ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಕೈಯಲ್ಲಿ ಮೊಬೈಲ್, ಟಿವಿ ವ್ಯವಸ್ಥೆ ಮದ್ಯದ ಪಾರ್ಟಿ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ನಟ ಹಾಗೂ ದರ್ಶನ್ ಆಪ್ತ ಧನ್ವೀರ್ ವಿರುದ್ಧ ವಿಡಿಯೋ ಲೀಕ್ ಆರೋಪ ಕೇಳಿಬಂದಿತ್ತು. ಹೀಗಾಗಿ ಪೊಲೀಸರು ಧನ್ವೀರ್ ವಿಚಾರಣೆ ನಡೆಸಿದ್ದರು. ಮೊದ ಮೊದಲು ನನಗೆ ಏನು ಗೊತ್ತಿಲ್ಲ ಎನ್ನುತ್ತಿದ್ದ ಧನ್ವೀರ್ ಇದೀಗ ದರ್ಶನ್ ಪತ್ನಿ ವಿಜಯಲಕ್ಷ್ಮೀ ಹೆಸರನ್ನು ಹೇಳಿದ್ದಾರೆ. ಈಗ ಈ ಪ್ರಕರಣದಲ್ಲಿ ವಿಜಯಲಕ್ಷ್ಮೀ ಅವರು ತನಿಖೆ ಎದುರಿಸುವ ಸಾಧ್ಯತೆ ಇದೆ.