ಬೇಲಿ 
ರಾಜ್ಯ

ಹೆಚ್ಚುತ್ತಿರುವ ಮಾನವ-ಪ್ರಾಣಿ ಸಂಘರ್ಷ: ನಾಗರಹೊಳೆಯಲ್ಲಿ ಚೈನ್‌ ಲಿಂಕ್‌ ಮೆಶ್‌ ಅಳವಡಿಕೆ..!

ಮೈಸೂರಿನ ಎಚ್‌ಡಿ ಕೋಟೆ ತಾಲ್ಲೂಕಿನ ನಾಗರಹೊಳೆ ಹುಲಿ ಮೀಸಲು ಪ್ರದೇಶದಲ್ಲಿ 13 ಕಿ.ಮೀ. ಉದ್ದಕ್ಕೂ ಚೈನ್ ಲಿಂಕ್‌ ಮೆಶ್‌ ಅಳವಡಿಸಲು ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ.

ಮೈಸೂರು: ಹೆಚ್ಚುತ್ತಿರುವ ಮಾನವ-ವನ್ಯಜೀವಿ ಸಂಘರ್ಷವನ್ನು ಪರಿಹರಿಸುವ ಪ್ರಯತ್ನದಲ್ಲಿ, ಅರಣ್ಯ ಅಧಿಕಾರಿಗಳು ಮೈಸೂರಿನ ಎಚ್‌ಡಿ ಕೋಟೆ ತಾಲ್ಲೂಕಿನ ನಾಗರಹೊಳೆ ಹುಲಿ ಮೀಸಲು ಪ್ರದೇಶದಲ್ಲಿ 13 ಕಿ.ಮೀ. ಉದ್ದಕ್ಕೂ ಚೈನ್ ಲಿಂಕ್‌ ಮೆಶ್‌ ಅಳವಡಿಸಲು ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ.

ಈ ತಡೆಗೋಡೆಯನ್ನು ಪ್ರಸ್ತುತ ಪ್ರಾಯೋಗಿಕವಾಗಿ ನಿರ್ಮಿಸಲಾಗುತ್ತಿದ್ದು, ಈ ಪ್ರಯೋಗ ಯಶಸ್ವಿಯಾದರೆ, ಮತ್ತಷ್ಟು ವಿಸ್ತರಿಸಿ 10 ಅಡಿ ಎತ್ತರಕ್ಕೆ ಏರಿಸಿ ಅಳವಡಿಸಲಾಗುವುದು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಯೋಜನೆಯು ಆರಂಭಿಕ ಹಂತದಲ್ಲಿದ್ದರೂ, ಜಾಲರಿ ಬೇಲಿ ಬಲವಾದ ಭೌತಿಕ ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ, ಕಾಡು ಪ್ರಾಣಿಗಳು ಜನರು ಮತ್ತು ಜಾನುವಾರುಗಳ ಸಂಪರ್ಕಕ್ಕೆ ಬರದಂತೆ ತಡೆಯುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದು ಸಂಘರ್ಷ ನಿರ್ವಹಣಾ ತಂತ್ರದ ಭಾಗವಾಗಿದ್ಜು. ಈ ಪ್ರಾಯೋಗಿಕ ಹಂತವು ತಡೆಗೋಡೆಯ ಕುರಿತು ಭವಿಷ್ಯದ ನಿರ್ಧಾರಗಳನ್ನು ಮಾರ್ಗದರ್ಶನ ನೀಡುತ್ತದೆ ಎಂದು ಆರ್‌ಎಫ್‌ಒ ಸಿದ್ದರಾಜು ಅವರು ತಿಳಿಸಿದರು.

ಚೈನ್-ಲಿಂಕ್ ಮೆಶ್ ಅಳವಡಿಕೆ ಸಮಾರಂಭದಲ್ಲಿ ಭಾಗವಹಿಸಿದ್ದ ಎಚ್‌ಡಿ ಕೋಟೆ ಶಾಸಕ ಅನಿಲ್ ಚಿಕ್ಕಮಾದು, ಈ ಕ್ರಮವು ಮನುಷ್ಯ-ಪ್ರಾಣಿ ಸಂಘರ್ಷವನ್ನು ಪರಿಹರಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT