ಕಲಬುರಗಿ: ಮೈಸೂರಿನ ಖಾಸಗಿ ಕಾರ್ಯಕ್ರಮದಲ್ಲಿ 'ಕಾಮಿಡಿ ಕಿಲಾಡಿಗಳು' ಖ್ಯಾತಿಯ ನಟಿ ನಯನಾ ದಲಿತ ಸಮುದಾಯದ ವಿರುದ್ಧ ಅವಾಚ್ಯ ಪದ ಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ದೂರು ದಾಖಲಿಸಿದ್ದಾರೆ. ದಲಿತ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ ಭಂಡಾರಿ ಎಂಬುವರು ಕಲಬುರಗಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಯನಾ ವಿರುದ್ಧ ದೂರು ನೀಡಿದ್ದು ಈ ಸಂಬಂಧ ನಟಿ ವಿರುದ್ಧ ಅಟ್ರಾಸಿಟಿ ಕಾಯ್ದೆಯಡಿ ಎಫ್ಐಆರ್ ದಾಖಲಾಗಿದೆ. ನಯನಾ ಹೇಳಿಕೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದ್ದು ಇದಕ್ಕೆ ನಟಿ ಕ್ಷಮೆ ಕೂಡ ಕೇಳಿದ್ದರು. ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದರಿಂದ ನಟಿಯನ್ನು ಬಂಧಿಸುವ ಸಾಧ್ಯತೆ ಇದೆ.