಿಮಿನಲ್ ಬೆದರಿಕೆ) ಮತ್ತು 351(3) (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ) ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

ಬಿಎಂಆರ್‌ಸಿಎಲ್ ಅಧಿಕಾರಿಗಳು ಈ ಇಮೇಲ್ ನ್ನು ಗಂಭೀರ ಭದ್ರತಾ ಬೆದರಿಕೆ ಎಂದು ಪರಿಗಣಿಸಿದ್ದಾರೆ. ಪೊಲೀಸರನ್ನು ಸಂಪರ್ಕಿಸುವ ಮೊದಲು ತಕ್ಷಣವೇ ಆಂತರಿಕ ವಿಚಾರಣೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಮಸೂದೆ ವಿರುದ್ಧ ರಾಷ್ಟ್ರಪತಿಗೆ ನಿಯೋಗ; ರಾಜ್ಯ ಸರ್ಕಾರ

ಮಲಯಾಳಂ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್ಕೆ: ಕೇರಳ ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ, ಪುನರ್ ಪರಿಶೀಲನೆಗೆ ಒತ್ತಾಯ

'ರಾಜಕೀಯ ದ್ವೇಷ, ಪೊಲೀಸರ ವೈಫಲ್ಯ' ಬಳ್ಳಾರಿ ಹಿಂಸಾಚಾರ ಘಟನೆಗೆ ಕಾರಣ: ಕಾಂಗ್ರೆಸ್ ಸಮಿತಿ

ಈ ಬಾರಿ ಫೆ.1ರ ಭಾನುವಾರ ಕೇಂದ್ರ ಬಜೆಟ್, ಜ. 29ಕ್ಕೆ ಆರ್ಥಿಕ ಸಮೀಕ್ಷೆ ಮಂಡನೆ!

'ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ವ್ಯಾಪಾರ ಒಪ್ಪಂದ ಹಳ್ಳ ಹಿಡಿದಿದೆ': ಲುಟ್ನಿಕ್ ಹೇಳಿಕೆ ತಳ್ಳಿಹಾಕಿದ MEA, ಹೇಳಿದ್ದೇನು?

SCROLL FOR NEXT