ಚಾಕು ಇರಿದ ಮಹಿಳೆ 
ರಾಜ್ಯ

Chikkaballapur: ಅಡ್ಡಾದಿಡ್ಡಿ ಸ್ಕೂಟಿ ಚಾಲನೆ; ಪ್ರಶ್ನಿಸಿದ ಬೈಕ್​​ ಸವಾರನಿಗೆ ಚಾಕು ಇರಿತ; ಪೊಲೀಸ್ ಠಾಣೆಯಲ್ಲೇ ಲೇಡಿ ಹೈಡ್ರಾಮಾ; Video

ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ತಮಿಳುನಾಡು ಮೂಲದ ರಿಂಬಿಕಾ ಎಂಬ ಮಹಿಳಾ ಟೆಕ್ಕಿ ಬೈಕ್ ಸವಾರ ನರಸಿಂಹ ಮೂರ್ತಿಗೆ ಚಾಕು ಇರಿದಿದ್ದಾರೆ ಎನ್ನಲಾಗಿದೆ.

ಚಿಕ್ಕಬಳ್ಳಾಪುರ: ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸ್ಕೂಟರ್ ಚಾಲನೆ ಮಾಡುತ್ತಿದ್ದನ್ನು ಪ್ರಶ್ನಿಸಿದ ಬೈಕ್ ಸವಾರನಿಗೆ ಮಹಿಳಾ ಟೆಕ್ಕಿಯೊಬ್ಬರು ಚಾಕುವಿನಿಂದ ಇರಿದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರದ ವಾಪಸಂದ್ರ ಬ್ರಿಡ್ಜ್ ಬಳಿ ಈ ಘಟನೆ ನಡೆದಿದ್ದು, ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ತಮಿಳುನಾಡು ಮೂಲದ ರಿಂಬಿಕಾ ಎಂಬ ಮಹಿಳಾ ಟೆಕ್ಕಿ ಬೈಕ್ ಸವಾರ ನರಸಿಂಹ ಮೂರ್ತಿಗೆ ಚಾಕು ಇರಿದಿದ್ದಾರೆ ಎನ್ನಲಾಗಿದೆ. ಇದರಿಂದ ನರಸಿಂಹ ಮೂರ್ತಿ ಅವರ ಕೈಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಆರೋಪಿ ಮಹಿಳೆ ರಿಂಬಿಕಾ ಇಂದು ತಮ್ಮ ತಮಿಳುನಾಡು ನೊಂದಣಿಯ ಸ್ಕೂಟಿ ಏರಿ ಚಿಕ್ಕಬಳ್ಳಾಪುರದ ಬಾಗೇಪಲ್ಲಿ ಕಡೆಗೆ ಬಂದು ವಾಪಾಸ್ ಬೆಂಗಳೂರಿನತ್ತ ತೆರಳುತ್ತಿದ್ದರು. ಈ ವೇಳೆ ಬೆಂಗಳೂರು-ಹೈದರಾಬಾದ್ ಹೈವೇಯಲ್ಲಿ ಅಡ್ಡಾದಿಡ್ಡಿಯಾಗಿ ಸ್ಕೂಟಿ ಓಡಿಸುತ್ತಿದ್ದರು.

ಈ ವೇಳೆ ಹಿಂದೆ ಬರುತ್ತಿದ್ದ ವಾಹನಗಳಿಗೆ ಅಡಚಣೆಯಾಗಿತ್ತು. ಇದೇ ವೇಳೆ ಹಿಂದೆ ಬರುತ್ತಿದ್ದ ಬೈಕ್ ಸವಾರ ನಿಖಿಲ್ ಹಾಗೂ ನರಸಿಂಹಮೂರ್ತಿ ಚಿಕ್ಕಬಳ್ಳಾಪುರದ ಸೇತುವೆ ಕೆಳಗಡೆ ಸ್ಕೂಟಿ ನಿಲ್ಲಿಸಿ ನಿಂತಿದ್ದ ರಿಂಬಿಕಾರನ್ನು ಪ್ರಶ್ನೆ ಮಾಡಿದ್ದಾರೆ.

ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಆಕ್ರೋಶಗೊಂಡ ಮಹಿಳೆ ಆಕೆ ಬಳಿ ಇದ್ದ ಫೋಲ್ಡೆಡ್ ಚಾಕುವಿನಿಂದ ನರಸಿಂಹ ಮೂರ್ತಿ ಮೇಲೆ ದಾಳಿ ಮಾಡಿಮಾಡಿದ್ದಾರೆ. ಈ ವೇಳೆ ಬೈಕ್ ಸವಾರ ನಿಖಿಲ್ ಕೈಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿದೆ. ಹಿಂಬದಿ ಸವಾರ ನರಸಿಂಹಮೂರ್ತಿಗೂ ಗಾಯವಾಗಿದೆ.

ರಿಂಬಿಕಾ ಚಾಕುವಿನಿಂದ ಅಟ್ಯಾಕ್ ಮಾಡ್ತಿದ್ದಂತೆ ನಿಖಿಲ್ ಸಹ ವಾಪಸ್​​ ಆಕೆಯ ಮೇಲೆ ಹಲ್ಲೆ ಮಾಡಿದ್ದಾರೆ. ಈ ಎಲ್ಲಾ ದೃಶ್ಯಗಳು ಸ್ಥಳೀಯ ಹೋಟೆಲ್​ವೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಹಿಳೆಯ ಹಿಡಿದ ಸ್ಥಳೀಯರು

ಇನ್ನು ಘಟನೆ ನಡೆಯುತ್ತಿದ್ದಂತೆ ಇತರೆ ವಾಹನ ಸವಾರರು, ಸ್ಥಳೀಯರು ಜಮಾಯಿಸಿ ಪೊಲೀಸರನ್ನ ಕರೆಸಿ ಆಕೆಯನ್ನ ವಶಕ್ಕೆ ನೀಡಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಯುವಕ ನಿಖಿಲ್ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ರಿಂಬಿಕಾರನ್ನ ವಿಚಾರಣೆ ನಡೆಸಿದ್ದಾರೆ.

ಯುವಕರಿಂದಲೇ ಅನುಚಿತ ವರ್ತನೆ, ಮಹಿಳೆ ಪ್ರತ್ಯಾರೋಪ

ಅಂತೆಯೇ ಮಹಿಳೆ ಕೂಡ ಯುವಕರ ವಿರುದ್ಧ ಪ್ರತ್ಯಾರೋಪ ಮಾಡಿದ್ದು, 'ಯುವಕರು ನನ್ನನ್ನ ಹಿಂಬಾಲಿಸಿಕೊಂಡು ಬಂದು ಅನುಚಿತವಾಗಿ ವರ್ತನೆ ಮಾಡಿದರು. ಅದಕ್ಕೆ ನಾನು ಚಾಕುವಿನಿಂದ ಅಟ್ಯಾಕ್ ಮಾಡಿದೆ ಎಂದು ರಿಂಬಿಕಾ ಹೇಳಿದ್ದಾರೆ.

ಠಾಣೆಯಿಂದ ತಪ್ಪಿಸಿಕೊಂಡು ಹೋಗಲು ಯತ್ನ

ಇದೇ ಸಂದರ್ಭದಲ್ಲಿ ಮಹಿಳೆ ಪೊಲೀಸ್ ಠಾಣೆಯಲ್ಲೇ ಹೈಡ್ರಾಮಾ ಮಾಡಿದ್ದು, ಪೊಲೀಸರ ತನಿಖೆಗೆ ಸಹಕರಿಸದೆ ಪೊಲೀಸ್​ ಠಾಣೆಯಿಂದ‌ ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದಾರೆ. ಮಾನಸಿಕವಾಗಿ ಸದೃಢವಾಗಿರದ ರಿಂಬಿಕಾ, ಪೊಲೀಸರಿಗೆ ಸಹಕರಿಸದೆ ಚಿತ್ರವಿಚಿತ್ರವಾಗಿ ವರ್ತಿಸುತ್ತಿದ್ದಾರೆ. ಬುದ್ಧಿವಾದ ಹೇಳಿದಕ್ಕೆ ಚಾಕು ತೆಗೆದು ಹಲ್ಲೆ ಮಾಡುವ ಮೂಲಕ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಶುಭ್ ಮನ್ ಗಿಲ್ ದಾಖಲೆಯನ್ನೇ ಹಿಂದಿಕ್ಕಿದ Rishabh Pant, ಡಬ್ಲ್ಯೂಟಿಸಿಯಲ್ಲಿ ಅತ್ಯಧಿಕ ರನ್, ಅಗ್ರಸ್ಥಾನ